ವಿದೇಶಿ ಪ್ರಜೆಗಳಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ

Public TV
1 Min Read
AFRICANS 1

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪ್ರಜೆಗಳು ಪುಂಡಾಟ ಮೆರೆದಿದ್ದಾರೆ. ಕುಡಿದ ಮತ್ತಿನಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

AFRICANS

ಈ ಘಟನೆ ಬೆಂಗಳೂರಿನ ಬ್ರಿಗೇಡ್ ರೋಡ್ ನಲ್ಲಿ ನಡೆದಿದೆ. ಕಬ್ಬನ್ ಪಾರ್ಕ್ ಪೊಲೀಸರು ನೈಟ್ ರೌಂಡ್ಸ್ ನಲ್ಲಿದ್ದ ಸಂದರ್ಭದಲ್ಲಿ ಆಫ್ರಿಕಾ ಮೂಲದ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಬ್ರಿಗೇಡ್ ರೋಡ್ ನಲ್ಲಿದ್ರು. ತಡರಾತ್ರಿ ಆದ ಕಾರಣ ಇಲ್ಲಿಂದ ಹೊರಡುವಂತೆ ಪೊಲೀಸರು ಸೂಚಿಸಿದ್ದಾರೆ.

AFRICANS 2

ಇದೇ ವಿಚಾರಕ್ಕೆ ಪೊಲೀಸರ ಜೊತೆ ವಾಗ್ವಾದಕ್ಕಿಳಿದ ವಿದೇಶಿಗರು, ಅವಾಚ್ಯವಾಗಿ ನಿಂದಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಕಬ್ಬನ್ ಪಾರ್ಕ್ ಪೊಲೀಸರು ವಿದೇಶಿ ಪ್ರಜೆಗಳನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ನೌಕಾಪಡೆಯಿಂದ 6 ಭಾರತೀಯ ಮೀನುಗಾರರ ಬಂಧನ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *