– ಬಾನಂಗಳದಲ್ಲಿ ಇಂದು 25ಕ್ಕೂ ಹೆಚ್ಚು ವಿಮಾನಗಳ ಹಾರಾಟ
ಬೆಂಗಳೂರು: ಯಲಹಂಕದಲ್ಲಿ ನಡೆಯುತ್ತಿರುವ ಏರ್ ಶೋ (Aero India 2025) ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು 25ಕ್ಕೂ ಹೆಚ್ಚು ವಿಮಾನಗಳು ಹಾರಾಟ ನಡೆಸಲಿವೆ.
ಎರಡನೇ ದಿನ ಕೂಡ ವ್ಯವಹಾರ ಸಮ್ಮೇಳನ ನಡೆಯಲಿದೆ. ಇಂದು ಕೂಡ ಭಾರತೀಯ ಸ್ಟಾರ್ಟ್ ಆಪ್ ಕಂಪನಿಗಳು ವಿದೇಶಿ ಪ್ರಮುಖರನ್ನ ಆಕರ್ಷಿಸಲಿವೆ. ಇದನ್ನೂ ಓದಿ: Bengaluru | ಏರ್ ಶೋ ಹಿನ್ನೆಲೆ ಟ್ರಾಫಿಕ್ ಜಾಮ್ ಬಿಸಿ – ಕಿಲೋಮೀಟರ್‌ಗಟ್ಟಲೆ ನಿಂತ ವಾಹನಗಳು
ತುಮಕೂರಿನ ಹೆಎಎಲ್ ಏಷ್ಯಾದ ಅತಿ ದೊಡ್ಡ ವಿಮಾನ ತಯಾರಿಕಾ ಕಾರ್ಖಾನೆಯತ್ತ ವಿದೇಶಿ ರಕ್ಷಣಾ ಅಧಿಕಾರಿಗಳ ಚಿತ್ತ ನೆಟ್ಟಿದೆ. ಮೇಕ್ ಇನ್ ಇಂಡಿಯಾ ಅಡಿಯಲ್ಲಿ ಉತ್ಪಾದನೆಗೊಳ್ಳುತ್ತಿರುವ ಉತ್ಪನ್ನಗಳ ಬಗ್ಗೆ ಜಗತ್ತಿನ ಮಾರುಕಟ್ಟೆಗೆ ಭಾರತೀಯ ಕಂಪನಿಗಳು ಪರಿಚಯಿಸಲಿವೆ.
ಲಘು ಯುದ್ಧ ವಿಮಾನ, ಎಐ, ಫೈಟರ್ ಏರ್ ಕ್ರಾಫ್ಟ್, ಸೈಬರ್ ಸೆಕ್ಯುರಿಟಿ, ಡ್ರೋಣ್, ರೇಡಾರ್ಸ್ ಸೇರಿ ಅತ್ಯಾಧುನಿಕ ರಕ್ಷಣಾ ಉತ್ಪನ್ನಗಳ ಪ್ರದರ್ಶನ ನಡೆಯುತ್ತಿದೆ. ಇದನ್ನೂ ಓದಿ: ಮಹಾ ಕುಂಭದಿಂದ ಸಂಸ್ಕೃತಿ, ಏರ್‌ಶೋನಿಂದ ರಕ್ಷಣಾ ಬಲಿಷ್ಠತೆಯನ್ನ ಭಾರತ ಜಗತ್ತಿಗೇ ಸಾರಿದೆ: ರಾಜನಾಥ್ ಸಿಂಗ್
ಮಲ್ಟಿರೋಲ್ ಫೈಟರ್ ಏರ್ ಕ್ರಾಫ್ಟ್ ಆಕರ್ಷಣೆ
ಎರಡನೇ ದಿನದ ಏರ್ ಶೋನಲ್ಲಿ ಸ್ವೀಡನ್ ದೇಶದ ಮಲ್ಟಿರೋಲ್ ಫೈಟರ್ ಏರ್ ಕ್ರಾಫ್ಟ್ ಎಲ್ಲರನ್ನೂ ಆಕರ್ಷಿಸುತ್ತಿದೆ. ಸಾಬ್ ಕಂಪನಿಯಿAದ ನಿರ್ಮಿತವಾದ ಈ ಫೈಟರ್ ಏರ್ ಕ್ರಾಫ್ಟನ್ನು ಭಾರತಕ್ಕೆ ಪರಿಚಯಿಸುವ ಕುರಿತು ಉಭಯ ರಾಷ್ಟ್ರಗಳ ಜೊತೆ ಮಾತುಕತೆ ಕೂಡ ನಡೆಯುತ್ತಿದೆ.
ಬ್ರೆಜಿಲ್ ಯುದ್ಧ ಕಾರ್ಗೋ ವಿಮಾನ
ಆಧುನಿಕ ಯುದ್ಧಗಳ ಸಂಧರ್ಭದಲ್ಲಿ ಫೈಟರ್ ಜೆಟ್‌ಗಳಷ್ಟೇ ಪ್ರಾಮುಖ್ಯತೆ ಕಾರ್ಗೋ ವಿಮಾನಗಳಿಗೂ ಇದೆ. ಫೈಟರ್ ಜೆಟ್‌ಗಳು ಶತ್ರುವಿನ ಮೇಲೆ ಮುಗಿಬೀಳುವ ಸಾಮಾರ್ಥ್ಯ ಹೊಂದಿವೆ. ಕಾರ್ಗೋ ವಿಮಾನಗಳು ಫೈಟರ್ ಜೆಟ್‌ಗಳಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತವೆ. ಅದೇ ರೀತಿ ಈ ಬಾರಿ ಏರ್ ಶೋನಲ್ಲಿ ಸಿ-390 ಮಿಲಿನಿಯಂ ಹೆಸರಿನ ಭಾರೀ ಗಾತ್ರದ ಬ್ರೆಜಿಲ್ ಮೂಲದ ಕಾರ್ಗೋ ವಿಮಾನ ತನ್ನತ್ತ ಸೆಳೆಯುತ್ತಿದೆ. ವಾಯುಸೇನೆಯಲ್ಲಿ 6 ರೀತಿಯ ಕಾರ್ಯವನ್ನ ಮಾಡಿ, ತನ್ನ ಸೇನೆಗೆ ಬಲ ತುಂಬುವ ಈ ಕಾರ್ಗೋ ಸದ್ಯ ಬ್ರೆಜಿಲ್, ಪೋರ್ಚುಗಲ್, ಹಂಗೇರಿ ದೇಶಗಳಲ್ಲಿ ಮಾತ್ರ ಕಾರ್ಯ ನಿರ್ವಹಿಸುತ್ತಿದೆ. ತಮ್ಮ ಸೇನೆಗೆ ಈ ಬಾಹುಬಲಿಯನ್ನ ಸೇರ್ಪಡೆ ಮಾಡಲು ಅನೇಕ ದೇಶಗಳು ಕೂಡ ಸಾಲಿನಲ್ಲಿ ಕಾದು ನಿಂತಿವೆ.
ಏರ್ ಶೋನ ಎರಡನೇ ದಿನವನ್ನ ನೋಡಲು ರಕ್ಷಣಾ ಇಲಾಖೆ ಅಧಿಕಾರಿಗಳ ಕುಟುಂಬಗಳು, ಗಣ್ಯರು ಯಲಹಂಕದ ವಾಯುನೆಲೆಗೆ ಆಗಮಿಸಿದ್ದಾರೆ.