ಕಾಬೂಲ್: ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತ ಶನಿವಾರ ಎಲ್ಲಾ ಅಫ್ಘಾನ್ ಮಹಿಳೆಯರಿಗೆ ಸಾರ್ವಜನಿಕವಾಗಿ ತಲೆಯಿಂದ ಕಾಲಿನವರೆಗೂ ಸಂಪೂರ್ಣ ಉಡುಪುಗಳನ್ನು ಧರಿಸಲು ಆದೇಶಿಸಿದೆ.
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಅಫ್ಘಾನಿಸ್ತಾನದ ಸರ್ಕಾರ ಪತನವಾಗಿ ತಾಲಿಬಾನ್ ಆಡಳಿತಕ್ಕೆ ಬಂತು. ಅಂದಿನಿಂದ ಅಲ್ಲಿನ ನಾಗರಿಕರಿಗೆ, ಮುಖ್ಯವಾಗಿ ಮಹಿಳೆಯರನ್ನು ಗುರಿಯಾಗಿಸಿಕೊಂಡಿರುವ ತಾಲಿಬಾನ್ ಜನರ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದೆ. ಇದನ್ನೂ ಓದಿ: 21 ವರ್ಷಗಳಿಂದ ಪತ್ನಿ ಶವದೊಂದಿಗಿದ್ದ ವೃದ್ಧನಿಂದ ಕೊನೆಗೂ ಅಂತ್ಯಕ್ರಿಯೆ!
Advertisement
Advertisement
ತಾಲಿಬಾನ್ ಇತ್ತೀಚೆಗೆ ಹೊರಡಿಸಿರುವ ಆದೇಶಗಳಲ್ಲಿ ಮುಖ್ಯವಾಗಿ ಮಹಿಳೆಯರ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟು ಮಾಡುತ್ತಿದೆ. ಇತ್ತೀಚೆಗೆ ತಾಲಿಬಾನ್ ಮಹಿಳೆಯರಿಗೆ ಒಂಟಿಯಾಗಿ ಪ್ರಯಾಣಿಸುವುದನ್ನು ನಿಷೇಧಿಸಿತ್ತು. ಆದರೆ ಈ ಕಾನೂನಿಗೆ ಪ್ರಜೆಗಳು ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಮೌನವಾಗಿ ಕಾನೂನನ್ನು ನಿರ್ಲಕ್ಷಿಸಲಾಗಿದೆ. ಇದನ್ನೂ ಓದಿ: ಉಕ್ರೇನ್‌ಗೆ ಬ್ರಿಟನ್‌ನಿಂದ ಮತ್ತೆ 12 ಸಾವಿರ ಕೋಟಿ ಮಿಲಿಟರಿ ನೆರವು
Advertisement
Advertisement
ತಾಲಿಬಾನ್‌ನ ಇತ್ತೀಚೆಗೆ ಕಾಬೂಲ್ ಹಾಗೂ ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್(ವಾಹನ ಪರವಾನಗಿ) ನೀಡುವುದನ್ನೂ ನಿಲ್ಲಿಸಿದೆ. ಅಫ್ಘಾನಿಸ್ತಾನದಲ್ಲಿ ಆಹಾರ ಹಾಗೂ ಅಗತ್ಯ ವಸ್ತುಗಳ ಸರಬರಾಜಿನ ತೀವ್ರ ಕೊರತೆ ಉಂಟಾಗಿದೆ. ದೇಶ ವಿನಾಶಕಾರಿ ಮಾನವೀಯ ಬಿಕ್ಕಟ್ಟನ್ನು ಎದುರಿಸುತ್ತಿರುವ ನಡುವೆಯೂ ಹಲವಾರು ನಿಷೇಧಗಳನ್ನು ಹೇರುತ್ತಿದೆ.