ನವದೆಹಲಿ: ದೇಶದಲ್ಲಿ ಮಂಕಿಪಾಕ್ಸ್ ಸೋಂಕಿನ ಎರಡನೇ ಪ್ರಕರಣ ಪತ್ತೆಯಾಗಿದ್ದು, ಜನತೆಯಲ್ಲಿ ಭೀತಿ ಸೃಷ್ಟಿಸಿದೆ. ಇದರಿಂದ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದ್ದು, ಹೊರ ದೇಶಗಳಿಂದ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ಸೂಚನೆ ನೀಡಿದೆ.
ದೇಶದಲ್ಲಿ ಮಂಕಿಪಾಕ್ಸ್ ಹರಡುವಿಕೆ ತಡೆಗಟ್ಟಲು ಬಂದರು ಮತ್ತು ವಿಮಾನ ನಿಲ್ದಾಣಗಳಲ್ಲಿ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕಟ್ಟುನಿಟ್ಟಾದ ಆರೋಗ್ಯ ತಪಾಸಣೆಯನ್ನು ನಡೆಸಲು ಕೇಂದ್ರ ಸರ್ಕಾರ ಸೂಚಿಸಿದೆ. ಇದನ್ನೂ ಓದಿ: ಕೇರಳದಲ್ಲಿ ಮಂಕಿಪಾಕ್ಸ್ 2ನೇ ಕೇಸ್ ದೃಢ – ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವ್ಯಕಿ!
ಮಂಕಿಪಾಕ್ಸ್ ಸೋಂಕಿನ ಕುರಿತು ಸಭೆ ನಡೆಸಲಾಯಿತು. ವಿಮಾನ ನಿಲ್ದಾಣ ಮತ್ತು ಬಂದರು ಆರೋಗ್ಯ ಅಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣದ ಪ್ರಾದೇಶಿಕ ಕಚೇರಿಗಳ ನಿರ್ದೇಶಕರು ಈ ಸಭೆಯಲ್ಲಿ ಭಾಗವಹಿಸಿದ್ದರು.
ದೇಶಕ್ಕೆ ಬರುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಬೇಕು. ಇದು ದೇಶಕ್ಕೆ ಮಂಗನ ಕಾಯಿಲೆಯ ಆಮದು ಮಾಡಿಕೊಳ್ಳುವ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ನಾನು ಅಪರಾಧಿಯಲ್ಲ: ಸಿಂಗಾಪುರ ಭೇಟಿಗೆ ಅನುಮತಿ ಸಿಗದೇ ಕೇಜ್ರಿವಾಲ್ ಅಸಮಾಧಾನ
ಆರೋಗ್ಯ ತಪಾಸಣೆ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ಅಂತಾರಾಷ್ಟ್ರೀಯ ಬಂದರುಗಳು ಮತ್ತು ವಿಮಾನ ನಿಲ್ದಾಣಗಳಲ್ಲಿನ ಇತರೆ ಮಧ್ಯಸ್ಥಗಾರರ ಏಜೆನ್ಸಿಗಳೊಂದಿಗೆ ಸಮನ್ವಯಗೊಳಿಸಲು ಆರೋಗ್ಯಾಧಿಕಾರಿಗಳಿಗೆ ಕೇಂದ್ರ ಸಲಹೆ ನೀಡಿದೆ.