ಭೋಪಾಲ್: ಯುದ್ಧ ಪೀಡಿತ ಉಕ್ರೇನ್‍ನಿಂದ ತಾಯ್ನಾಡಿಗೆ ಮರಳಿದ ವಿದ್ಯಾರ್ಥಿಗಳಿಗೆ ಭಾರತದ ವಿವಿಧ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡಲು ಪ್ರವೇಶ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಸಂಸದ ದಿಗ್ವಿಜಯ್ ಸಿಂಗ್ ಪತ್ರ ಬರೆದಿದ್ದಾರೆ.
ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ದಿಗ್ವಿಜಯ್ ಸಿಂಗ್ ಅವರು, ಉಕ್ರೇನ್ ಮೂಲದ ವೈದ್ಯಕೀಯ ಕಾಲೇಜುಗಳಲ್ಲಿ ಓದಲು ಈಗಾಗಲೇ ಈ ವಿದ್ಯಾರ್ಥಿಗಳ ಪೋಷಕರು ಸಾಕಷ್ಟು ಹಣವನ್ನು ಖರ್ಚು ಮಾಡಿದ್ದಾರೆ ಮತ್ತು ಅಂತಹ ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರ ಭರಿಸಬೇಕೆಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್ ದೇಶವಾಗಿ ಉಳಿಯುವುದೇ ಅನುಮಾನ: ಪುಟಿನ್ ನೇರ ಎಚ್ಚರಿಕೆ
Advertisement
Advertisement
ದೇಶ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಯುಕ್ರೇನ್‍ನಿಂದ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳಿಗೆ ದೇಶದ ವಿವಿಧ ಖಾಸಗಿ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಎಂಬಿಬಿಎಸ್ ಕೋರ್ಸ್‍ಗಳನ್ನು ಮಾಡಲು ಪ್ರವೇಶ ನೀಡಲು ಕೇಂದ್ರವು ವಿಶೇಷ ಯೋಜನೆಯನ್ನು ರೂಪಿಸಬೇಕು ಎಂದು ತಿಳಿಸಿದ್ದಾರೆ.
Advertisement
Advertisement
ರಷ್ಯಾದ ದಾಳಿಯಿಂದಾಗಿ ಉಕ್ರೇನ್‍ನ ವಿವಿಧ ವೈದ್ಯಕೀಯ ಕಾಲೇಜುಗಳು ಮತ್ತು ಸಂಸ್ಥೆಗಳು ಈಗಾಗಲೇ ನಾಶವಾಗಿವೆ. ಈ ನಿಟ್ಟಿನಲ್ಲಿ ಕೇಂದ್ರವು ನಿರ್ಧಾರ ತೆಗೆದುಕೊಂಡು ಈ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಅನಿಶ್ಚಿತತೆಯನ್ನು ಹೋಗಲಾಡಿಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಗಟ್ಸ್ ಇಲ್ಲ ಅನ್ನೋರು ಮೊದಲು ಉಕ್ರೇನ್ ಗಡಿವರೆಗೆ ತಲುಪಿ ಧಮ್ ತೋರಿಸಬೇಕಿತ್ತು: ಸುಜಯ್