ಕಾಬೂಲ್: ಮಹಿಳೆಯರಿಗೆ (Woman) ಅಮ್ಯೂಸ್‍ಮೆಂಟ್ ಪಾರ್ಕ್‍ಗಳಿಗೆ (Amusement Park) ಹಾಗೂ ಜಿಮ್‌ಗಳಿಗೆ ತೆರಳಲು ಅವಕಾಶವಿಲ್ಲ ಎಂದು ಅಫ್ಘಾನಿಸ್ತಾನದ (Afghan) ತಾಲಿಬಾನ್ ಸರ್ಕಾರ ತಿಳಿಸಿದೆ.
ಸದ್ಗುಣ ಮತ್ತು ಪ್ರಿವೈನ್ಶನ್ ಆಫ್ ವೈಸ್ (ಎಂಪಿವಿಪಿವಿ) ಪ್ರಚಾರ ಸಚಿವಾಲಯದ ವಕ್ತಾರರು ಈ ಸೂಚನೆಯನ್ನು ಹೊರಡಿಸಿದ್ದಾರೆ. ಮಹಿಳೆಯರಿಗೆ ಕಾಬೂಲ್‌ನ (Kabul) ಅಮ್ಯೂಸ್‍ಮೆಂಟ್ ಪಾರ್ಕ್‍ಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಹಾಗೂ ಜಿಮ್‌ಗಳಿಗೂ ಪ್ರವೇಶಿಸದಂತೆ ಮಹಿಳೆಯರಿಗೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಬೂಲ್‍ನ ಅಮ್ಯೂಸ್‍ಮೆಂಟ್ ಪಾರ್ಕ್‍ನಲ್ಲಿ ಹಲವಾರು ಮಹಿಳೆಯರು ಪಾರ್ಕ್ ಅಧಿಕಾರಿಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅಷ್ಟೇ ಅಲ್ಲದೇ ಕೆಲವರು ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಚಿಕಿತ್ಸೆ, ಮಹಿಳಾ ರೋಗಿಯನ್ನು ಥಳಿಸಿದ ಡಾಕ್ಟರ್
ಕಳೆದ ವರ್ಷ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಹಿಸಿಕೊಂಡ ಬಳಿಕ ಅಲ್ಲಿನ ಮಹಿಳೆಯರ ಚಲನೆ, ವಾಕ್, ಅಭಿವ್ಯಕ್ತಿ, ಕೆಲಸದ ಅವಕಾಶಗಳು ಹಾಗೂ ಉಡುಪಿನ ಸ್ವಾತಂತ್ರ್ಯದ ಮೇಲೆ ತೀವ್ರ ನಿರ್ಬಂಧಗಳನ್ನು ಹಾಕಿದೆ. ಇದನ್ನೂ ಓದಿ: ಪತ್ನಿಯನ್ನು ಕೊಚ್ಚಿ ಕೊಂದು ಮನೆಗೆ ಬೀಗ ಹಾಕಿ ಪರಾರಿಯಾದ ಪಾಪಿ ಪತಿ