ಬೆಂಗಳೂರು: ಬೀದಿಯಲ್ಲಿ ಮಲಗಿದ್ದ ನಾಯಿಗಳ ಮೇಲೆ ಉದ್ದೇಶಪೂರ್ವಕವಾಗಿಯೇ ಕಾರು ಹತ್ತಿಸಿ ವಿಕೃತಿ ಮೆರೆದಿದ್ದ, ಉದ್ಯಮಿ, ಮಾಜಿ ಸಂಸದ ದಿ. ಆದಿಕೇಶವುಲು ನಾಯ್ಡು ಮೊಮ್ಮಗ ಆದಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಟಿ ರಮ್ಯಾ ಈ ಪ್ರಕರಣ ಕುರಿತಾಗಿ ತನಿಖೆ ಕೈಗೊಳ್ಳಿ ಎಂದು ಟ್ವೀಟ್ ಮಾಡಿ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಬೆನ್ನಲ್ಲೆ ನಾಯಿ ಮೇಲೆ ಕಾರು ಹರಿಸಿ ಕೌರ್ಯ ಮೆರೆದಿದ್ದ ಆದಿಯನ್ನು ಸಿದ್ದಾಪುರ ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ. ಇದನ್ನೂ ಓದಿ: ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಆದಿಕೇಶವುಲು ಮೊಮ್ಮಗ
Advertisement
Advertisement
ನಡೆದಿದ್ದೇನು?: ಉದ್ಯಮಿ, ಮಾಜಿ ಸಂಸದ ದಿ. ಆದಿಕೇಶವುಲು ನಾಯ್ಡು ಮೊಮ್ಮಗ ಆದಿ, ಬೀದಿ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದಿದ್ದಾನೆ. ಈ ಘಟನೆ ಜಯನಗರದಲ್ಲಿ ನಡೆದಿದೆ. ಆದಿ ಕಾರನ್ನು ಬೇಕೆಂದೇ ರಿವರ್ಸ್ ತೆಗೆದುಕೊಂಡು ನಾಯಿ ಮೇಲೆ ಹತ್ತಿಸಿದ್ದಾನೆ. ಕಾರು ಹತ್ತಿದ ರಭಸಕ್ಕೆ ನಾಯಿ ವಿಲ-ವಿಲ ಒದ್ದಾಡಿದೆ. ಜಯನಗರ 1ನೇ ಬ್ಲಾಕ್ 10ನೇ ಬಿ ಮೈನ್‌ನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವೀಡಿಯೋ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಬೀದಿ ನಾಯಿ ಮೇಲೆ ಕಾರು ಹತ್ತಿಸಿದ FIR ಏನಾಯ್ತು: ಸಿಎಂ, ತೇಜಸ್ವಿ ಸೂರ್ಯಗೆ ರಮ್ಯಾ ಪ್ರಶ್ನೆ
Advertisement
what’s the update on the FIR @AHVS_Karnataka @Manekagandhibjp @BSBommai @Tejasvi_Surya @RAshokaBJP @Rajeev_GoI Last time you let him off the hook for injuring people & children under the influence of drugs. Is it going to be the same this time too? https://t.co/g8FzJIXLMj https://t.co/zF7mck7ImP
— Divya Spandana/Ramya (@divyaspandana) January 31, 2022
Advertisement
ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎಫ್‍ಐಆರ್ ಹಾಕಲಾಗಿತ್ತು. ಪೊಲೀಸರು ಆರೋಪಿಯನ್ನು ಹುಡುಕಿಕೊಂಡು ಹೋದಾಗ ಆತ ಕಾರಿನೊಂದಿಗೆ ಪರಾರಿಯಾಗಿರುವ ವಿಚಾರ ತಿಳಿದು ಬಂದಿದೆ. ಪೊಲೀಸರು ವಿಚಾರಣೆಗೆ ಬರುವಂತೆ ಸಿದ್ದಾಪುರ ಪೊಲೀಸರು ಆದಿಗೆ ನೋಟಿಸ್ ಕೊಟ್ಟಿದ್ದಾರೆ. ಈ ಘಟನೆಯ ಬಳಿಕ ಆರೋಪಿಗೆ ಕೊರೊನಾ ಬಂದಿದೆ. ಕುಟುಂಬಸ್ಥರು ಆದಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಕಾಪಿಯನ್ನು ಠಾಣೆಗೆ ಕಳುಹಿಸಿದ್ದಾರೆ. ಕೋವಿಡ್‍ನಿಂದ ಗುಣಮುಖವಾದ ನಂತ್ರ ವಿಚಾರಣೆಗೆ ಹಾಜರಾಗುವಂತೆ ಮತ್ತೆ ನೋಟಿಸ್ ಕಳುಹಿಸಲಾಗಿತ್ತು. ಆದರೆ ಇದೀಗ ಈ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.