ಪ್ರಭಾಸ್ (Prabhas) ನಟನೆಯ ಆದಿಪುರುಷ (Adi Purush) ಸಿನಿಮಾದಲ್ಲಿ ಸೀತೆಯನ್ನು ಭಾರತದ ಮಗಳು ಎಂದು ಕರೆದ ಡೈಲಾಗ್ ಕುರಿತಂತೆ ಕಠ್ಮಂಡು ಮೇಯರ್ ಆಕ್ಷೇಪ ವ್ಯಕ್ತ ಪಡಿಸಿದ್ದರು. ಸಿನಿಮಾದಲ್ಲಿ ಸುಳ್ಳು ಇತಿಹಾಸವನ್ನು ಹೇಳಿದ್ದಕ್ಕೆ ಚಿತ್ರವನ್ನು ಕಠ್ಮಂಡುವಿನಲ್ಲಿ ಬ್ಯಾನ್ ಮಾಡಲಾಗುವುದು ಎಂದು ತಿಳಿಸಿದ್ದರಂತೆ. ನಿನ್ನೆವರೆಗೂ ಡೈಲಾಗ್ ಅನ್ನು ತಗೆಯದೇ ಇರುವ ಕಾರಣಕ್ಕಾಗಿ ಕಠ್ಮಂಡು ಮೇಯರ್ ಮತ್ತೊಂದು ಸುತ್ತೋಲೆ ಹೊರಡಿಸಿದ್ದಾರೆ.
Advertisement
ಕಠ್ಮಂಡುನಲ್ಲಿ (Kathmandu) ಒಟ್ಟು 17 ಚಿತ್ರಮಂದಿರಗಳಿದ್ದು, ಈ ಅಷ್ಟೂ ಚಿತ್ರಮಂದಿರಗಳಲ್ಲೂ ಭಾರತೀಯ ಸಿನಿಮಾಗಳನ್ನು ಪ್ರದರ್ಶನ ಮಾಡಬಾರದು ಎಂದು ಆದೇಶ ಹೊರಡಿಸಿರುವುದಾಗಿ ಮೇಯರ್ ಬಲೇನ್ ಶಾ (Balen Shah) ಟ್ವೀಟ್ ಮಾಡಿದ್ದಾರೆ. ಆದಿಪುರುಷ ಸಿನಿಮಾ ಸೇರಿದಂತೆ ಭಾರತದ ಅಷ್ಟೂ ಸಿನಿಮಾಗಳನ್ನೂ ಬ್ಯಾನ್ (Ban) ಮಾಡಿರುವುದಾಗಿ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ದುಬೈನಲ್ಲಿ ನಡೆಯಿತು ಡಾ.ರಾಜ್ ಕಪ್ ಟೀಮ್ ಹರಾಜು ಪ್ರಕ್ರಿಯೆ
Advertisement
Advertisement
ಈ ನಡುವೆ ಚಿತ್ರ ತಂಡ ಹೊಸದೊಂದು ವರಸೆ ಶುರು ಮಾಡಿಕೊಂಡಿದೆ. ಸಿನಿಮಾ ಬಗ್ಗೆ ಬಗೆ ಬಗೆಯ ರೀತಿಯಲ್ಲಿ ಚರ್ಚೆ ನಡೆಯುತ್ತಿದ್ದರೆ, ಚಿತ್ರತಂಡದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಇದೀಗ ಸಿನಿಮಾ ಬಗ್ಗೆ ವರಸೆ ಬದಲಿಸಿದ್ದಾರೆ. ರಾಮಾಯಣಕ್ಕೂ ಆದಿಪುರುಷ್ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಅಂತಾ ಹೇಳಿಕೆ ನೀಡಿದ್ದಾರೆ.
Advertisement
ಓಂ ರಾವತ್ (Om Raut) ನಿರ್ದೇಶನದ ‘ಆದಿಪುರುಷ್’ ಸಿನಿಮಾಗೆ ಕೆಟ್ಟ ವಿಮರ್ಶೆ ವ್ಯಕ್ತವಾಗುತ್ತಿದೆ. ಈ ಸಿನಿಮಾದ ಹಲವು ಅಂಶಗಳನ್ನು ಟೀಕಿಸಲಾಗುತ್ತಿದೆ. ರಾಮಾಯಣವನ್ನು ಆಧರಿಸಿದ ಈ ಚಿತ್ರದಲ್ಲಿ ಪ್ರಭಾಸ್ ಅವರು ರಾಮನ ಪಾತ್ರ ಮಾಡಿದ್ದಾರೆ. ಸೀತೆಯಾಗಿ ಕೃತಿ ಸನೋನ್ ಕಾಣಿಸಿಕೊಂಡಿದ್ದಾರೆ. ಆಂಜನೇಯನಾಗಿ ದೇವದತ್ತ ನಾಗೆ ಅವರು ಅಭಿನಯಿಸಿದ್ದಾರೆ. ಲಕ್ಷ್ಮಣನ ಪಾತ್ರಕ್ಕೆ ಸನ್ನಿ ಸಿಂಗ್ ಅವರು ಬಣ್ಣ ಹಚ್ಚಿದ್ದಾರೆ. ಸೈಫ್ ಅಲಿ ಖಾನ್ ಅವರು ರಾವಣನಾಗಿ ಅಬ್ಬರಿಸಿದ್ದಾರೆ. ಆದರೆ ರಾಮಾಯಣವನ್ನು ತೋರಿಸಿದ ರೀತಿ ಸರಿಯಾಗಿಲ್ಲ ಎಂದು ಪ್ರೇಕ್ಷಕರು ತಕರಾರು ತೆಗೆದಿದ್ದಾರೆ. ಸೈಫ್‌ರನ್ನ ಮಾಡ್ರನ್ ರಾವಣನಂತೆ ತೋರಿಸಿರೋದು ಟ್ರೋಲ್ ಆಗುತ್ತಿದೆ. ಸಿನಿಮಾ ನೈಜವಾಗಿ ತೋರಿಸಿಲ್ಲ ಎಂದು ಟೀಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿನಿಮಾದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಮಾತು ಬದಲಾಯಿಸಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ.
ಸೋಶಿಯಲ್ ಮೀಡಿಯಾದಲ್ಲಿ ‘ಆದಿಪುರುಷ್’ ಸಿನಿಮಾವನ್ನು ಟ್ರೋಲ್ ಮಾಡಲಾಗುತ್ತಿದೆ. ಪಾತ್ರಗಳನ್ನು ತೋರಿಸಿದ ರೀತಿ, ಗ್ರಾಫಿಕ್ಸ್ ಗುಣಮಟ್ಟ ಸೇರಿದಂತೆ ಅನೇಕ ವಿಚಾರಗಳನ್ನು ಜನರು ಟೀಕಿಸುತ್ತಿದ್ದಾರೆ. ಈ ನಡುವೆ ಸಂಭಾಷಣಕಾರ ಮನೋಜ್ ಮುಂತಶೀರ್ ಅವರು ನೀಡಿದ ಕೇಳಿಕೆ ಸೆನ್ಸೇಷನ್ ಕ್ರಿಯೆಟ್ ಮಾಡಿದೆ. ಇದನ್ನು ನಾನು ಮೊದಲೇ ಹೇಳಿದ್ದೇ ಮತ್ತು ಈಗಲೂ ಹೇಳುತ್ತೇನೆ. ಈ ಸಿನಿಮಾದ ಹೆಸರು ಆದಿಪುರುಷ್. ನಾವು ರಾಮಾಯಣವನ್ನು ಸಿನಿಮಾ ಮಾಡಿಲ್ಲ. ರಾಮಾಯಾಣಕ್ಕೂ ಆದಿಪುರುಷ್ ಸಿನಿಮಾಗೂ ಸಂಬಂಧವಿಲ್ಲ. ಅದರಿಂದ ತುಂಬ ಸ್ಫೂರ್ತಿ ಪಡೆದಿದ್ದೇವೆ. ಡಿಸ್‌ಕ್ಲೈಮರ್‌ನಲ್ಲೂ ನಾವು ಅದನ್ನೇ ಹೇಳಿದ್ದೇವೆ ಎಂದು ಮನೋಜ್ ಮುಂತಶೀರ್ ಹೇಳಿದ್ದಾರೆ.