ನವದೆಹಲಿ: ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತ್ನಿ ಎಂದು ಕರೆದಿದ್ದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಕೋರಿದ್ದಾರೆ.
ಅಧೀರ್ ರಂಜನ್ ಚೌಧರಿ ಅವರು, ತಮ್ಮ ಪಕ್ಷದಿಂದ ನಡೆಸುತ್ತಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಎನ್ನುವ ಬದಲು ರಾಷ್ಟ್ರಪತ್ನಿ ಎಂದಿದ್ದರು. ಈ ಬಗ್ಗೆ ಆಡಳಿತ ಪಕ್ಷದವರು ಸೋನಿಯಾ ಗಾಂಧಿ ಹಾಗೂ ಅಧೀರ್ ರಂಜನ್ ಚೌಧರಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮಾತನಾಡಿದ ಅಧೀರ್ ರಂಜನ್ ಚೌಧರಿ, ದ್ರೌಪದಿ ಮುರ್ಮು ಅವರನ್ನು ಖುದ್ದಾಗಿ ಭೇಟಿಯಾಗುವುದಾಗಿ ಹಾಗೂ ಅವರಿಗೆ ನೋವಾಗಿದ್ದರೆ ಕ್ಷಮೆ ಕೇಳುವುದಾಗಿ ತಿಳಿಸಿದ್ದಾರೆ.
Advertisement
Advertisement
ರಾಷ್ಟ್ರಪತಿ ಅವರನ್ನು ಅವಮಾನಿಸುವ ಯೋಚನೆಯೂ ಇರಲಿಲ್ಲ. ಅಧ್ಯಕ್ಷರಿಗೆ ನೋವಾಗಿದ್ದರೆ ನಾನೇ ಖುದ್ದು ಭೇಟಿಯಾಗಿ ಕ್ಷಮೆ ಕೇಳುತ್ತೇನೆ. ಅವರು ಬೇಕಾದರೆ ನನ್ನನ್ನು ಗಲ್ಲಿಗೇರಿಸಬಹುದು. ಶಿಕ್ಷೆಗೆ ನಾನು ಸಿದ್ಧನಿದ್ದೇನೆ. ಆದರೆ ಸೋನಿಯಾ ಗಾಂಧಿ ಅವರನ್ನು ವಿನಃ ಕರೆತರಲಾಗುತ್ತಿದೆ ಎಂದರು.
Advertisement
ಎನ್‍ಡಿಎ ಸರ್ಕಾರ ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಹೆಸರಿಸಿದಾಗಿನಿಂದಲೂ ಕಾಂಗ್ರೆಸ್, ಮುರ್ಮು ಅವರನ್ನು ದುರುದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡಿದೆ. ಮತ್ತು ಕಾಂಗ್ರೆಸ್‍ನ ನಾಯಕರು ಅವರನ್ನು ಕೈಗೊಂಬೆ ಮತ್ತು ರಬ್ಬರ್ ಸ್ಟಾಂಪ್ ಎಂದು ಕರೆದಿದ್ದರು ಎಂದು ಬಿಜೆಪಿ ಆರೋಪಿಸಿತ್ತು.
Advertisement
ಈ ಬಗ್ಗೆ ಸಚಿವೆ ಸ್ಮೃತಿ ಇರಾನಿ ಕಿಡಿಕಾರಿದ್ದು, ದ್ರೌಪದಿ ಮುರ್ಮು ಅವರು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಆಯ್ಕೆಯಾದ ನಂತರವೂ ಈ ವಾಗ್ದಾಳಿಗಳು ನಿಲ್ಲುವಂತೆ ಕಾಣುತ್ತಿಲ್ಲ. ಚೌಧರಿಯವರ ಈ ಹೇಳಿಕೆಯು ಮುರ್ಮು ಅವರು ಪ್ರತಿನಿಧಿಸುವ ಶ್ರೀಮಂತ ಬುಡಕಟ್ಟು ಪರಂಪರೆಗೆ ಮತ್ತು ಕಠಿಣ ಪರಿಶ್ರಮದ ಮೂಲಕ ಮೇಲೆ ಬರುವ ಬಡವರಿಗೆ ಮಾಡುವ ಅವಮಾನವಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಪಾಪಿಗೂ ಭವಿಷ್ಯವಿದೆ – ಅತ್ಯಾಚಾರಿಗೆ ಗಲ್ಲು ಶಿಕ್ಷೆ ವಿಧಿಸಲು ನಿರಾಕರಿಸಿದ ಸುಪ್ರೀಂ
ಭಾರತದ ಮೊದಲ ಬುಡಕಟ್ಟು ಜನಾಂಗದಿಂದ ರಾಷ್ಟ್ರಪತಿಯಾಗಿರುವ ದ್ರೌಪದಿ ಮುರ್ಮು ಅವರು ಹೋರಾಟಗಳನ್ನು ನಡೆಸಿಕೊಂಡು ಬಂದಂತವರು. ಮತ್ತು ಪಂಚಾಯಿತಿಯಿಂದ ಸಂಸತ್ತಿನವರೆಗೆ ದೇಶದ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತಾರೆ. ಅಧ್ಯಕ್ಷೆ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಪದೇ ಪದೆ ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಎಂದು ಸ್ಮೃತಿ ಇರಾನಿ ಆರೋಪಿಸಿದ್ದರು.
ಇದಲ್ಲದೆ ಸದನದ ಒಳಗೂ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡ ಸ್ಮೃತಿ ಇರಾನಿ, ಸೋನಿಯಾ ಗಾಂಧಿ ಅವರೇ, ನೀವು ದ್ರೌಪದಿ ಮುರ್ಮು ಅವರ ಅವಮಾನವನ್ನು ಅನುಮೋದಿಸಿರುವಿರಿ. ಅತ್ಯುನ್ನತ ಸಾಂವಿಧಾನಿಕ ಹುದ್ದೆಯಲ್ಲಿ ಮಹಿಳೆಯನ್ನು ಅವಮಾನಿಸಲು ಸೋನಿಯಾ ಗಾಂಧಿ ಅವರು ಅನುಮತಿ ನೀಡಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ನಡೆಸಲು ನಾವು ಸಿದ್ಧ: ಆರ್. ಅಶೋಕ್