ಶಿವಮೊಗ್ಗ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದ ಕೃಷ್ಣಮೂರ್ತಿ ನೇತೃತ್ವದ ಕರ್ನಾಟಕ ಮಹಿಳಾ ಟಿ-20 ತಂಡಕ್ಕೆ ಶಿವಮೊಗ್ಗದ ಮಹಿಳಾ ಕ್ರಿಕೆಟರ್ ಕು.ಅದಿತಿ ರಾಜೇಶ್ ಆಯ್ಕೆಯಾಗಿದ್ದಾರೆ.
ಅದಿತಿ ರಾಜೇಶ್ ಏಪ್ರಿಲ್ 18 ರಿಂದ ಗುಜರಾಜ್‍ನ ರಾಜ್‍ಕೋಟ್‍ನಲ್ಲಿ ನಡೆಯಲಿರುವ ಹಿರಿಯ ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ಅದಿತಿ ರಾಜೇಶ್ ಪ್ರಸ್ತುತ ವಿನೋಬನಗರದ ಡಿ.ವಿ.ಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು, ಸಹ್ಯಾದ್ರಿ ಕಾಲೇಜಿನಲ್ಲಿರುವ ಕ್ರೀಡಾಂಗಣದಲ್ಲಿ ಕಳೆದ 8 ವರ್ಷಗಳಿಂದ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಕ್ರಿಕೆಟ್ ತರಬೇತುದಾರ ಪಿ.ವಿ.ನಾಗರಾಜ್ ಅವರ ಬಳಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಇದನ್ನೂ ಓದಿ: ಗ್ರಾಮ ಸಹಾಯಕರ ಮಾಸಿಕ ಸಂಬಳ ಏರಿಕೆ
ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆಯಾಗಿ ನಗರಕ್ಕೆ ಕೀರ್ತಿ ತಂದ ಪ್ರತಿಭಾವಂತ ಯುವತಿಗೆ ವಿಧಾನ ಪರಿಷತ್ ಸದಸ್ಯ, ಕೆಎಸ್‍ಸಿಎ ಶಿವಮೊಗ್ಗ ವಲಯದ ಸಂಚಾಲಕ ಡಿ.ಎಸ್.ಅರುಣ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಎಂ.ಟಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಶುಭಹಾರೈಸಿ ಅಭಿನಂದಿಸಿದ್ದಾರೆ. ಇದನ್ನೂ ಓದಿ: ಕೆಪಿಎಸ್‍ಸಿ ಸದಸ್ಯರಾಗಿ ಬಿ.ವಿ ಗೀತಾ ನೇಮಕ