ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು (Medical Seat) ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1,122 ಸೀಟುಗಳು ದೊರೆಯಲಿವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ (Sharan Prakash Patil) ತಿಳಿಸಿದ್ದಾರೆ.
ಶನಿವಾರ ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ನಮ್ಮ ರಾಜ್ಯ ವೈದ್ಯಕೀಯ ಕ್ಷೇತ್ರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದರು. ಇದನ್ನೂ ಓದಿ: ಜಿ.ಟಿ.ದೇವೇಗೌಡ್ರು ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ನಮ್ಮ ಅಭ್ಯಂತರವಿಲ್ಲ: ಸಾ.ರಾ.ಮಹೇಶ್ ಟಾಂಗ್
ರಾಜ್ಯಕ್ಕೆ ದೊರೆತಿರುವ ಹೆಚ್ಚುವರಿ ಸೀಟುಗಳು ಕೊಪ್ಪಳ, ಗದಗ, ಚಾಮರಾಜನಗರ, ಕಾರವಾರ, ಹಾವೇರಿ ಸೇರಿ ಇತರೆ ಜಿಲ್ಲೆಗಳಿಗೆ ದೊರೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿವೋರ್ಸ್ ಬಳಿಕವೂ ಹಳೆಯ ನೆನಪು ಉಳಿಸಿಕೊಂಡ ಮೌನಿ ರಾಯ್ – ಮದುವೆ ಪೋಸ್ಟ್ ಮತ್ತೆ ವೈರಲ್!
ಪದವಿಪೂರ್ವ ಸೀಟುಗಳಿಗೆ ಕೇಂದ್ರ ಸರ್ಕಾರದಿಂದ 495 ಕೋಟಿ ರೂ. ಅನುದಾನ ಸಿಗಲಿದೆ. ಅದೇ ರೀತಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳಿಗೆ 541 ಕೋಟಿ ರೂಪಾಯಿ ಅನುದಾನ ಸಿಗಲಿದೆ ಎಂದು ಡಾ. ಪಾಟೀಲ್ ವಿವರಿಸಿದರು. ಇದನ್ನೂ ಓದಿ: ಆನೇಕಲ್ ಬಳಿ ಕೆರೆಯಲ್ಲಿ ಮಾನವ ಬುರುಡೆ, ಮೂಳೆಗಳು ಪತ್ತೆ
ಕೇಂದ್ರ ಮತ್ತು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಮೇ 15ರಂದು ಅಂತಿಮ ಮುದ್ರೆ ಹಾಕಿದೆ. ಒಟ್ಟಾರೆಯಾಗಿ ರಾಜ್ಯಕ್ಕೆ 1,090 ಕೋಟಿ ರೂ. ದೊರೆಯಲಿದೆ ಎಂದು ಹೇಳಿದರು. ಇದನ್ನೂ ಓದಿ: ಮೋದಿ ಸಲಹೆ ಪಾಲಿಸ್ತೀನಿ.. ರೈಲು, ಬಸ್‌ನಲ್ಲೇ ಓಡಾಡ್ತೀನಿ: ಕೇಂದ್ರ ಸಚಿವ ಸೋಮಣ್ಣ
ಒಂದು ಸಾವಿರ ಮೆಡಿಕಲ್ ಸೀಟ್ ಒಂದು ರಾಜ್ಯಕ್ಕೆ ಸಿಕ್ಕಿರುವುದು ದಾಖಲೆಯಾಗಿದೆ. ಕರ್ನಾಟಕದ ಸಾಧನೆಗೆ ಇದು ಪೂರಕವಾದ ಸಾಕ್ಷಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: 20 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ 4 ವರ್ಷದ ಬಾಲಕನ ರಕ್ಷಣೆ
ವೈದ್ಯ ಕ್ಷೇತ್ರದಲ್ಲಿ ಸಾಧನೆ ಮಾಡುವವರಿಗೆ ಅತಿ ಹೆಚ್ಚು ಸಾಧನೆ ಮಾಡಲು ಕರ್ನಾಟಕದಲ್ಲಿ ಈಗ ವಿಫುಲ ಅವಕಾಶಗಳು ದೊರೆತಂತಾಗುತ್ತದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಗೆಲುವಿನ ನಡುವೆ ಶಾಕ್ – LSG ನಾಯಕ ರಿಷಭ್ ಪಂತ್‌ಗೆ 12 ಲಕ್ಷ ದಂಡ

