ಮಂಡ್ಯ: ಸೀಳು ತುಟಿಯಿಂದ ಬಳಲುತ್ತಿರುವ ಮಕ್ಕಳು, ಪುರುಷರು ಮತ್ತು ಮಹಿಳೆಯರಿಗೆ ಉಚಿತ ಶಸ್ತ್ರಚಿಕಿತ್ಸಾ ಶಿಬಿರವನ್ನು ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವನ್ನು ಆಯೋಜಿಸಲಾಗಿದೆ.
ಇಂದಿನಿಂದ 12 ದಿನಗಳ ಕಾಲ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಜಿ ನಗರದ ಆದಿಚುಂಚನಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಈ ಉಚಿತ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಇಂದು ಈ ಶಿಬಿರಕ್ಕೆ ಆದಿಚುಂಚನಗಿರಿ ಮಠದ ಶ್ರೀಗಳಾದ ನಿರ್ಮಲಾನಂದನಾಥ ಸ್ವಾಮೀಜಿಗಳು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ಈ ಶಿಬಿರಕ್ಕೆ ಸೀಳು ತುಟಿ, ಅಂಗುಳ ಹಾಗೂ ಸುಟ್ಟ ಗಾಯಗಳಿಂದ ಉಂಟಾದವರು 144 ಮಂದಿ ಭಾಗಿಯಾಗಿದ್ದಾರೆ. ಇವರಿಗೆ ಅಮೆರಿಕಾದ ರೋಟೋ ಪ್ಲಾಸ್ಟ್ ಇಂಟರ್ ನ್ಯಾಷನಲ್‍ನ 30 ಮಂದಿ ತಜ್ಞ ವೈದ್ಯರ ತಂಡ ಶಸ್ತ್ರ ಚಿಕಿತ್ಸೆ ಮಾಡಲಿದೆ.
Advertisement
ಈ ಶಿಬಿರದಲ್ಲಿ ಭಾಗಿಯಾದವರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಜೊತೆಗೆ ಉಚಿತವಾಗಿ ಇವರಿಗೆ ಔಷಧಿಗಳನ್ನು ಸಹ ನೀಡಲಾಗುತ್ತದೆ. ದೇಶದಲ್ಲಿ ಸೀಳು ತುಟಿಗಳ ಮಕ್ಕಳ ಸಂಖ್ಯೆಯನ್ನು ತಡೆಯಬೇಕು ಎಂಬ ಉದ್ದೇಶದಿಂದ ಆದಿಚುಂಚನಗಿರಿ ಮಠ ಈ ಶಿಬಿರವನ್ನು ನಡೆಸುತ್ತಿದೆ. ಸೀಳು ತುಟಿಯ ಮಕ್ಕಳಿಗೆ ಹೊಸ ಜೀವನ ನೀಡಬೇಕು ಎಂದು ಆದಿಚುಂಚನಗಿರಿ ಮಠದ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯ ಅವರ ಆಸೆಯಾಗಿತ್ತು. ಹೀಗಾಗಿ ಪ್ರತಿ ವರ್ಷ ಈ ಶಿಬಿರವನ್ನು ಮಾಡಲಾಗುತ್ತಿದೆ.
Advertisement