ನವದೆಹಲಿ: ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ-ಆಧಾರಿತ ಮಿಷನ್ ಆದಿತ್ಯ-ಎಲ್ 1 (Aditya L1) ಬಾಹ್ಯಾಕಾಶ ನೌಕೆಯು ಭೂಮಿಯ ಕಕ್ಷೆಯಿಂದ ಹೊರನಡೆದು, ಲಾಗ್ರೇಂಜ್ ಪಾಯಿಂಟ್ 1 (ಎಲ್ 1) ಕಡೆಗೆ ಹೆಜ್ಜೆ ಇಟ್ಟಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಟ್ರಾನ್ಸ್-ಲಗ್ರಾಂಜಿಯನ್ ಪಾಯಿಂಟ್ 1 (TL1I) ಕಕ್ಷೆ ಎತ್ತರಿಸುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿತು. L1 ಗೆ ಬಾಹ್ಯಾಕಾಶ ನೌಕೆಯ 110 ದಿನಗಳ ಪ್ರಯಾಣ ಈಗ ಆರಂಭಗೊಂಡಿದೆ. ಈ ಕುರಿತು ಇಸ್ರೋ, ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದೆ. ಇದನ್ನೂ ಓದಿ: ಇದು ಅಸಂಬದ್ಧ, ಪ್ರೇರಿತ- ಕೆನಡಾ ಆರೋಪ ತಿರಸ್ಕರಿಸಿದ ಭಾರತ
Advertisement
Aditya-L1 Mission:
Off to Sun-Earth L1 point!
The Trans-Lagrangean Point 1 Insertion (TL1I) maneuvre is performed successfully.
The spacecraft is now on a trajectory that will take it to the Sun-Earth L1 point. It will be injected into an orbit around L1 through a maneuver… pic.twitter.com/H7GoY0R44I
— ISRO (@isro) September 18, 2023
Advertisement
TL1I ಭೂಮಿಯಿಂದ ಸುಮಾರು 15 ಲಕ್ಷ ಕಿಮೀ ದೂರದಲ್ಲಿರುವ L1 ಪಾಯಿಂಟ್ ಕಡೆಗೆ ಭೂ ಕಕ್ಷೆಯಿಂದ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದೆ. ಆದಿತ್ಯ ನೌಕೆಯು ಈಗ ಸೂರ್ಯ-ಭೂಮಿ ಎಲ್1 ಪಾಯಿಂಟ್ ಕಡೆಗೆ ಪ್ರಯಾಣ ಆರಂಭಿಸಿದೆ.
Advertisement
Advertisement
ಸೆಪ್ಟೆಂಬರ್ 2 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (SDSC-SHAR) ಆದಿತ್ಯ-L1 ಏಳು ಪೇಲೋಡ್‌ಗಳೊಂದಿಗೆ ಉಡಾವಣೆಗೊಂಡಿತ್ತು. ಇದನ್ನೂ ಓದಿ: ಹಳೆ ಸಂಸತ್ ಭವನದಲ್ಲಿ ಸಂಸದರ ಮೆಗಾ ಫೋಟೋಶೂಟ್ – ಸುಂದರ ನೆನಪುಗಳೊಂದಿಗೆ ವಿದಾಯ
Web Stories