ಕಾಬೂಲ್: ಅಘ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಮುಂದುವರಿದಿದೆ. ಇದೀಗ ಅಘ್ಘಾನ್ ಕ್ರಿಕೆಟ್ ಮಂಡಳಿಯನ್ನು ತಮ್ಮ ವಶಕ್ಕೆ ಪಡೆದುಕೊಳ್ಳಲು ತಾಲಿಬಾನಿಗಳು ಕಸರತ್ತು ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
Advertisement
ತಾಲಿಬಾನಿಗಳು ಅಘ್ಘಾನಿಸ್ತಾನ್ ಕ್ರಿಕೆಟ್ ಮಂಡಳಿಗೆ ಮುತ್ತಿಗೆ ಹಾಕಿ ಅಲ್ಲಿನ ಮಾಜಿ ಕ್ರಿಕೆಟಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದ್ದು, ಕೆಲದಿನಗಳ ಹಿಂದೆ ಕ್ರಿಕೆಟ್ ತಂಡಕ್ಕೂ ತಾಲಿಬಾನಿಗಳು ಕಾಟ ಕೊಡುವ ಬಗ್ಗೆ ಅಲ್ಲಿನ ಕ್ರಿಕೆಟ್ ಆಟಗಾರರು ತಮ್ಮ ನೋವು ತೋಡಿಕೊಂಡಿದ್ದರು. ಇದನ್ನೂ ಓದಿ: ಐಸ್‍ಕ್ರೀಮ್ ಸವಿದು, ಜಿಮ್ ಮಾಡಿ ಫುಲ್ ಎಂಜಾಯ್ ಮೂಡ್‍ನಲ್ಲಿ ತಾಲಿಬಾನಿಗಳು
Advertisement
Advertisement
ತಾಲಿಬಾನ್ ಉಗ್ರರು ಅಘ್ಘಾನಿಸ್ತಾನದ ಎಲ್ಲಾ ಕ್ರಿಕೆಟ್ ಸ್ಟೇಡಿಯಂಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೀಗಾಗಿ ಅಘ್ಘಾನಿಸ್ತಾನದ ಕ್ರಿಕೆಟಿಗರ ಭವಿಷ್ಯ ಅಪಾಯಕ್ಕೆ ಸಿಲುಕಿದೆ. ಈ ನಡುವೆ ಅಘ್ಘಾನಿಸ್ತಾನ ತಂಡ ಮುಂಬರುವ ಟಿ20 ವಿಶ್ವಕಪ್‍ಗೂ ಅರ್ಹತೆ ಪಡೆದುಕೊಂಡಿದೆ.
Advertisement
Dear World Leaders! My country is in chaos,thousand of innocent people, including children & women, get martyred everyday, houses & properties being destructed.Thousand families displaced..
Don’t leave us in chaos. Stop killing Afghans & destroying Afghaniatan????????.
We want peace.????
— Rashid Khan (@rashidkhan_19) August 10, 2021
ಅಘ್ಘಾನಿಸ್ತಾನದ ಸ್ಟಾರ್ ಕ್ರಿಕೆಟರ್ ರಶೀದ್ ಖಾನ್, ಅಘ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ತೆಗೆದುಕೊಂಡಿದ್ದಾರೆ. ಜನರು ಭಯ ಭೀತಿಯಿಂದ ದೇಶ ತೊರೆಯುತ್ತಿದ್ದಾರೆ. ಇವೆಲ್ಲವನ್ನೂ ನೋಡಿ ನನಗೆ ನಿದ್ದೆ ಮಾಡಲಾಗುತ್ತಿಲ್ಲ. ದಯವಿಟ್ಟು ಎಲ್ಲರೂ ನಮಗಾಗಿ ಪ್ರಾರ್ಥಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮಹಿಳೆಯರು ಕೆಲಸ ಮಾಡಬಹುದು, ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ: ತಾಲಿಬಾನ್