ಕ್ರಶ್ ಗುಟ್ಟು ಬಿಚ್ಚಿಟ್ಟ ಅದಿತಿ ಪ್ರಭುದೇವಾ

Public TV
2 Min Read
aditi prabhudeva

ಬೆಂಗಳೂರು: ಚಂದನವನದ ಕ್ಯೂಟ್ ಬೆಡಗಿ ಅದಿತಿ ಪ್ರಭುದೇವಾ ಸ್ಯಾಂಡಲ್‍ವುಡ್‍ನಲ್ಲಿ ಇತೀಚೆಗೆ ಕಿಕ್ಕೇರಿಸುತ್ತಿರುವ ಬೆಡಗಿ ಎಂದರೆ ತಪ್ಪಾಗಲಾರದು. ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ಅದಿತಿ ತಮ್ಮ ವಿಭಿನ್ನ ಸಿನಿಮಾಗಳ ಮೂಲಕ ತಮ್ಮದೇಯಾದ ಫ್ಯಾನ್ ಫಾಲೋವರ್ಸ್ ಹೊಂದಿದ್ದಾರೆ. ಪಡ್ಡೆ ಹುಡುಗರ ಕನಸಿನಲ್ಲಿ ಕಾಡುತ್ತಾರೆ ಸಹ. ಅಲ್ಲದೆ ಇತ್ತೀಚಿನ ಬ್ಯುಸಿಯೆಸ್ಟ್ ನಟಿಯರಲ್ಲಿ ಅದಿತಿ ಕೂಡ ಒಬ್ಬರು. ಹೀಗಿರುವಾಗ ತಮ್ಮ ಕ್ರಶ್ ಕುರಿತು ಹೇಳಿದರೆ ಯಾರ ಕಿವಿ ನಿಮಿರುವುದಿಲ್ಲ ಹೇಳಿ.

aditiprabhudeva 37396509 225700008275616 5630768207422816256 n

ಅದಿತಿ ಪ್ರಭುದೇವ ಅವರು ಬ್ರಹ್ಮಚಾರಿ ಸಿನಿಮಾ ನಂತರ ಹಲವರಿಗೆ ಫೆವರಿಟ್ ನಟಿಯಾಗಿದ್ದು, ತಮ್ಮ ನಟನೆ ಮೂಲಕ ಹುಡುಗರ ಮನಸ್ಸು ಕದ್ದಿದ್ದಾರೆ. ಯಾವ ಪಾತ್ರ ಕೊಟ್ಟರೂ ಲೀಲಾಜಾಲವಾಗಿ ನಿಭಾಯಿಸಬಲ್ಲ ನಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಅವರು ಇತ್ತೀಚೆಗೆ ನಟಿಸಿರುವ ‘ಒಂಬತ್ತನೇ ದಿಕ್ಕು’ ಸಿನಿಮಾ. ಈ ಸಿನಿಮಾದಲ್ಲಿ ಲೂಸ್ ಮಾದ ಹಾಗೂ ಅದಿತಿ ಪ್ರಭುದೇವ ವೃದ್ಧರ ಪಾತ್ರವನ್ನು ನಿರ್ವಹಿಸಿದ್ದಾರೆ.

aditiprabhudeva 42646451 290756098200885 2355192287558519456 n

ಹೌದು ದಯಾಳ್ ಪದ್ಮನಾಭನ್ ನಿರ್ದೆಶನದ ‘ಒಂಬತ್ತನೇ ದಿಕ್ಕು’ ಸಿನಿಮಾದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಇದರಲ್ಲಿ ಅದಿತಿ ಹಾಗೂ ಲೂಸ್ ಮಾದ ವೃದ್ಧರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಲಾಕ್‍ಡೌನ್ ಹಿನ್ನೆಲೆ ಚಿತ್ರೀಕರಣ ಸ್ಥಗಿತವಾಗಿದ್ದು, ಲಾಕ್‍ಡೌನ್ ಮುಗಿದ ಕೆಲವೇ ದಿನಗಳಲ್ಲಿ ಸಿನಿಮಾ ತೆರೆಗೆ ಬರಲಿದೆ ಎನ್ನಲಾಗಿದೆ. ಅಂದಹಾಗೆ ಈ ಸಿನಿಮಾದಲ್ಲಿ ಲೂಸ್ ಮಾದಾ ಹಾಗೂ ಅದಿತಿ ಪ್ರಭುದೇವಾ ಅವರಿಗೆ ಮಕ್ಕಳು, ಮೊಮ್ಮಕ್ಕಳು ಕೂಡ ಇರಲಿದ್ದಾರಂತೆ.

aditiprabhudeva 77421080 124367902340208 8561697082591802199 n

ಈ ಹಿಂದೆ ಬ್ರಹ್ಮಚಾರಿ ಸಿನಿಮಾದಲ್ಲಿ ಹೆಂಡತಿ ಪಾತ್ರವನ್ನು ಸಮರ್ಥವಾಗಿ ನಿಭಾಯಿಸಿ ಮೆಚ್ಚುಗೆ ಗಿಟ್ಟಿಸಿಕೊಂಡಿದ್ದ ಅದಿತಿ, ಈಗ ವೃದ್ಧೆಯ ಪಾತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಓಲ್ಡ್ ಮಾಂಕ್ ಸಿನಿಮಾಗೆ ಸಹ ಸಹಿ ಹಾಕಿದ್ದಾರೆ. ಹೀಗೆ ನಾನಾ ಪಾತ್ರಗಳಲ್ಲಿ ಅದಿತಿ ಪ್ರಯೋಗ ನಡೆಸುತ್ತಿದ್ದಾರೆ. ಆದರೆ ಇದೀಗ ತಮ್ಮ ಕ್ರಶ್ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಕೇವಲ ಹುಡುಗರಿಗೆ ಮಾತ್ರವಲ್ಲ, ಬಹುತೇಕ ಹುಡುಗಿಯರಿಗೂ ಬೈಕ್‍ಗಳ ಮೇಲೆ ಕ್ರಶ್ ಆಗುತ್ತದೆ. ವಿಶೇಷವಾಗಿ ರಾಯಲ್ ಎನ್ಫೀಲ್ಡ್ ಎಂದು ಬರೆದುಕೊಂಡಿದ್ದಾರೆ. ಹಳೆಯ ರಾಯಲ್ ಎನ್ಫೀಲ್ಡ್ ಬೈಕ್ ಮೇಲೆ ಕುಳಿತಿರುವ ಫೋಟೋಗಳನ್ನು ಹಾಕಿದ್ದಾರೆ. ಈ ಮೂಲಕ ರಾಯಲ್ ಎನ್ಫೀಲ್ಡ್ ಬೈಕ್ ಮೇಲಿನ ತಮ್ಮ ಕ್ರಶ್ ಹೊರ ಹಾಕಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *