ಇ-ಪಾಸ್‌ಪೋರ್ಟ್‌ನಲ್ಲಿರಲಿದೆ ಸುಧಾರಿತ ಭದ್ರತಾ ವೈಶಿಷ್ಟ್ಯ

Public TV
1 Min Read
indian passport 2

ನವದೆಹಲಿ: ಸರ್ಕಾರ ಈ ವರ್ಷ ಇ-ಪಾಸ್‌ಪೋರ್ಟ್‌ಗಳನ್ನು ನೀಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಜೆಟ್‌ನಲ್ಲಿ ಪ್ರಕಟಿಸಿದ್ದು, ಇದರಲ್ಲಿ ಸುಧಾರಿತ ಭದ್ರತಾ ವೈಶಿಷ್ಟ್ಯ ಇರಲಿದೆ ಎಂದು ಕೇಂದ್ರ ತಿಳಿಸಿದೆ.

ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್(ಆರ್‌ಎಫ್‌ಐಡಿ) ಚಿಪ್‌ನಂತಹ ಸುಧಾರಿತ ವೈಶಿಷ್ಟ್ಯಗಳೊಂದಿಗೆ ಇ-ಪಾಸ್‌ಪೋರ್ಟ್‌ಗಳನ್ನು ಹೊರತರಲು ಯೋಜನೆ ನಡೆಸಿದೆ ಎಂದು ಸರ್ಕಾರ ಗುರುವಾರ ತಿಳಿಸಿದೆ.

ಪಾಸ್‌ಪೋರ್ಟ್ ಬುಕ್‌ಲೆಟ್‌ನಲ್ಲಿ ಚಿಪ್‌ಗಳನ್ನು ಅಳವಡಿಸಲಾಗುತ್ತದೆ. ಅದರಲ್ಲಿ ಅರ್ಜಿದಾರರ ವೈಯಕ್ತಿಕ ವಿವರಗಳನ್ನು ಡಿಜಿಟಲ್ ರೂಪದಲ್ಲಿ ಸಂಗ್ರಹಿಸಲಾಗುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಮುರಳೀಧರನ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: 18 ವರ್ಷದಲ್ಲಿಯೇ ಮೊದಲು- ಫೇಸ್‍ಬುಕ್‍ಗೆ ಒಂದೇ ದಿನ 16 ಲಕ್ಷ ಕೋಟಿ ರೂ. ನಷ್ಟ

passport

ಇ-ಪಾಸ್‌ಪೋರ್ಟ್‌ಗಳಲ್ಲಿ ಎಂಬೆಡೆಡ್ ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್(ಆರ್‌ಎಫ್‌ಐಡಿ) ಚಿಪ್‌ಗಳನ್ನು ಅಳವಡಿಸಲಾಗುವುದು. ಅದನ್ನು ಪಾಸ್‌ಪೋರ್ಟ್‌ನ ಮುಂಭಾಗ ಇಲ್ಲವೇ ಹಿಂಭಾಗದ ಕವರ್‌ನಲ್ಲಿ ಇರಿಸಲಾಗುತ್ತದೆ. ಅದರಲ್ಲಿ ಅರ್ಜಿದಾರರ ವೈಯಕ್ತಿಕ ವಿವರಗಳನ್ನು ಡಿಜಿಟಲ್ ಚಿಪ್ ಸಂಗ್ರಹಿಸುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಹೆಲಿಕಾಪ್ಟರ್‌ನ್ನು ವೈದ್ಯಕೀಯ ಸೇವೆಗೆ ದಾನ ಮಾಡಿದ ಪದ್ಮಶ್ರೀ ಪುರಸ್ಕೃತ

ಒಂದು ವೇಳೆ ಪಾಸ್‌ಪೋರ್ಟ್ಅನ್ನು ಯಾರಾದರೂ ದುರುಪಯೋಗಪಡಿಸಲು ಪ್ರಯತ್ನಿಸಿದರೆ ಪರಿಶೀಲನೆಯಲ್ಲಿ ಅದನ್ನು ಗುರುತಿಸಲು ಸಾಧ್ಯವಾಗಲಿದೆ. ಇದರಿಂದ ಪಾಸ್‌ಪೋರ್ಟ್‌ನ ದೃಢೀಕರಣ ರದ್ದಾಗುತ್ತದೆ. ಈ ವೈಶಿಷ್ಟ್ಯದಿಂದ ಕಾನೂನು ವಿರೋಧಿ ಚಟುವಟಿಕೆಗಳನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *