ಕಾಬೂಲ್: ಅಫ್ಘಾನಿಸ್ತಾನದಲ್ಲಿ ಬುಧವಾರ ತೀವ್ರ ಭೂಕಂಪ ಸಂಭವಿಸಿದ ನಂತರ ಮೃತರ ಸಂಖ್ಯೆ 1,000 ಕ್ಕೆ ಏರಿಕೆಯಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ದೇಶದ ಆಗ್ನೇಯ ಭಾಗದಲ್ಲಿರುವ ಖೋಸ್ಟ್ ನಗರದ ಬಳಿ ಇಂದು ಮುಂಜಾನೆ ತೀವ್ರ ಭೂಕಂಪ ಸಂಭವಿಸಿದೆ. ಖೋಸ್ಟ್ ಪ್ರಾಂತ್ಯದ ಸ್ಪೆರಾ ಜಿಲ್ಲೆ ಮತ್ತು ಪಕ್ಟಿಕಾ ಪ್ರಾಂತ್ಯದ ಬರ್ಮಲಾ, ಜಿರುಕ್, ನಾಕಾ ಮತ್ತು ಗಯಾನ್ ಜಿಲ್ಲೆಗಳು ಹೆಚ್ಚು ಹಾನಿಗೆ ಒಳಗಾಗಿವೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಭೂಕಂಪ – 280 ಸಾವು, 250ಕ್ಕೂ ಹೆಚ್ಚು ಜನರಿಗೆ ಗಾಯ
Advertisement
Advertisement
ಭೂಕಂಪದಿಂದಾಗಿ 1,000 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 1,500 ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿದ್ದಾರೆ. ಅನೇಕ ಹಳ್ಳಿಗಳು ನಾಶವಾಗಿವೆ ಎಂದು ಪಕ್ಟಿಕಾ ಪ್ರಾಂತ್ಯದ ಸಂಸ್ಕೃತಿ ಮತ್ತು ಮಾಹಿತಿ ವಿಭಾಗದ ಮುಖ್ಯಸ್ಥ ಅಮೀನ್ ಹುಝೈಫಾ ಸ್ಪುಟ್ನಿಕ್ಗೆ ಮಾಹಿತಿ ನೀಡಿದ್ದಾರೆ.
Advertisement
ಸ್ಥಳಕ್ಕೆ ಹೆಲಿಕಾಪ್ಟರ್ ಹಾಗೂ ರಕ್ಷಣಾ ತಂಡ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement
ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಮಾತನಾಡಿ, ಭೂಕಂಪದಿಂದ ಸಂತ್ರಸ್ತರಾಗಿರುವ ಜನರಿಗೆ ನೆರವು ನೀಡುವ ಕುರಿತು ಚರ್ಚಿಸಲು ಇಂದು ತುರ್ತು ಸಚಿವ ಸಂಪುಟ ಸಭೆ ನಡೆಸಲಾಯಿತು. ಭೂಕಂಪದಿಂದ ಹಾನಿಗೊಳಗಾದ ಜನರಿಗೆ ಸಹಾಯ ಮಾಡುವುದರ ಜೊತೆಗೆ, ಸಂಬಂಧಿತ ಸಂಸ್ಥೆಗಳು ರಕ್ಷಣಾ ತಂಡಗಳನ್ನು ಕಳುಹಿಸಲು ಕಾರ್ಯಪ್ರವೃತ್ತವಾಗಿವೆ ಎಂದು ತಿಳಿಸಿದ್ದಾರೆ.