ಬೆಂಗಳೂರು : ಉಕ್ರೇನ್-ರಷ್ಯಾ ಯುದ್ದದಿಂದ ಉಕ್ರೇನ್ ನಲ್ಲಿ ಶಿಕ್ಷಣ ವಂಚಿತರಾಗಿ ಕರ್ನಾಟಕಕ್ಕೆ ವಾಪಸ್ ಆಗಿರೋ ಮೆಡಿಕಲ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಉಕ್ರೇನ್ ನಿಂದ ಅರ್ಧಕ್ಕೆ ಶಿಕ್ಷಣ ಬಿಟ್ಟು ಬಂದಿರೋ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ವೈದ್ಯ ಶಿಕ್ಷಣ ಮುಂದುವರೆಸಲು ಅವಕಾಶ ನೀಡಲು ರಾಜ್ಯದ ಡೀಮ್ಡ್ ವಿಶ್ವವಿದ್ಯಾಲಯಗಳು ಮುಂದೆ ಬಂದಿದೆ.ಈ ಸಂಬಂಧ ಸಭೆ ಮಾಡಿರೋ ಡೀಮ್ಸ್ ವಿವಿಗಳ ಒಕ್ಕೂಟ ವಿದ್ಯಾರ್ಥಿಗಳಿಗೆ ಪ್ರವೇಶ ನಿಡೋ ಭರವಸೆ ನೀಡಿದ್ದಾರೆ.
Advertisement
ಪ್ರತಿ ವರ್ಷದ ಕೋರ್ಸ್ ನಲ್ಲಿ ಪ್ರತಿ ವಿಶ್ವವಿದ್ಯಾಲಯಗಳಲ್ಲಿ 25 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ನಿರ್ಧಾರ ಮಾಡಲಾಗಿದೆ. ಒಟ್ಟಾರೆ ಒಂದು ವಿಶ್ವವಿದ್ಯಾಲಯಕ್ಕೆ ವರ್ಷಕ್ಕೆ 125 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಒಕ್ಕೂಟ ನಿರ್ಧಾರ ಮಾಡಲಾಗಿದೆ ಅಂತ ಒಕ್ಕೂಟ ಮಾಹಿತಿ ನೀಡಿದೆ. ಇದನ್ನೂ ಓದಿ: ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ, ನಾವು ಕಲಿಯುತ್ತೇವೆ: ರಾಹುಲ್ ಗಾಂಧಿ
Advertisement
Advertisement
ಡೀಮ್ಡ್ ವಿಶ್ವವಿದ್ಯಾಲಯಗಳು ಪ್ರವೇಶ ನೀಡಿದರು. ಸರ್ಕಾರವೇ ನಿರ್ಧಾರ ಮಾಡುವ ಶುಲ್ಕಕ್ಕೆ ಪ್ರವೇಶ ಕೊಡುತ್ತೇವೆ ಅಂತ ಡೀಮ್ಡ್ ವಿಶ್ವವಿದ್ಯಾಲಯಗಳ ಒಕ್ಕೂಟ ತಿಳಿಸಿದೆ. ಕೇಂದ್ರ ಸರ್ಕಾರದಿಂದ ಅನುಮತಿ ಪಡೆದು ಪ್ರವೇಶ ನೀಡಲು ನಿರ್ಧಾರ ಮಾಡಲಾಗಿದೆ. ಈಗಾಗಲೇ ಅನುಮತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಡೀಮ್ಡ್ ವಿವಿಗಳ ಒಕ್ಕೂಟ ಪತ್ರ ಬರೆದಿದೆ. ಕೇಂದ್ರದಿಂದ ಅನುಮತಿ ಬಂದ ಕೂಡಲೇ ಪ್ರವೇಶ ನೀಡುವ ಕುರಿತು ಅಂತಿಮ ತೀರ್ಮಾನ ಘೋಷಣೆ ಮಾಡೋದಾಗಿ ಒಕ್ಕೂಟ ತಿಳಿಸಿದೆ. ಇದನ್ನೂ ಓದಿ: 5 ವರ್ಷ ಪೂರ್ಣಗೊಳಿಸಿ ಮತ್ತೆ ಅಧಿಕಾರಕ್ಕೇರಿದ ಮೊದಲ ಯುಪಿ ಸಿಎಂ ಯೋಗಿ