ಧರ್ಮಶಾಲಾ: ಭಾರತ ತಂಡ (Team India) ನಾಳೆಯಿಂದ (ಜೂ.13) ಆರಂಭವಾಗಲಿರುವ ಅಫ್ಘಾನಿಸ್ತಾನ(Afghanistan) ವಿರುದ್ಧದ 3 ಏಕದಿನ ಪಂದ್ಯಗಳ ಸರಣಿಗೆ ಸಜ್ಜಾಗುತ್ತಿದೆ. ಆಧುನಿಕ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿಯವರು (Virat Kohli) ಗಾಯದಿಂದಾಗಿ ಈ ಸರಣಿಯಿಂದ ಹೊರಗುಳಿದಿದ್ದಾರೆ. ಇತ್ತ ರೋಹಿತ್ ಶರ್ಮಾ (Rohit Sharma) ಅವರು ನಾಯಕ ಶುಭಮನ್ ಗಿಲ್(Shubman Gill) ಜೊತೆ ತಂಡದ ಪರ ಇನ್ನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತವಾಗಿದೆ.
ಅಫ್ಘಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಜಯ ದಾಖಲಿಸಿ ಗೆಲುವಿನ ವಿಶ್ವಾಸದಲ್ಲಿರುವ ಭಾರತ ತಂಡಕ್ಕೆ ಮತ್ತೊಂದು ಹಿನ್ನಡೆಯೆಂದರೆ ಹಾರ್ದಿಕ್ ಪಾಂಡ್ಯ ಅವರು ತಂಡದಿಂದ ಹೊರಗುಳಿದಿರುವುದು. ಹಾರ್ದಿಕ್ ಅನುಪಸ್ಥಿತಿಯಲ್ಲಿ ನಿತೀಶ್ ಕುಮಾರ್ ರೆಡ್ಡಿ ಸ್ಥಾನ ತುಂಬಲಿದ್ದಾರೆ.
ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ಕೆ.ಎಲ್ ರಾಹುಲ್ ಅವರನ್ನು ಬಿಟ್ಟರೆ ಉಳಿದೆಲ್ಲರು ಯುವ ಆಟಗಾರರು. ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಹಿನ್ನೆಲೆ ಅರ್ಷದೀಪ್ ಸಿಂಗ್ ಜೊತೆಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ಕಣಕ್ಕಿಳಿಯಬಹುದು. ಪ್ರಿನ್ಸ್ ಯಾದವ್ ನಾಳಿನ ಪಂದ್ಯದಲ್ಲಿ ಕಣಕ್ಕಿಳಿದು ಭಾರತೀಯ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ.
The God has created a perfect setting for IND vs AFG ODI. Have u made ur plans ?
Get ready for exciting action on Saturday at world’s most beautiful stadium. @BCCI pic.twitter.com/Z4UjE8OY2p— Thakur Arun Singh (@ThakurArunS) June 11, 2026
ಅಫ್ಘಾನಿಸ್ತಾನ ವಿರುದ್ಧ ಭಾರತ ಆಡಿರುವ 4 ಏಕದಿನ ಪಂದ್ಯಗಳ ಪೈಕಿ 3 ರಲ್ಲಿ ಭಾರತ ಗೆಲುವು ಸಾಧಿಸಿದೆ. ಬಾಕಿ ಒಂದು ಪಂದ್ಯ ರದ್ದಾಗಿದೆ. 2023ರ ಏಕದಿನ ವಿಶ್ವಕಪ್‌ನಲ್ಲಿ ಉಭಯ ತಂಡಗಳು ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದವು. ಇದನ್ನೂ ಓದಿ:ಭಾರತೀಯ ಶೂಟಿಂಗ್ ಲೋಕಕ್ಕೆ ಆಘಾತ: ಮನು ಭಾಕರ್ ಕೋಚ್ ಜಸ್ಪಾಲ್ ರಾಣಾ ಇನ್ನಿಲ್ಲ
ಪಿಚ್ ರಿಪೋರ್ಟ್ ಹೇಗಿದೆ?
ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣವು ಸಾಮಾನ್ಯವಾಗಿ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದೆ. ವಿಶೇಷವಾಗಿ ಮೊದಲ ಇನ್ನಿಂಗ್ಸ್ ಬ್ಯಾಟ್ ಮಾಡುವ ತಂಡಕ್ಕೆ ಅನೂಕೂಲವಾಗಬಹುದು. ಇಲ್ಲಿ ಹೆಚ್ಚು ಬೌನ್ಸ್ ಇರುವುದರಿಂದ ವೇಗದ ಬೌಲರ್‌ಗಳು ಪಾರಮ್ಯ ಮೆರೆಯಬಹುದು. ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ.
ಈ ಪಿಚ್‌ನಲ್ಲಿ 2023ರ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಕೊನೆಯ ಏಕದಿನ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಎರಡೂ ತಂಡಗಳು ಒಟ್ಟಾಗಿ 771 ರನ್‌ಗಳ ಬೃಹತ್ ಮೊತ್ತ ಗಳಿಸಿದ್ದವು. ಹಾಗಾಗಿ ನಾಳೆಯ ಪಂದ್ಯದಲ್ಲೂ ಕೂಡ ರನ್‌ಗಳ ಹೊಳೆ ಹರಿಯುವ ಸಾಧ್ಯತೆಯಿದೆ.
ಸಂಭಾವ್ಯ ಆಡುವ ಬಳಗ
ಭಾರತ: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿ.ಕೀ.), ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೆ, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಅರ್ಷ್ದೀಪ್ ಸಿಂಗ್, ಕುಲದೀಪ್ ಯಾದವ್.
ಅಫ್ಘಾನಿಸ್ತಾನ: ರಹಮಾನುಲ್ಲಾ ಗುರ್ಬಾಜ್ (ವಿ.ಕೀ.), ಇಬ್ರಾಹಿಂ ಜದ್ರಾನ್, ಸೇದಿಕುಲ್ಲಾ ಅಟಲ್, ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮತ್ ಶಾ, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್, ಮೊಹಮ್ಮದ್ ಸಲೀಮ್, ಎ.ಎಂ. ಗಜನ್ಫರ್, ಜಿಯಾವುರ್ ರೆಹಮಾನ್.
