ನವದೆಹಲಿ: ಅಫ್ಘಾನಿಸ್ತಾನದಿಂದ ತಾಯ್ನಾಡಿಗೆ ಕರೆತಂದಿದ್ದಕ್ಕೆ ಸಿಖ್ಖರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಡಿನ ಮೂಲಕವಾಗಿ ಧನ್ಯವಾದವನ್ನು ತಿಳಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ನೆಲಸಿರುವ ಕೆಲಸ ಮಾಡುತ್ತಿರುವ ನಮ್ಮ ದೇಶದ ಪ್ರಜೆಗಳನ್ನು ವಾಪಸ್ ಕರೆಸಿಕೊಳ್ಳಲು ಭಾರತ ಸರ್ಕಾರ ಹಲವು ವಿಮಾನಗಳನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಿ ಪ್ರಜೆಗಳನ್ನು ವಾಪಾಸ್ ಕರೆಸಿಕೊಳ್ಳುತ್ತಿದೆ. ಇದನ್ನೂ ಓದಿ: ಐಟಿ ಕಂಪನಿ ಉದ್ಯಮಿ ಅನುಮಾನಾಸ್ಪದ ಸಾವು
Advertisement
Advertisement
ಅಫ್ಘಾನಿಸ್ತಾನದಲ್ಲಿ ನೆಲೆಸಿದ್ದ ಅಥವಾ ಕೆಲಸ ಮಾಡುತ್ತಿದ್ದ ಸಿಖ್ ಸಮುದಾದ ನೂರಾರು ಜನರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತಂದಿದೆ. ಇದರಿಂದ ಸಂತಸಗೊಂಡ ಸಿಖ್ ಸಮುದಾಯದ ತಮ್ಮನ್ನು ಸುರಕ್ಷಿತವಾಗಿ ತಾಯ್ನೆಲಕ್ಕೆ ಕರೆಸಿಕೊಂಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಿದ್ದಾರೆ. ತಮ್ಮದೇ ಭಾಷೆಯಲ್ಲಿ ಹಾಡು ಹೇಳುವ ಮೂಲಕವಾಗಿ ಮೋದಿಯವರ ಬ್ಯಾನರ್ ಮುಂದೆ ನಿಂತು ಹತ್ತಾರು ಮಂದಿ ಮೋದಿಯವರಿಗೆ ಧನ್ಯವಾದ ಎಂದು ಹಾಡಿದ್ದಾರೆ. ಇದನ್ನೂ ಓದಿ: ದೇಶ ಬಿಟ್ಟು ತೆರಳಬೇಡಿ- ತಾಲಿಬಾನ್ ಬೆದರಿಕೆ
Advertisement
#Afghanishtan Sikh community Peoples Thanked PM @narendramodi_in like this. pic.twitter.com/O7mlYyfiUN
— CHUNNA???????? (@satyamsharma___) August 25, 2021
Advertisement
ಅಫ್ಘಾನಿಸ್ತಾನಲ್ಲಿ ಸಿಲುಕಿಕೊಂಡಿದ್ದ ಸಿಖ್ ಸಹೋದರನ್ನು ಒಳಗೊಂಡಂತೆ ಹಲವರನ್ನು ನೀವು ಅಲ್ಲಿಂದ ಇಲ್ಲಿಗೆ ಕರೆತರುವ ವ್ಯವಸ್ಥೆಯನ್ನು ಮಾಡಿದ್ದೀರ. ಪ್ರಧಾನಿ ಮೋದಿ ಮತ್ತು ಸರ್ಕಾರಕ್ಕೆ ನಾವು ಧನ್ಯವಾದವನ್ನು ಹೇಳುತ್ತೇವೆ ಎಂದು ಸಿಖ್ಖರು ಹೇಳಿದ್ದಾರೆ. ಇದನ್ನೂ ಓದಿ: ಸೊಸೆ ಕಿರುಕುಳ ತಾಳಲಾರದೆ ಮಾವ ಆತ್ಮಹತ್ಯೆ
ಅಫ್ಘಾನ್ ನಾಗರಿಕರು ದೇಶ ಬಿಟ್ಟು ತೆರಳದಂತೆ ತಾಲಿಬಾನ್ ಉಗ್ರರು ಕಟ್ಟಪ್ಪಣೆ ಹೊರಡಿಸಿದ್ದಾರೆ. ಈನಿಟ್ಟಿನಲ್ಲಿ ಕಾಬೂಲ್ ವಿಮಾನ ನಿಲ್ದಾಣಕ್ಕೆ ಹೋಗದಂತೆ ತಡೆಯೊಡ್ಡುತ್ತಿರುವುದರಿಂದ ಅಫ್ಘಾನ್ ನಾಗರಿಕರು ಕಂಗಾಲಾಗಿದ್ದಾರೆ. ಅಗಸ್ಟ್ 31ರ ಬಳಿಕ ಜನರ ಸ್ಥಳಾಂತರಕ್ಕೆ ನಾವು ಅವಕಾಶ ನೀಡುವುದಿಲ್ಲ. ವೈದ್ಯರು, ತಂತ್ರಜ್ಞರು ದೇಶದಲ್ಲಿಯೇ ಇದ್ದು ತಮ್ಮ ಕೆಲಸವನ್ನು ಮುಂದುವರಿಸಬೇಕು ಎಂದು ತಾಲಿಬಾನ್ ಕಟ್ಟಪ್ಪಣೆ ಹೊರಡಿಸಿದೆ.