ಬೆಂಗಳೂರು: ಯಲಹಂಕ ಏರ್ ಶೋದಲ್ಲಿ ನಡೆದ ಅಗ್ನಿ ಅವಘಡಕ್ಕೆ ರಾಜ್ಯ ಸರ್ಕಾರವೇ ಕಾರಣವಾಗಿದ್ದು, ಸರ್ಕಾರ ತನ್ನ ಜವಾಬ್ದಾರಿ ನಿರ್ವಹಣೆಯನ್ನು ಮಾಡಲು ವಿಫಲವಾಗಿದೆ. ಒಬ್ಬ ಸಂಸದರಾಗಿ ಶೋಭಾ ಕರಂದ್ಲಾಜೆ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕಿದೆ ಎಂದು ಆಗ್ರಹಿಸಿದರು.
ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್‍ವೈ ಅವರು, ಏರ್ ಶೋ ಒಂದು ಅಂತರಾಷ್ಟ್ರಿಯ ಕಾರ್ಯಕ್ರಮ. ಇಂತಹ ಕಾರ್ಯಕ್ರಮಕ್ಕೆ ಸೌಲಭ್ಯ ನೀಡಲು ರಾಜ್ಯ ಸರ್ಕಾರ ವಿಫಲವಾಗಿದೆ. ಕಾರ್ಯಕ್ರಮದಲ್ಲಿ ಸೂಕ್ತ ವ್ಯವಸ್ಥೆ ಮಾಡಲು ಸರ್ಕಾರ ನಿರ್ಲಕ್ಷ್ಯ ವಹಿಸಿದ ಕಾರಣ ಸಿಎಂ ಎಚ್‍ಡಿಕೆ ಹಾಗೂ ಗೃಹ ಸಚಿವರು ಜವಾಬ್ದಾರಿ ತೆಗೆದುಕೊಳ್ಳಬೇಕು. ಅಂತರಾಷ್ಟ್ರಿಯ ಕಾರ್ಯಕ್ರಮದಲ್ಲಿ ಇಂತಹ ದೊಡ್ಡ ಅವಘಡ ನಡೆದರೆ ದೇಶದ ಹೆಸರಿಗೆ ಕಳಂಕ ಆಗುತ್ತದೆ ಎಂದು ಕನಿಷ್ಠ ಮುನ್ನೆಚ್ಚರಿಕೆ ಆದರೂ ವಹಿಸಬೇಕಿತ್ತು ಎಂದರು.
ಗೃಹ ಸಚಿವರಾದ ಎಂಬಿ ಪಾಟೀಲ್ ಅವರು ಪ್ರತಿಕ್ರಿಯೆ ನೀಡಿ ಕಾರುಗಳು ಮಾತ್ರ ಸುಟ್ಟಿದೆ. ಸಾವು ನೋವು ಸಂಭವಿಸಿಲ್ಲ ಎಂದು ಹೇಳುವ ಮೂಲಕ ಬೇಜಾಬ್ದಾರಿ ಹೇಳಿಕೆ ನೀಡಿದ್ದಾರೆ. ಅದ್ದರಿಂದ ಅವರು ಕೂಡಲೇ ಜನರ ಕ್ಷಮೆ ಕೋರಬೇಕು ಎಂದರು. ಅಲ್ಲದೇ ಪಾರ್ಕಿಂಗ್ ಸ್ಥಳಕ್ಕೆ ಎನ್‍ಒಸಿ ಕೊಟ್ಟ ಬಗ್ಗೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ತೆಗೆದುಕೊಳ್ಳದ ಕುರಿತು ತನಿಖೆ ಆಗಲಿ. ಘಟನೆ ವೇಳೆ ಕಾರಿನಲ್ಲಿದ ಪ್ರಮುಖ ದಾಖಲೆಗಳು ಸುಟ್ಟ ಭಸ್ಮವಾಗಿದೆ. ರಾಜ್ಯ ಪೊಲೀಸ್ ಇಲಾಖೆಯೂ ಕಾರ್ಯಕ್ರಮಕ್ಕೆ ಸೂಕ್ತ ವ್ಯವಸ್ಥೆ ನೀಡಲು ವಿಫಲವಾಗಿದೆ. ಸಿಎಂ ಎಚ್‍ಡಿಕೆ ಅವರು ಏರ್ ಶೋ ಬೆಂಗಳೂರಿನಲ್ಲಿ ಮಾಡಬೇಕೆಂದು ಎಂದು ಹೇಳಿದ್ದರು. ಆದರೆ ಇಂತಹ ಕಾರ್ಯಕ್ರಮದಲ್ಲೇ ಇಂತಹ ಅವಘಡ ನಡೆದರೆ ಹೇಗೆ ಎಂದು ಪ್ರಶ್ನಿಸಿದರು.
ಹುಟ್ಟು ಹಬ್ಬದ ಆಚರಣೆ ಇಲ್ಲ:
ಇದೇ ತಿಂಗಳು 27 ರಂದು ನನ್ನ ಹುಟ್ಟಹಬ್ಬ ಇದ್ದು, ಸಿದ್ದಗಂಗಾ ಶ್ರೀಗಳು ಹಾಗೂ ಪುಲ್ವಾಮಾ ದಾಳಿಯಲ್ಲಿ ಯೋಧರು ಹುತಾತ್ಮರಾಗಿರುವ ಹಿನ್ನೆಲೆಯಲ್ಲಿ ಹುಟ್ಟಹಬ್ಬ ಮಾಡಿಕೊಳ್ಳದಿರಲು ನಿರ್ಧಾರ ಮಾಡಿದ್ದೇನೆ. ಆ ದಿನ ಚಿತ್ರದುರ್ಗದಲ್ಲಿ ಪಕ್ಷದ ಕಾರ್ಯಕ್ರಮ ಇದ್ದು, ಅಲ್ಲಿ ತೆರಳಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ನನ್ನ ಪರವಾಗಿ ಯಾವುದೇ ಅಭಿಮಾನಿಗಳು ಕೂಡ ಸಂಭ್ರಮಾಚರಣೆ ಮಾಡದಿರಲು ಮನವಿ ಮಾಡುತ್ತೇನೆ ಎಂದು ಬಿಎಸ್‍ವೈ ಹೇಳಿದರು.
https://www.youtube.com/watch?v=BUA3pczdc3w
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv