15 ದಿನದ ಬಳಿಕ ಅಕ್ರಮ ಧ್ವನಿವರ್ಧಕಗಳ ವಿರುದ್ಧ ರಾಜ್ಯದಲ್ಲೂ ಕಾರ್ಯಾಚರಣೆ

Public TV
1 Min Read
mosque-loudspeakers
ಸಾಂದರ್ಭಿಕ ಚಿತ್ರ

ಬೆಂಗಳೂರು: ಅಕ್ರಮವಾಗಿ ಅಳವಡಿಸಿರುವ ಧ್ವನಿವರ್ಧಕಗಳನ್ನು ಯಾವ ಸಮಯದಲ್ಲಿ ಬಳಸಬೇಕು ಎಂಬುವುದನ್ನು ಅರ್ಜಿ ಹಾಕಿ ಹೈಕೋರ್ಟ್, ಸುಪ್ರೀಂಕೋರ್ಟ್‍ನಿಂದ ಅನುಮತಿ ಪಡೆಯಬೇಕು ಇಲ್ಲದಿದ್ದರೆ, 15 ದಿನಗಳ ಬಳಿಕ ಅನಧಿಕೃತ ಮೈಕ್‍ಗಳನ್ನು ತೆರವುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Basavaraj Bommai 1

ಈ ಕುರಿತಂತೆ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿ ಮಾತನಾಡಿದ ಅವರು, ಅಕ್ರಮವಾಗಿ ಧ್ವನಿವರ್ಧಕಗಳನ್ನು ಹಾಕಿರುವವರು ಅರ್ಜಿ ಸಲ್ಲಿಸಿ ಯಾವ, ಯಾವ ಡೆಸಿಬಲ್ ಯಾವ ಟೈಮ್‍ನಲ್ಲಿ ಬಳಸಬೇಕು ಎನ್ನುವುದನ್ನು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಒಂದು ಡೆಸಿಬಲ್, ರಾತ್ರಿ 10 ಗಂಟೆಯಿಂದ 6 ಗಂಟೆವರೆಗೆ ಒಂದು ಪ್ರಮಾಣದಂತೆ ಅನುಸರಿಸಬೇಕು. ಇದು ಕೇವಲ ಹಿಂದೂ ಧಾರ್ಮಿಕ ಅಥವಾ ಮುಸ್ಲಿಂ ಧಾರ್ಮಿಕ ಧ್ವನಿವರ್ಧಕಗಳಿಗೆ ಮಾತ್ರ ಅನ್ವಯವಾಗುವುದಿಲ್ಲ. ಬದಲಾಗಿ ಸಾರ್ವಜನಿಕ ಕಾರ್ಯಕ್ರಮಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಧ್ವನಿವರ್ಧಕ ಮಿತಿ ಪ್ರಮಾಣದಲ್ಲಿ ಬಳಸಬೇಕು ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ, ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ: ಬಿ.ಸಿ.ಪಾಟೀಲ್

loudspeakers

ಈ ಕುರಿತಂತೆ ಕಾನೂನು ತಜ್ಞರ ತಂಡದೊಂದಿಗೆ ಚರ್ಚೆ ನಡೆಸಿರುವ ಬೊಮ್ಮಾಯಿ ಅವರು, ಇಂದು ಸಂಜೆ ಅಥವಾ ನಾಳೆಯೊಳಗೆ ಸುತ್ತೋಲೆ ಹೊರಡಿಸುವ ಸಾಧ್ಯತೆಯಿದ್ದು, ಕೋರ್ಟ್ ನೀಡುವ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ 15 ದಿನದ ಬಳಿಕ ಅಕ್ರಮ ಮೈಕ್‍ಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಅನಧಿಕೃತ ಮೈಕ್ ಗಳ ತೆರವುಗೊಳಿಸುವಂತೆ ಆದೇಶಿಸಿದ್ದಾರೆ. ಇದನ್ನೂ ಓದಿ: ಹೊಸ ಮನೆ ಖರೀದಿಸಿದ ನಟಿ ವೈಷ್ಣವಿ ಗೌಡ – ಅಗ್ನಿಸಾಕ್ಷಿ ಚೆಲುವೆಯ ಗೃಹ ಪ್ರವೇಶಕ್ಕೆ ದೊಡ್ಮನೆ ಮಂದಿ ಸಾಕ್ಷಿ

Share This Article
Leave a Comment

Leave a Reply

Your email address will not be published. Required fields are marked *