ಬೆಂಗಳೂರು: ಬಣ ಬಡಿದಾಟದ ಮಧ್ಯೆಯೇ ಅನಾಮಧೇಯ ಪತ್ರವೊಂದು ಬಿಜೆಪಿಯಲ್ಲಿ (BJP) ಸಂಚಲನ ಸೃಷ್ಟಿಸಿದೆ. ವಿಜಯೇಂದ್ರ, ಯಡಿಯೂರಪ್ಪ, ಅಶೋಕ್ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ (Adjustment Politics’) ಮಾಡ್ತಿದ್ದಾರೆ ಎಂದು ಆರೋಪಿಸಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾಗೆ ಪತ್ರ ಬರೆಯಲಾಗಿದೆ.
ಕೆಳಮಟ್ಟದ ಬಿಜೆಪಿ ಸದಸ್ಯರ ಗುಂಪಾದ ನಾವು, ಕರ್ನಾಟಕದ (Karnataka) ಬಿಜೆಪಿ ನಾಯಕತ್ದಲ್ಲಿ ನಡೆಯುತ್ತಿರುವ ದುಃಸ್ಥಿತಿಯನ್ನು ಹಂಚಿಕೊಳ್ಳಲು ಪತ್ರ ಬರೆಯುತ್ತಿದ್ದೇವೆ. ಇತ್ತೀಚೆಗೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ 3 ಕ್ಷೇತ್ರಗಳಲ್ಲೂ ಸೋತಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಮತ್ತು ಅವರ ತಂದೆ ಯಡಿಯೂರಪ್ಪ (Yediyurappa) ನಡೆಸುತ್ತಿರುವ ಒಪ್ಪಂದ ರಾಜಕೀಯದ ಮೇಲೆ ಬೆಳಕು ಚೆಲ್ಲಿದೆ. ಇದನ್ನೂ ಓದಿ: ಪಕ್ಷ ವಿರೋಧಿ ಚಟುವಟಿಕೆ ಮಾಡಿದ ವಿಜಯೇಂದ್ರಗೆ ಯಾವಾಗ ನೋಟಿಸ್ ಕೊಡ್ತೀರಾ – ರಮೇಶ್ ಜಾರಕಿಹೊಳಿ ಪ್ರಶ್ನೆ
Advertisement
Advertisement
ಪತ್ರದಲ್ಲಿ ಏನಿದೆ?
ಇವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಕೈಜೋಡಿಸಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನು ರಕ್ಷಿಸಿದ ಕಾರಣಕ್ಕೆ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸಾಕಷ್ಟು ಅವಕಾಶ ಇದ್ದರೂ ಕೈಚೆಲ್ಲಿದ್ದಾರೆ.
Advertisement
ವಿಜಯೇಂದ್ರ- ಡಿಕೆ ಶಿವಕುಮಾರ್ ವ್ಯಾಪಾರ ಹಿತಾಸಕ್ತಿಗಳನ್ನು ಹೊಂದಿದ್ದಾರೆ. ಅಶೋಕ್ ಕೂಡ ಈ ಸಂಬಂಧದಲ್ಲಿ ವಿಭಿನ್ನರಲ್ಲ. ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಇಳಿಸಿ, ಪಕ್ಷ ಉಳಿಸಿ. ಈ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸದಿದ್ದರೆ ಭವಿಷ್ಯದಲ್ಲಿ ಪಕ್ಷದ ಪತನಕ್ಕೆ ಕಾರಣವಾಗಲಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ.
Advertisement