ಬೆಂಗಳೂರು/ಮಂಡ್ಯ: ಕಾವೇರಿಗಾಗಿ ನಾಳೆ ಮಂಡ್ಯ (Mandya) ಬಂದ್ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ ಅಂತ ಗೃಹ ಸಚಿವ ಪರಮೇಶ್ವರ್ (G Parameshwar) ತಿಳಿಸಿದ್ದಾರೆ.
ಮಂಡ್ಯ ಬಂದ್ (Mandya Bandh) ವಿಚಾರವಾಗಿ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕೆಆರ್‌ಎಸ್ (KSR), ಮಂಡ್ಯ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ (Police Protection) ನಿಯೋಜನೆ ಮಾಡಲಾಗಿದೆ. ಹೆಚ್ಚುವರಿ ಕೆಎಸ್‌ಆರ್‌ಪಿ, ಆರ್‌ಎಎಫ್ ತುಕಡಿಯನ್ನ ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಪ್ರತಿಭಟನೆ ಮಾಡೂರು ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು. ಒಂದು ವೇಳೆ ಆ ರೀತಿ ಮಾಡಿದ್ರೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಬಂದ್, ಪ್ರತಿಭಟನೆ ಮಾಡೋದು ಅವರ ಹಕ್ಕು. ಪ್ರತಿಭಟನೆ ಬಗ್ಗೆ ನಮಗೇನು ತಕರಾರು ಇಲ್ಲ. ರಾಜ್ಯದ ಹಿತ ಕಾಪಾಡಬೇಕು ನೀರು ಬಿಡಬಾರದು ಅಂತ ಹೇಳಿ ಸಂಘಟನೆಗಳು ಪ್ರತಿಭಟನೆ ಮಾಡ್ತಿದ್ದಾರೆ. ಯಾರು ಬೇಕಾದ್ರು ಪ್ರತಿಭಟನೆ ಮಾಡಬಹುದು. ಅದರಲ್ಲಿ ತಪ್ಪಿಲ್ಲ. ಆದರೆ ಯಾವುದೇ ರೀತಿಯಲ್ಲಿ ಸಾರ್ವಜನಿಕ ಆಸ್ತಿ ನಾಶ ಮಾಡೋದು, ಜನ ಸಮುದಾಯಕ್ಕೆ ತೊಂದರೆ ಮಾಡೋದು ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆ ಮೂಲಕ ಕಾನೂನು ಬಾಹಿರ ಚಟುವಟಿಕೆಗಳನ್ನ ಮಾಡಬಾರದು. ಒಂದು ವೇಳೆ ಅಂತಹ ಘಟನೆಗಳು ಕಂಡುಬಂದರೆ ಅದನ್ನ ನಿಯಂತ್ರಣ ಮಾಡಲು ಪೊಲೀಸ್ ಇಲಾಖೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯುಪಿ ರೈಲಿನಲ್ಲಿ ಮಹಿಳಾ ಪೊಲೀಸ್ ಮೇಲೆ ದಾಳಿ ಮಾಡಿದ್ದ ಆರೋಪಿಯನ್ನು ಎನ್‌ಕೌಂಟರ್ ನಡೆಸಿ ಹತ್ಯೆ
ಇನ್ನೂ ಸುಪ್ರೀಂ (Supreme Court) ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಬಗ್ಗೆ ಇವತ್ತಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುತ್ತೇವೆ. ಸುಗ್ರಿವಾಜ್ಞೆ ತರೋ ವಿಚಾರದ ಬಗ್ಗೆಯೂ ಚರ್ಚೆ ನಡೆಯಬಹುದು. ಸಿಎಂ ಮತ್ತು ನೀರಾವರಿ ಸಚಿವರು ದೆಹಲಿಗೆ ಹೋಗಿ ಬಂದಿದ್ದಾರೆ. ಎಲ್ಲಾ ವಿಚಾರಗಳ ಬಗ್ಗೆ ಕ್ಯಾಬಿನೆಟ್‌ನಲ್ಲಿ ಬ್ರೀಫ್ ಮಾಡೋ ಸಾಧ್ಯತೆ ಇದೆ. ಇವತ್ತು ಕ್ಯಾಬಿನೆಟ್ ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದರು. ಇದನ್ನೂ ಓದಿ: ಇಸ್ಲಾಮಿಕ್ ಪ್ರಾರ್ಥನೆ ಬಳಿಕ ಹಂದಿ ಮಾಂಸ ಸೇವನೆ; ಟಿಕ್‌ಟಾಕ್ ಸ್ಟಾರ್‌ಗೆ 2 ವರ್ಷ ಜೈಲು
ಇವತ್ತು ಕೂಡಾ ನೀರಿನ ಪ್ರಮಾಣ ಕೆಆರ್‌ಎಸ್‌ನಲ್ಲಿ ಕಡಿಮೆ ಇದೆ. ಒಳ ಹರಿವು ಕಡಿಮೆ ಇದೆ. ನೀರಿನ ಮಟ್ಟ ಹೆಚ್ಚುತ್ತಿಲ್ಲ ನಮ್ಮಲ್ಲಿ ನೀರಿಲ್ಲ ಅಂತ ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲಾಗಿದೆ. ಆದರೂ ಸುಪ್ರೀಂ ಕೋರ್ಟ್ ಬೋರ್ಡ್ ಸೂಚನೆಯಂತೆ ನೀರು ಬಿಡಲು ಹೇಳಿದೆ. ಹೀಗಾಗಿ ಇವತ್ತಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ ಚರ್ಚೆ ಬಳಿಕ ಯಾವ ತೀರ್ಮಾನ ಮಾಡೋದು ಅಂತ ನಿರ್ಧಾರ ಮಾಡಲಾಗುತ್ತದೆ ಎಂದರು. ಇದನ್ನೂ ಓದಿ: ತೀವ್ರ ಆಕ್ರೋಶದ ನಡುವೆಯೂ KRS, ಕಬಿನಿಯಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರು
Web Stories