ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇ ಗೌಡಗೆ (Advocate Devaraje Gowda) ಜಾಮೀನು ಮಂಜೂರು ಆಗಿದೆ.
ದೇವರಾಜೇ ಗೌಡ ಅವರು ಜಾಮೀನು ಕೋರಿ ಹೈಕೋರ್ಟ್‍ಗೆ (Highcourt) ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಎಂ.ಜಿ ಉಮಾ ಅವರಿದ್ದ ಏಕಸದಸ್ಯ ಪೀಠ ಜಾಮೀನು ನೀಡಿ ಇಂದು ಆದೇಶ ನೀಡಿದೆ.
Advertisement
Advertisement
ಈ ಹಿಂದೆ ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ದೇವರಾಜೇ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದನ್ನು ಪ್ರಶ್ನಿಸಿ ದೇವರಾಜೇಗೌಡ ಅವರು ಹೈಕೋರ್ಟ್‍ಗೆ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಇದನ್ನೂಓದಿ: ಅರ್ಧ ಕೆಜಿ ಚಿನ್ನ, 50 ಲಕ್ಷ ನೀಡಿದ್ರೂ ವರದಕ್ಷಿಣೆಗಾಗಿ ಮಗಳ ಹತ್ಯೆ – ಪೋಷಕರ ಆರೋಪ
Advertisement
ಏನಿದು ಪ್ರಕರಣ?: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್‍ಡ್ರೈವ್ ಬಿಡುಗಡೆ ಮಾಡಿರುವ ಆರೋಪ ಎದುರಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಮುಖಂಡ, ವಕೀಲ ದೇವರಾಜೇ ಗೌಡ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿತ್ತು. ಮಹಿಳೆಯೊಬ್ಬರ ಮೇಲೆ ದೇವರಾಜೇ ಗೌಡ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.