ಏರೋ ಇಂಡಿಯಾ 2025 – ನಾಳೆಯಿಂದ ಬೆಂಗಳೂರು ವಿಮಾನಯಾನದಲ್ಲಿ ವ್ಯತ್ಯಯ

Public TV
2 Min Read
Flight

ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ 2025ರ (Aero India 2025) ಹಿನ್ನೆಲೆ ಫೆ.5ರಿಂದ ಫೆ.14ರವರೆಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರತಿದಿನ ಕೆಲವು ಗಂಟೆಗಳ ಕಾಲ ವಿಮಾನ ಹಾರಾಟ ಬಂದ್ ಆಗಲಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುಯಾನ ಪ್ರದೇಶ ಮುಚ್ಚಲ್ಪಡಲಿದ್ದು, ಪ್ರಯಾಣಿಕರು ವಿಮಾನ ವೇಳಾಪಟ್ಟಿಗಳ ಪರಿಷ್ಕೃತ ಅಥವಾ ನವೀಕರಿಸಿದ ವಿವರಗಳಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ಮೈಸೂರು ಮಹಾರಾಜರು ಕಟ್ಟಿಸಿದ್ದ ಶಿವನ ದೇವಾಲಯವಾಯ್ತು ಬಾರ್ & ರೆಸ್ಟೋರೆಂಟ್!

WhatsApp Image 2025 02 04 at 2.17.52 PM

ವಿಮಾನ ವೇಳಾಪಟ್ಟಿಯ ನವೀಕೃತ ಮಾಹಿತಿಗೆ ಅನುಸಾರವಾಗಿ ತಮ್ಮ ಆಗಮನ ಮತ್ತು ನಿರ್ಗಮನವನ್ನು ಯೋಜಿಸಲು ನಾವು ವಿನಂತಿ ಮಾಡುತ್ತೇವೆ. ನಿಮ್ಮ ತಾಳ್ಮೆ ಮತ್ತು ಸಹಕಾರಕ್ಕಾಗಿ ಧನ್ಯವಾದಗಳು ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: 3 ದಶಕಗಳ ಬಳಿಕ ಮಂಗಳೂರು ಕಡಲ ಕಿನಾರೆಗೆ ಬಂದ ಕಡಲಾಮೆಗಳು

ಬೆಂಗಳೂರು ಏರ್‌ಪೋರ್ಟ್ ಕಾರ್ಯಾಚರಣೆಯು ಫೆ.5ರಿಂದ ಫೆ.15ರವರೆಗೆ 10 ದಿನಗಳಲ್ಲಿ ಬೇರೆಬೇರೆ ಸಮಯದಲ್ಲಿ ಬಂದ್ ಆಗಿರಲಿದೆ. ಆ ವೇಳಾಪಟ್ಟಿ ವಿವರ ಈ ಕೆಳಗೆ ನೀಡಲಾಗಿದೆ. ಇದನ್ನೂ ಓದಿ: ಸ್ನೇಹಿತರ ಹೆಸರಲ್ಲಿ ನಕಲಿ ಚಿನ್ನ ಅಡವಿಟ್ಟು 49 ಲಕ್ಷ ವಂಚನೆ – ಫೈನಾನ್ಸ್ ಮ್ಯಾನೇಜರ್ ಅರೆಸ್ಟ್‌

ಫೆಬ್ರವರಿ 5: ಬೆಳಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ, ಅಪರಾಹ್ನ 3 ರಿಂದ ಸಂಜೆ 4:30ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 6: ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಅಪರಾಹ್ನ 3 ರಿಂದ ಸಂಜೆ 4:39ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 7: ಬೆಳಗ್ಗೆ 09ರಿಂದ 11 ರವರೆಗೆ ಮತ್ತು ಅಪರಾಹ್ನ 3 ರಿಂದ ಸಂಜೆ 4:30ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 8:  ಬೆಳಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಅಪರಾಹ್ನ 3 ರಿಂದ ಸಂಜೆ 4:30ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 9: ಬೆಳಿಗ್ಗೆ 9 ರಿಂದ 11 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 10: ಬೆಳಿಗ್ಗೆ 9 ರಿಂದ 11:30 ರವರೆಗೆ ಮತ್ತು ಅಪರಾಹ್ನ 2:30 ರಿಂದ 3:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 11-12: ಮಧ್ಯಾಹ್ನ 12:00 ರಿಂದ ಅಪರಾಹ್ನ 2:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
ಫೆಬ್ರವರಿ 13-14: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಅಪರಾಹ್ನ 2:30 ರಿಂದ ಸಂಜೆ 5:00 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

Share This Article