ಅತೀ ನಿರೀಕ್ಷಿತ ಸಲಾರ್ ಸಿನಿಮಾದ ಟಿಕೆಟ್ ಅನ್ನು ಇಂದಿನಿಂದ ಖರೀದಿಸಬಹುದು ಎಂದು ಹೊಂಬಾಳೆ ಸಂಸ್ಥೆ ತಿಳಿಸಿದೆ. ಕರ್ನಾಟಕದಲ್ಲಿ ಇಂದಿನಿಂದಲೇ ಅಡ್ವಾನ್ಸ್ ಟಿಕೆಟ್ ಬುಕ್ (Booking) ಮಾಡಬಹುದು ಎಂದು ಅದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ. ಇದನ್ನು ಕಂಡು ಸಹಜವಾಗಿಯೇ ಪ್ರಭಾಸ್ ಫ್ಯಾನ್ಸ್ ಗೆ ಖುಷಿಯಾಗಿದೆ.
Advertisement
‘ಸಲಾರ್ ಪಾರ್ಟ್ 1: ಸೀಸ್‍ಫೈರ್’. ಪ್ರಶಾಂತ್ ನೀಲ್ (Prashant Neel) ನಿರ್ದೇಶನದ, ಪ್ರಭಾಸ್ ಅಭಿನಯದ ಈ ಚಿತ್ರವು ಅಭಿಮಾನಿಗಳಲ್ಲಿ ಬೆಟ್ಟದಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿವೆ. ಈ ಚಿತ್ರವು ಡಿ.22ರಂದು ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಈ ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ.
Advertisement
Advertisement
ಭಾರತದ ಬೃಹತ್ ಆ್ಯಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಚಿತ್ರದ ‘ಆಕಾಶ ಗಾಡಿಯ’ ಎಂಬ ಮೊದಲ ಲಿರಿಕಲ್ ಹಾಡು (Song), ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನಲ್‍ನಲ್ಲಿ ಬಿಡುಗಡೆ ಆಗಿದೆ. ಈ ಹಾಡಿಗೆ ಮೊದಲ ದಿನವೇ ಸಖತ್ ರೆಸ್ಪಾನ್ಸ್ ಕೂಡ ಸಿಕ್ಕಿದೆ.
Advertisement
ಇದೊಂದು ಭಾವನಾತ್ಮಕ ಹಾಡಾಗಿದ್ದು, ಇಬ್ಬರು ಗೆಳೆಯರ ನಡುವಿನ ಬಾಂಧವ್ಯವನ್ನು ಸಾರುತ್ತದೆ. ಅವರಿಬ್ಬರ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ವಿಶ್ಲೇಷಿಸುತ್ತದೆ. ಈ ಹಾಡನ್ನು ಕಿನ್ನಾಲ್ ರಾಜ್ ಬರೆದಿದ್ದು, ವಿಜಯಲಕ್ಷ್ಮೀ ಮೆತ್ತಿನಹೊಳೆ ಹಾಡಿದ್ದಾರೆ. ರವಿ ಬಸ್ರೂರು ಸಂಗೀತ ಈ ಚಿತ್ರಕ್ಕಿದೆ.
ಇತ್ತೀಚೆಗಷ್ಟೇ ಸೆನ್ಸಾರ್ ಮಂಡಳಿಯಿಂದ ‘ಎ’ ಪ್ರಮಾಣ ಪತ್ರ ಪಡೆದಿರುವ ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ (Salaar Part 1) ಚಿತ್ರವು ಎರಡು ಗಂಟೆ 55 ನಿಮಿಷಗಳ ಅವಧಿಯಾಗಿದ್ದು, ಈ ಚಿತ್ರದಲ್ಲಿ ಬೃಹತ್ ಪ್ರಮಾಣ ಆ್ಯಕ್ಷನ್ ದೃಶ್ಯಗಳಿದೆ.
‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರದಲ್ಲಿ ಪ್ರಭಾಸ್ ಜೊತೆಗೆ ಪೃಥ್ವಿರಾಜ್ ಸುಕುಮಾರನ್, ಶ್ರುತಿ ಹಾಸನ್, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಪ್ರಶಾಂತ್ ನೀಲ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್‍ನಡಿ ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಿಸಿದ್ದಾರೆ.