ಬೆಂಗಳೂರು: ಬೆದರಿಕೆ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು ದಾಖಲಿಸಿದ್ದಾರೆ.
ಹೆಚ್‌ಡಿಕೆ, ನಿಖಿಲ್ ಕುಮಾರಸ್ವಾಮಿ ಮತ್ತು ಅವರ ಆಪ್ತ ಸುರೇಶ್ ಬಾಬು ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಸ್‌ಐಟಿಯಲ್ಲಿರುವ ಎಡಿಜಿಪಿ ಚಂದ್ರಶೇಖರ್ (M.Chandrashekhar) ದೂರು ನೀಡಿದ್ದಾರೆ. ದೂರನ್ನು ಆಧರಿಸಿ ಪೊಲೀಸರು ಎನ್‌ಸಿಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆ ಆರೋಪಕ್ಕೆ ಪತ್ರದ ಮೂಲಕ ಕೌಂಟರ್ ಕೊಟ್ಟ ಎಡಿಜಿಪಿ ಚಂದ್ರಶೇಖರ್
Advertisement
Advertisement
ಲೋಕಾಯುಕ್ತ ವಿಶೇಷ ತನಿಖಾ ದಳ ಎಡಿಜಿಪಿ ಎಂ.ಚಂದ್ರಶೇಖರ್ ಭ್ರಷ್ಟ ಅಧಿಕಾರಿ. ಆತನ ಮೂಲಕ ರಾಜ್ಯಪಾಲರ ಕಚೇರಿ ಸಿಬ್ಬಂದಿಯ ತನಿಖೆಗೆ ಕಾಂಗ್ರೆಸ್ ಸರ್ಕಾರ ಅನುಮತಿಯನ್ನು ಕೇಳಿಸಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಟೀಕಿಸಿದ್ದರು.
Advertisement
Advertisement
ಕೇಂದ್ರ ಸಚಿವರ ಟೀಕೆಗೆ ಎಂ.ಚಂದ್ರಶೇಖರ್ ತಿರುಗೇಟು ನೀಡಿದ್ದರು. ಅಂದಿನಿಂದ ಹೆಚ್‌ಡಿಕೆ ಮತ್ತು ಚಂದ್ರಶೇಖರ್ ವಿರುದ್ಧ ಫೈಟ್ ನಡೆಯುತ್ತಿದೆ. ಇದನ್ನೂ ಓದಿ: ಈ ಬ್ಲ್ಯಾಕ್‌ಮೇಲರ್ ಹೇಗೆ ಲೂಟಿ ಮಾಡಿದ್ದಾನೆ ಅಂತಾ ಹೇಳಿದ್ದೀನಿ: ಎಡಿಜಿಪಿ ಚಂದ್ರಶೇಖರ್ ವಿರುದ್ಧ ಹೆಚ್‌ಡಿಕೆ ಕಿಡಿ