25 ವರ್ಷಗಳ ಬಳಿಕ ಮೊದಲ ಬಾರಿಗೆ ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರದ ಬಗ್ಗೆ ಪಾಕ್‌ ತಪ್ಪೊಪ್ಪಿಗೆ!

Public TV
3 Min Read
Pakistan Army

– ಪಾಕ್‌ ಸೇನಾ ಮುಖ್ಯಸ್ಥ ಹೇಳಿದ್ದೇನು?
– ಕಾಂಗ್ರೆಸ್‌ ವಿರುದ್ಧ ಬಿಜೆಪಿ ಟೀಕೆ

ಇಸ್ಲಾಮಾಬಾದ್‌: ಕಾರ್ಗಿಲ್ ಯುದ್ಧ (1999 Kargil War) ನಡೆದ 25 ವರ್ಷದ ನಂತರ ಭಾರತದೊಂದಿಗೆ ಮಾರಣಾಂತಿಕ ಸಂಘರ್ಷದಲ್ಲಿ ಪಾಕಿಸ್ತಾನ (Pakistan) ತನ್ನ ಪಾತ್ರದ ಬಗ್ಗೆ ಒಪ್ಪಿಕೊಂಡಿದೆ. ಈ ಕುರಿತು ಖುದ್ದು ಅಲ್ಲಿನ ಸೇನಾಧಿಕಾರಿಯೇ ಬಹಿರಂಗ ಹೇಳಿಕೆ ನೀಡಿದ್ದಾರೆ.

ರಾವಲ್ಪಿಂಡಿಯಲ್ಲಿರುವ ಪಾಕಿಸ್ತಾನದ ಸೇನೆಯ (Pakistan Army) ಪ್ರಧಾನ ಕಚೇರಿಯಲ್ಲಿ ನಡೆದ ʻರಕ್ಷಣಾ ದಿನʼ ಕಾರ್ಯಕ್ರಮದ ಭಾಷಣದಲ್ಲಿ ಸೇನಾ ಮುಖ್ಯಸ್ಥ ಜನರಲ್ ಆಸೀಮ್ ಮುನೀರ್, ಕಾರ್ಗಿಲ್‌ ಯುದ್ಧದಲ್ಲಿ ಪಾಕ್‌ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಭಾರತ-ಪಾಕ್ ಮಧ್ಯೆ ನಡೆದ 1948, 1965, 1971ರ ಯುದ್ಧ, ಕಾರ್ಗಿಲ್ ಯುದ್ಧ, ಸಿಯಾಚಿನ್ ಘರ್ಷಣೆಯಲ್ಲಿ ಸಾವಿರಾರು ಯೋಧರು ಪ್ರಾಣತ್ಯಾಗ ಮಾಡಬೇಕಾಗಿ ಬಂತು ಎಂದು ಹೇಳಿದ್ದಾರೆ.

ಈ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಪಾಕ್ ಸೈನ್ಯ ತಮ್ಮ ಪಾತ್ರವನ್ನು ಒಪ್ಪಿಕೊಂಡಂತೆ ಆಗಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: ರಷ್ಯಾ ವಿರುದ್ಧ ಉಕ್ರೇನ್‌ ಪ್ರತೀಕಾರದ ದಾಳಿ – ಬೆಂಕಿ ಉಂಡೆ ಉಗುಳುವ ʻಡ್ರ್ಯಾಗನ್‌ ಡ್ರೋನ್‌ʼ ಅಸ್ತ್ರ ಪ್ರಯೋಗ

ಪಾಕ್‌ ಆರ್ಮಿ ಚೀಫ್‌ ಹೇಳಿದ್ದೇನು?
1948, 1965, 1971ರ ಯುದ್ಧಗಳು ಹಾಗೂ ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾರ್ಗಿಲ್ ಯುದ್ಧ, ಸಿಯಾಚಿನ್ ಘರ್ಷಣೆಯಲ್ಲಿ ಸಾವಿರಾರು ಜನರು ಪ್ರಾಣತ್ಯಾಗ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ರಾಜಕೀಯ ಪ್ರೇರಿತ: ಭಾರತದ ವಿರುದ್ಧವೇ ಪ್ರಶ್ನೆ ಎತ್ತಿದ ಯೂನಸ್

ಮೇ ಮತ್ತು ಜುಲೈ 1999ರ ನಡುವೆ ನಡೆದ ಕಾರ್ಗಿಲ್ ಯುದ್ಧದಲ್ಲಿ, ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಪಾಕಿಸ್ತಾನಿ ಪಡೆಗಳು ನುಸುಳಿದವು. ಆಗ ಭಾರತೀಯ ಸೇನೆ ʻಆಪರೇಷನ್ ವಿಜಯ್ʼ ಅಡಿಯಲ್ಲಿ ಅವರನ್ನು ಹಿಮ್ಮೆಟ್ಟಿಸಿತ್ತು. ಹಿಂದೆ, ಇಸ್ಲಾಮಾಬಾದ್ ನುಸುಳುಕೋರರನ್ನು ʻಕಾಶ್ಮೀರಿ ಸ್ವಾತಂತ್ರ್ಯ ಹೋರಾಟಗಾರರುʼ ಅಥವಾ ʻಮುಜಾಹಿದೀನ್‌ಗಳುʼ ಉಲ್ಲೇಖಿಸುತ್ತಾ ನೇರವಾಗಿ ಸೇನಾ ಪಾಲ್ಗೊಳ್ಳುವಿಕೆಯನ್ನು ನಿರಾಕರಿಸಿದರು.

kargil war

ಸೇನಾ ಮುಖ್ಯಸ್ಥ ಮುನೀರ್‌ ಅವರ ಈ ಹೇಳಿಕೆಯು ಸೋಷಿಯಲ್‌ ಮೀಡಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಭಾರತ್‌ ಸ್ಪೆಕ್ಟ್ರಮ್‌ ಎಂಬ ಎಕ್ಸ್‌ ಖಾತೆಯಲ್ಲಿ ಅಂದು ಖಾರ್ಗಿಲ್‌ ಯುದ್ಧದಲ್ಲಿ ಮಡಿದ ಅಧಿಕಾರಿಗಳ ಮೃತದೇಹಗಳನ್ನು ಸ್ವೀಕರಿಸಲು ಪಾಕಿಸ್ತಾನದ ಸೇನೆಯು ನಿರಾಕರಿಸಿದ ವರದಿಗಳನ್ನು ಹಂಚಿಕೊಳ್ಳಲಾಗಿದೆ. ಇದನ್ನೂ ಓದಿ: ಕೀನ್ಯಾ ಶಾಲೆಯಲ್ಲಿ ಅಗ್ನಿ ಅವಘಡ – 17 ಮಕ್ಕಳು ದಾರುಣ ಸಾವು

kargil vijay diwas

ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌!
ಆಸೀಮ್ ಮುನೀರ್ ಕಾರ್ಗಿಲ್‌ ಯುದ್ಧದ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಪ್ರತಿಕ್ರಿಯೆ ನೀಡಿದ್ದಾರೆ. ಭಯೋತ್ಪಾದನೆ ಮತ್ತು ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ಪಾತ್ರವು ಬಹಿರಂಗವಾಗಿದೆ. ಈಗ ಪಾಕಿಸ್ತಾನವೇ ಅದನ್ನು ಒಪ್ಪಿಕೊಂಡಿದೆ. ಆದರೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಾದ ನ್ಯಾಷನಲ್ ಕಾನ್ಫರೆನ್ಸ್ ಇನ್ನೂ ಪಾಕಿಸ್ತಾನದೊಂದಿಗೆ ಮಾತುಕತೆಗೆ ಪ್ರತಿಪಾದಿಸುತ್ತಿವೆ. ಅವರು ಅಫ್ಜಲ್ ಗುರುವನ್ನು ಗಲ್ಲಿಗೇರಿಸಿರುವುದನ್ನು ಪ್ರಶ್ನಿಸುತ್ತಾರೆ, ಮೋದಿಯನ್ನು ವಿರೋಧಿಸುವ ನೆಪದಲ್ಲಿ, ನಿಜವಾಗಿಯು ಭಾರತವನ್ನು ಭಾರತ್ ವಿರೋಧ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

Share This Article