ಕಿಚ್ಚ ಸುದೀಪ್ ಸದ್ಯ ‘ಮ್ಯಾಕ್ಸ್’ (Max Film) ಸಿನಿಮಾದ ಕೆಲಸದಲ್ಲಿ ಬ್ಯುಸಿಯಿದ್ದಾರೆ. ಕಿಚ್ಚನ ಅಡ್ಡಾದಿಂದ ಹೊಸ ಸುದ್ದಿಯೊಂದು ಸಿಕ್ಕಿದೆ. 8 ವರ್ಷಗಳ ನಂತರ ಮ್ಯಾಕ್ಸ್ ಸುದೀಪ್‌ಗಾಗಿ ತಮಿಳು ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalakshmi Sarath Kumar) ಸಾಥ್ ನೀಡಿದ್ದಾರೆ. ಮಾಣಿಕ್ಯನಿಗೆ ನಟಿ ಜೊತೆಯಾಗಿದ್ದಾರೆ. ಇದನ್ನೂ ಓದಿ:ಬೆಂಗಳೂರು ಏರ್‌ಪೋರ್ಟ್‌ಗೆ ಮಾಧವನ್ ಮೆಚ್ಚುಗೆ- ನರೇಂದ್ರ ಮೋದಿ ಪ್ರತಿಕ್ರಿಯೆ
ವಿಜಯ್ ಕಾರ್ತಿಕೇಯನ್ (Vijay Karthikeyan) ನಿರ್ದೇಶನದ ಮ್ಯಾಕ್ಸ್ ಸಿನಿಮಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಹಿಂದೆ ಮಾಣಿಕ್ಯ (Maanikya) ಸಿನಿಮಾದಲ್ಲಿ ಕಿಚ್ಚನಿಗೆ ನಾಯಕಿಯಾಗಿ ಮೋಡಿ ಮಾಡಿದ್ದ ಚೆಲುವೆ ವರಲಕ್ಷ್ಮಿ ಶರತ್‌ಕುಮಾರ್ ಈಗ ‘ಮ್ಯಾಕ್ಸ್’ ಸಿನಿಮಾದಲ್ಲೂ ನಟಿಸಿದ್ದಾರೆ ಎನ್ನಲಾಗುತ್ತಿದೆ.
ಸದ್ಯಕ್ಕಂತೂ ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಬಿಟ್ಟುಕೊಟ್ಟಿಲ್ಲ. ಅಲ್ಲದೇ, ವರಲಕ್ಷ್ಮಿ ಸೇರ್ಪಡೆ ಬಗ್ಗೆಯೂ ಅಧಿಕೃತ ಘೋಷಣೆ ಮಾಡಿಲ್ಲ. ಮೂಲಗಳ ಪ್ರಕಾರ, ವರಲಕ್ಷ್ಮಿ ಶರತ್‌ಕುಮಾರ್ ಅವರಿಗೆ ಈ ಸಿನಿಮಾದಲ್ಲಿ ಪ್ರಧಾನ ಪಾತ್ರವಿದ್ದು, ಈಗಾಗಲೇ ಅವರು ಮಹತ್ವದ ದೃಶ್ಯಗಳ ಚಿತ್ರೀಕರಣವನ್ನೂ ಕೂಡ ಮುಗಿಸಿದ್ದಾರಂತೆ. ಇನ್ನು, ಈ ಸಿನಿಮಾದಲ್ಲಿ ಸುದೀಪ್ ಜೊತೆಗೆ ಸಂಯುಕ್ತಾ ಹೊರನಾಡು, ಅನಿರುದ್ಧ್ ಭಟ್, ಸುಕೃತಾ ವಾಘ್ಳೆ ಮುಂತಾದವರು ನಟಿಸುತ್ತಿದ್ದಾರೆ.
ಇತ್ತೀಚಿಗೆ ರಿಲೀಸ್ ಆಗಿದ್ದ ಮ್ಯಾಕ್ಸ್ (Max Film) ಸಿನಿಮಾದ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಕಿಚ್ಚನ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡ್ತಿದ್ದಾರೆ. ಕೈತುಂಬಾ ಸಿನಿಮಾಗಳ ನಡುವೆ ಬಿಗ್ ಬಾಸ್ ಶೋಗೂ (Bigg Boss Kannada) ತೆರೆಮರೆಯಲ್ಲಿ ಸಖತ್ ತಯಾರಿ ನಡೆಯುತ್ತಿದೆ.