ಮಂಗಳೂರು: ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಅನುಮತಿ ಪಡೆಯದೇ ಜಾಹೀರಾತು, ಪಕ್ಷದ ಚಿಹ್ನೆ ಜೊತೆಗೆ ಮತದಾರರ ಪಟ್ಟಿಯನ್ನು ವೆಬ್‍ಸೈಟಿನಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ಪರಿಣಾಮ ಇಬ್ಬರು ಅಭ್ಯರ್ಥಿಗಳ ವಿರುದ್ಧ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಹಾಗೂ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಾಮು ವಿರುದ್ಧ ಜಿ.ಪಂ ಉಪ ಕಾರ್ಯದರ್ಶಿ ಭೀಮಸೇನ್ ಗುಡೂರ್ ದೂರು ನೀಡಿದ್ದಾರೆ. ಈ ಹಿನ್ನೆಲೆ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಐಪಿಸಿ 171(ಸಿ) ಅಡಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಪೊಲೀಸರನ್ನ ಹತ್ಯೆ ಮಾಡಿದ್ದ ಭಯೋತ್ಪಾದಕ ಎನ್‍ಕೌಂಟರ್
Advertisement
Advertisement
ನಡೆದಿದ್ದೇನು?
ಮೀಡಿಯಾ ಸರ್ಟಿಫಿಕೇಷನ್ ಹಾಗೂ ಮಾನಿಟರಿಂಗ್ ಕಮಿಟಿಯಿಂದ ಯಾವುದೇ ಅನುಮತಿ ಪಡೆಯದೇ ಪಕ್ಷದ ಚಿಹ್ನೆಯಡಿ ಮತದಾರರ ಪಟ್ಟಿ ಅಪ್ಲೋಡ್ ಮಾಡಲಾಗಿದೆ. ಈ ಹಿನ್ನೆಲೆ ಜಾಹೀರಾತು ನೀಡಿದ್ದ ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.