ನವದೆಹಲಿ: ಗಣಿಗಾರಿಕೆ ಮೇಲೆ ಕರ್ನಾಟಕ ಸರ್ಕಾರ ಹಲವು ಪಟ್ಟು ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಹಿನ್ನೆಲೆಯಲ್ಲಿ ಗಣಿ ಮತ್ತು ಉಕ್ಕು ವಲಯಗಳ ಮೇಲೆ ಬೀರಬಹುದಾದ ಪ್ರತಿಕೂಲಕರ ಪರಿಣಾಮಗಳ ಬಗ್ಗೆ ಕೇಂದ್ರ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy), ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಅವರೊಂದಿಗೆ ಮಹತ್ವದ ಸಭೆ ನಡೆಸಿದರು.
ನವದೆಹಲಿಯ (Newdelhi) ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಗುರುವಾರ (ಜ.9) ನಡೆದ ಸಭೆಯಲ್ಲಿ ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪೌಂಡ್ರಿಕ್, ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮದ ಅಧ್ಯಕ್ಷ ಅಮಿತವ್ ಮುಖರ್ಜಿ, ಕಾನೂನು ಸಚಿವಾಲಯದ ಅಧಿಕಾರಿಗಳು ಹಾಗೂ ಹಲವು ಗಣಿ ಕಂಪನಿಗಳ ಉನ್ನತಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.ಇದನ್ನೂ ಓದಿ: ತಿರುಪತಿಯಲ್ಲಿ ಕಾಲ್ತುಳಿತ ದುರಂತ – ಬೆಂಗಳೂರಿನ ಟಿಟಿಡಿ ದೇವಸ್ಥಾನದ ಭದ್ರತೆ ಪರಿಶೀಲಿಸಿದ ಪೊಲೀಸರು
Advertisement
Advertisement
ರಾಜ್ಯ ಸರ್ಕಾರ ಹೆಚ್ಚುವರಿ ತೆರಿಗೆ ವಿಧಿಸುತ್ತಿರುವ ಪರಿಣಾಮ ದೇಶೀಯ ಉಕ್ಕು ಮತ್ತು ಗಣಿ ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಒಟ್ಟಾರೆ ಸಾಧಕ-ಬಾಧಕಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಜೊತೆಗೆ ಸಭೆಯಲ್ಲಿ ಕೇಂದ್ರದ ಉಕ್ಕು ಸಚಿವರು ಹಲವು ಮಹತ್ವದ ಅಂಶಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. 2047ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಾಕಾರ ಮಾಡುವ ಗುರಿ ಹೊಂದಿದ್ದಾರೆ. ಜಗತ್ತಿನ ಮೂರನೇ ಬೃಹತ್ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮುವ ಬಗ್ಗೆ ಪ್ರಧಾನಿಗಳು ನಿರ್ಣಾಯಕ ಹೆಜ್ಜೆಗಳನ್ನು ಇಡುತ್ತಿದ್ದಾರೆ ಎಂದರು.
Advertisement
Advertisement
ಮುಖ್ಯವಾಗಿ 2030ರ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿಯನ್ನು ನಿಗದಿ ಮಾಡಿದ್ದಾರೆ. ಇಂತಹ ಮಹತ್ವಾಕಾಂಕ್ಷೆಯ ಗುರಿಗಳು ನಮ್ಮ ಮುಂದೆ ಇರುವಾಗ ಗಣಿ ಮತ್ತು ಉಕ್ಕು ಕ್ಷೇತ್ರದಲ್ಲಿರುವ ಅಡೆತಡೆಗಳನ್ನು ನಿವಾರಣೆ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಕುಮಾರಸ್ವಾಮಿ ಅವರ ಮಾತಿಗೆ ದನಿಗೂಡಿಸಿದ ಸಚಿವ ಮೇಘವಾಲ್, ಪ್ರಧಾನಿಗಳ ಕನಸು ನನಸು ಮಾಡಬೇಕಾದರೆ ನಾವು ಒಮ್ಮತ ಹೆಜ್ಜೆಗಳನ್ನು ಇಟ್ಟು ಕ್ರಮ ವಹಿಸಬೇಕಾಗಿದೆ ಎಂದರು.ಇದನ್ನೂ ಓದಿ: ಶರಣಾದ ನಕ್ಸಲರ ವಿರುದ್ಧ ಎನ್‍ಐಎ ತನಿಖೆಗೆ ಬಿಜೆಪಿ ಆಗ್ರಹ
: