ಮಂಡ್ಯ: ಕಳೆದ ಹದಿನೈದು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆ ಉತ್ತಮವಾಗಿ ಬೀಳುತ್ತಿರುವ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗಿದೆ.
Advertisement
ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಮಳೆ ಬೀಳದ ಕಾರಣ ಕೆಆರ್‌ಎಸ್ ಜಲಾಶಯ ಭರ್ತಿಯಾಗುವುದು ಡೌಟ್ ಎಂದು ಹೇಳಲಾಗುತ್ತಿತ್ತು. ಆದರೆ ಕಳೆದ ಹದಿನೈದು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆ ಉತ್ತಮವಾಗಿ ಬಿದ್ದಿದ್ದರಿಂದ ಇಂದು ಕೆಆರ್‌ಎಸ್ ಸಂಪೂರ್ಣವಾಗಿ ಭರ್ತಿಯಾಗಿದೆ. 11 ವರ್ಷದ ಬಳಿಕ ಅಕ್ಟೋಬರ್ ಅಂತ್ಯದಲ್ಲಿ ಕೆಆರ್‌ಎಸ್ ಜಲಾಶಯ ಭರ್ತಿಯಾಗಿದೆ. ಸಾಮಾನ್ಯವಾಗಿ ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ಜಲಾಶಯ ಭರ್ತಿಯಾಗುತ್ತಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರು ಬೀಳದ ಕಾರಣವಾಗಿ ಇಂದು ಭರ್ತಿಯಾಗಿದೆ. 2009ರಲ್ಲಿ ಅಕ್ಟೋಬರ್ 28 ರಂದು ಭರ್ತಿಯಾಗಿತ್ತು. ಇದನ್ನೂ ಓದಿ: ಅವಳಿ ಮಕ್ಕಳಿಗೆ ತಂದೆಯಾದ ದಿನೇಶ್ ಕಾರ್ತಿಕ್
Advertisement
Advertisement
ಈ ಬಾರಿ ಕೆಆರ್‌ಎಸ್ ಭರ್ತಿಯಾಗುವುದಿಲ್ಲ ಎಂಬ ಆತಂಕ ಇದ್ದ ಕಾರಣ ಅಕ್ಟೋಬರ್ 7 ರಂದು ಜ್ಯೋತಿಷಿ ಭಾನುಪ್ರಕಾಶ್ ಶರ್ಮ ಅವರ ನೇತೃತ್ವದಲ್ಲಿ ಕೆಆರ್‌ಎಸ್ ಡ್ಯಾಂ ಬಳಿ ಹೋಮ ಹಾಗೂ ವಿಶೇಷ ಪೂಜೆಯಲ್ಲಿ ಮಾಡಲಾಗಿತ್ತು. ಈ ಹೋಮ ಹಾಗೂ ಪೂಜೆಯಲ್ಲಿ ಸಿಎಂ ಬಸವರಾಜ ಬೊಮ್ಮಯಿ ಅವರು ತಮ್ಮ ಕುಟುಂಬ ಸಮೇತ ಭಾಗಿಯಾಗಿದ್ದರು. ಇದಾದ ಬಳಿಕ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾದ ಕಾರಣ ಇಂದು ಕೆಆರ್‌ಎಸ್ ಸಂಪೂರ್ಣ ಭರ್ತಿಯಾಗಿದೆ. ಕೆಆರ್‌ಎಸ್ ಭರ್ತಿಯಾಗಿರುವ ಹಿನ್ನೆಲೆ ಬಸವರಾಜ ಬೊಮ್ಮಯಿ ಅವರು ಕೆಲವೇ ದಿನಗಳಲ್ಲಿ ಬಾಗಿನ ಅರ್ಪಿಸಲು ಕೆಆರ್‌ಎಸ್‍ಗೆ ಆಗಮಿಸಲಿದ್ದಾರೆ. ಇದನ್ನೂ ಓದಿ: ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು
Advertisement
124.80 ಅಡಿಗಳ ಗರಿಷ್ಟ ಸಾಮರ್ಥ್ಯವಿರುವ ಕೆಆರ್‌ಎಸ್ ಜಲಾಶಯ ಇದೀಗ ಸಂಪೂರ್ಣ 124.80 ಅಡಿಗಳು ಭರ್ತಿಯಾಗಿದೆ. ಇನ್ನೂ ಇಂದಿನ ಒಳಹರಿವಿನ ಪ್ರಮಾಣ 8,767 ಸಾವಿರ ಕ್ಯೂಸೆಕ್ ಇದ್ದು, ಇಂದಿನ ಹೊರ ಹರಿವಿನ ಪ್ರಮಾಣ 3,667 ಸಾವಿರ ಕ್ಯೂಸೆಕ್ ಇದೆ. ಇನ್ನೂ ಕೆಆರ್‌ಎಸ್ ಅಣೆಕಟ್ಟೆಯ ಸಾಮರ್ಥ್ಯವನ್ನು ಟಿಎಂಸಿಯಲ್ಲಿ ನೋಡುವುದಾದರೆ, ಈ ಜಲಾಶಯ 49.452 ಟಿಎಂಸಿ ಸಾಮರ್ಥ್ಯವನ್ನು ಹೊಂದಿದ್ದು, ಇಂದು 49.452 ಟಿಎಂಸಿ ನೀರು ಅಣೆಕಟ್ಟೆಯಲ್ಲಿ ಇದೆ.