ಸ್ಯಾಂಡಲ್‌ವುಡ್ (Sandalwood) ನಟಿ ಅದಿತಿ ಪ್ರಭುದೇವ (Aditi Prabhudeva) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸದ್ಯ ನಟಿಯ ಸೀಮಂತ ಶಾಸ್ತ್ರ ಅದ್ಧೂರಿಯಾಗಿ ನಡೆದಿದೆ. ಸೀಮಂತ ಶಾಸ್ತ್ರದಲ್ಲಿ ನಟಿ ಮಿಂಚಿರುವ ಮುದ್ದಾದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.

ಬೆಂಗಳೂರಿನ ಅದಿತಿ ಅವರ ನಿವಾಸದಲ್ಲಿ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಸೀಮಂತ ಶಾಸ್ತ್ರ ನಡೆದಿದೆ. ನಟ ಶರಣ್ ಸೇರಿದಂತೆ ಸ್ಯಾಂಡಲ್‌ವುಡ್ ಹಲವು ನಟ-ನಟಿಯರು ಅದಿತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭಹಾರೈಸಿದ್ದಾರೆ. ಇದನ್ನೂ ಓದಿ:ಅನುಷ್ಕಾ ಶೆಟ್ಟಿ ಹೊಸ ಚಿತ್ರಕ್ಕೆ ಟೈಟಲ್ ಫಿಕ್ಸ್
2022ರ ನವೆಂಬರ್‌ನಲ್ಲಿ ಉದ್ಯಮಿ ಯಶಸ್ ಜೊತೆ ಅದಿತಿ ಮದುವೆಯಾದರು. ಅದಿತಿ ಮದುವೆಗೆ ಯಶ್ ಮತ್ತು ರಾಧಿಕಾ ದಂಪತಿ ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿ ಹೊಸ ಜೋಡಿಗೆ ಶುಭಕೋರಿದ್ದರು. ಈ ವರ್ಷದ ಆರಂಭದಲ್ಲಿ ನಟಿ ತಾವು ತಾಯಿಯಾಗುತ್ತಿರುವ ಸಿಹಿಸುದ್ದಿ ಹಂಚಿಕೊಂಡಿದ್ದರು.
ಗುಂಡ್ಯಾನ ಹೆಂಡ್ತಿ, ನಾಗಕನ್ನಿಕೆ ಸೀರಿಯಲ್ ನಂತರ ಧೈರ್ಯಂ, ಬಜಾರ್, ಸಿಂಗ, ಬ್ರಹ್ಮಚಾರಿ, ತೋತಾಪುರಿ, ತ್ರಿಬಲ್ ರೈಡಿಂಗ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅದಿತಿ ಪ್ರಭುದೇವ ನಟಿಸಿದ್ದಾರೆ.



