ಕಾಬೂಲ್: ಅಫ್ಘಾನಿಸ್ತಾನದ ಪೂರ್ವ ಪಕ್ಟಿಕಾ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಲ್ಲಿ 280 ಜನರು ಸಾವನ್ನಪ್ಪಿದ್ದು, 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
Advertisement
ಮಂಗಳವಾರ ರಾತ್ರಿ ಪಕ್ಟಿಕಾ ಮತ್ತು ಖೋಸ್ಟ್ ಪ್ರಾಂತ್ಯಗಳಲ್ಲಿ ಸಂಭವಿಸಿದ ಭೂಕಂಪದ ಪರಿಣಾಮ 280 ಜನರು ಸಾವನ್ನಪ್ಪಿದ್ದು, 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದ 5 ವಸತಿ ಗೃಹ ಜಪ್ತಿ
Advertisement
#BREAKING: At least 280 people have been killed and more than 250 others injured in a result of an #earthquake in Paktika and Khost provinces on Tuesday night.
Local officials told pajhwok and gov run news agency BNA reported.#Afghanistan pic.twitter.com/htCcDTQKcu
— Pajhwok Afghan News (@pajhwok) June 22, 2022
Advertisement
ಯುಎಸ್ ಜಿಯೋಲಾಜಿಕಲ್ ಸರ್ವೆ(ಯುಎಸ್‍ಜಿಎಸ್) ಪ್ರಕಾರ, ಬುಧವಾರ ನಸುಕಿನ ವೇಳೆಯಲ್ಲಿ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಕೆಲವು ಭಾಗಗಳಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ಆಗ್ನೇಯ ಅಫ್ಘಾನಿಸ್ತಾನದ ಖೋಸ್ಟ್ ನಗರದಿಂದ ಸುಮಾರು 44 ಕಿಮೀ(27 ಮೈಲುಗಳು) ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್‍ಜಿಎಸ್ ಹೇಳಿದೆ.