ಬೆಂಗಳೂರು: ನನ್ನ ಅವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ರಾಜಕೀಯ ನಾಯಕರ ಹೇಳಿಕೆ ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿದೆ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿ ತನ್ನ ಮೇಲೆ ಬಂದಿರುವ ಆರೋಪಗಳಿಗೆ ಕುಮಾರಸ್ವಾಮಿ ಉತ್ತರ ನೀಡಿದ್ದಾರೆ.
Advertisement
ನನ್ನ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 29, 2019
Advertisement
ಟ್ವೀಟ್‍ನಲ್ಲಿ ಏನಿದೆ?

ಈ ಪ್ರಕರಣದಲ್ಲಿ ಅನಗತ್ಯವಾಗಿ ನನ್ನ ಹೆಸರು ಪ್ರಸ್ತಾಪಿಸಲಾಗಿದೆ. ಸಂಭವಿಸದ ತಪ್ಪೊಂದಕ್ಕೆ ಅಶೋಕ್ ಅವರು ಎಲ್ಲರಿಗಿಂತಲೂ ಮುಂದೆ ಹೋಗಿ ಕ್ಷಮೆ ಕೇಳಿದ್ದಾರೆ. ಇದರಿಂದ ಅವರಿಗೇನು ಲಾಭವೋ ಗೊತ್ತಿಲ್ಲ. ಅವರ ಆತುರಕ್ಕೆ ಮರುಕವಿದೆ. ಅದೇ ಹೊತ್ತಲ್ಲೇ ಶ್ರೀಗಳಿಗಾಗುತ್ತಿರುವ ಬೇಸರಕ್ಕೆ ಅತೀವ ನೋವಿದೆ.

ನಿರ್ಮಲಾನಂದರು ನನಗೆ ನೈತಿಕ ಬಲವಾಗಿದ್ದವರು, ತಮ್ಮ ಸಾಮಾಜಿಕ ಕಾರ್ಯಗಳ ನೆರಳಲ್ಲಿ ನನಗೆ ಮಾರ್ಗದರ್ಶನ ಮಾಡಿದವರು, ನನಗಾಗಿ ಕಾಲಭೈರವನಲ್ಲಿ ಪ್ರಾರ್ಥಿಸಿದವರು. ಅವರ ವಿಚಾರದಲ್ಲಿ ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ? ಖಂಡಿತ ಇಲ್ಲ.
ವಿಜಯೇಂದ್ರ ಕಿಡಿ:
ಸ್ವಾರ್ಥ, ಅಧಿಕಾರಕ್ಕಾಗಿ ಎಷ್ಟು ಕೀಳುಮಟ್ಟಕ್ಕೆ ಇಳಿಯಬಹುದು ಎನ್ನುವುದರಲ್ಲಿ ಕುಮಾರಸ್ವಾಮಿಯವರಿಗೆ ಸರಿಸಾಟಿಯಿಲ್ಲ. ಇಡೀ ದೇಶವೇ ಗೌರವಿಸುವ ಶ್ರೀಗಳ ಫೋನ್ ಕದ್ದಾಲಿಸಿದ್ದು ಮಾತ್ರವಲ್ಲದೆ, ಸ್ಮಗ್ಲರ್ ಗಳ ಪಟ್ಟಿಯಲ್ಲಿ ಸೇರಿಸಿ, ಅಕ್ಷಮ್ಯ ಅಪರಾಧ ಎಸಗಿದ್ದಾರೆ. ಅವರಲ್ಲಿ ಸ್ವಲ್ಪವಾದರೂ ನೈತಿಕತೆ ಉಳಿದಿದ್ದರೆ ಮೊದಲು ಗುರುಗಳ ಕ್ಷಮೆ ಕೇಳಲಿ ಎಂದು ಸಿಎಂ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.