ತಿರುವನಂತಪುರಂ: ದೇಶದಲ್ಲಿ ಮಂಕಿಪಾಕ್ಸ್ ಭೀತಿ ಕೆಲದಿನಗಳಿಂದ ಕೇರಳ ಸೇರಿದಂತೆ ದೇಶಾದ್ಯಂತ ಭೀತಿ ಹುಟ್ಟಿಸಿದೆ. ಈ ನಡುವೆ ಕೇರಳದ ವಯನಾಡು ಮತ್ತು ಉತ್ತರ ಪ್ರದೇಶದ ಬರೇಲಿಯಲ್ಲಿ ಆಫ್ರಿಕನ್ ಹಂದಿಜ್ವರ ಪ್ರಕರಣಗಳು ವರದಿಯಾಗಿವೆ.
Advertisement
ಕೇರಳದ ವಯನಾಡ್ ಜಿಲ್ಲೆಯ ಫಾರ್ಮ್‍ನಲ್ಲಿ ಆಫ್ರಿಕನ್ ಹಂದಿ ಜ್ವರ (ASF) ವರದಿಯಾಗಿದೆ ಎಂದು ರಾಜ್ಯ ಪಶುಸಂಗೋಪನಾ ಸಚಿವ ಜೆ.ಚಿಂಚುರಾಣಿ ಮಾಹಿತಿ ಹಂಚಿಕೊಂಡಿದ್ದಾರೆ. ಈವರೆಗೆ ದೇಶದಲ್ಲಿ ಆಫ್ರಿಕನ್ ಹಂದಿ ಜ್ವರದ ಯಾವುದೇ ಅಧಿಕೃತ ಸಂಖ್ಯೆಗಳು ದೃಢವಾಗಿಲ್ಲ. ಕೇರಳದಲ್ಲಿ ಇದು ಮೊದಲ ಪ್ರಕರಣವಾಗಿದ್ದು, ಸೋಂಕು ಪತ್ತೆ ಸ್ಥಳಕ್ಕೆ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಗೆ ಮುಂದಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Monkeypox; ಕೇರಳದಲ್ಲಿ 3ನೇ ಪ್ರಕರಣ ಪತ್ತೆ
Advertisement
ಆಫ್ರಿಕನ್ ಹಂದಿ ಜ್ವರ ಹಂದಿಗಳಲ್ಲಿ ಜ್ವರ, ವಾಕರಿಕೆ ಮತ್ತು ಅತಿಸಾರವನ್ನು ಉಂಟುಮಾಡುತ್ತದೆ. ಈ ಹಿಂದೆ ಶಂಕೆ ಮೇರೆಗೆ ಸ್ಯಾಂಪಲ್ ಪುಣೆಗೆ ರವಾನೆ ಮಾಡಲಾಗಿತ್ತು. ಇದರ ಫಲಿತಾಂಶ ಇದೀಗ ಲಭ್ಯವಾಗಿದ್ದು, ಜಿಲ್ಲೆಯ ಫಾರ್ಮ್‍ನಲ್ಲಿ ಹಂದಿಗಳಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
Advertisement
Advertisement
ಕೇರಳ ಬೆನ್ನಲ್ಲೇ ಉತ್ತರ ಪ್ರದೇಶದಲ್ಲೂ ಈ ಹಂದಿ ಜ್ವರ ಕಾಣಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ (IVRI) ಜಂಟಿ ನಿರ್ದೇಶಕ ಡಾ.ಪಿ.ಸಿಂಗ್, ಉತ್ತರ ಪ್ರದೇಶದ ಬರೇಲಿಯ ನವಾಬ್‍ಗಂಜ್ ತಹಸಿಲ್‍ನ ಭಾದ್ಸರ್ ದಾಂಡಿಯಾ ಗ್ರಾಮದ ನಿವಾಸಿ ಅನಿಲ್ ಕುಮಾರ್ ಸಾಕಿದ್ದ ಹಂದಿ ಜ್ವರದಿಂದ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಂಗಳವಾರ BBMP ಚುನಾವಣಾ ಭವಿಷ್ಯ ನಿರ್ಧಾರ?