ಒಂದು ತಿಂಗಳಿಂದ ರಾಜಧಾನಿ ಗಡಿಯಲ್ಲಿ ಪ್ರತಿಭಟನೆ; ಇಂದು ದೆಹಲಿಯಲ್ಲಿ ರೈತರ ಮಹಾಪಂಚಾಯತ್‌ ಸಭೆ

Public TV
1 Min Read
farmers protest delhi

ನವದೆಹಲಿ: ಒಂದು ತಿಂಗಳಿಂದ ದೆಹಲಿಯ (New Dlhi) ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ರಾಷ್ಟ್ರ ರಾಜಧಾನಿಗೆ ಎಂಟ್ರಿ ಕೊಟ್ಟಿದ್ದಾರೆ. ಇಂದು (ಗುರುವಾರ) ದೆಹಲಿಯಲ್ಲಿ ಮಹಾಪಂಚಾಯತ್‌ ನಡೆಸಲಿದ್ದಾರೆ.

ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಕಿಸಾನ್ ಮಜ್ದೂರ್ ಮಹಾಪಂಚಾಯತ್’ (Kisan Mahapanchayat) ನಡೆಸಲು ದೆಹಲಿ ಪೊಲೀಸರು ರೈತರಿಗೆ ಅನುಮತಿ ನೀಡಿದ್ದಾರೆ. ಪೊಲೀಸರು ರೈತರಿಗೆ ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ಟ್ರ್ಯಾಕ್ಟರ್ ಟ್ರಾಲಿಗಳು ಇರಬಾರದು, ಮೆರವಣಿಗೆ ಮಾಡಬಾರದು ಮತ್ತು 5,000 ಪ್ರತಿಭಟನಾಕಾರರನ್ನು ಮೀರಬಾರದು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ ಮಸೂದೆಗೆ ರಾಷ್ಟ್ರಪತಿ ಅನುಮೋದನೆ

farmers protest 1 2

ಬೆಳಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ಸಭೆಯನ್ನು ನಿಗದಿಪಡಿಸಲಾಗಿದೆ. ಸರ್ಕಾರದ ನೀತಿಗಳ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುವ ಗುರಿಯನ್ನು ರೈತ ಸಂಘಟನೆಗಳು ಹೊಂದಿವೆ. ಕನಿಷ್ಠ ಬೆಂಬಲ ಬೆಲೆ (MSP) ಕಾನೂನು ಜಾರಿ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಕೇಂದ್ರದ ಮುಂದಿಟ್ಟು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ರೈತರ ಪ್ರತಿಭಟನೆ ನೇತೃತ್ವ ವಹಿಸಲಿದೆ. ಇದು ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧ 2020-21 ರೈತರ ಪ್ರತಿಭಟನೆಯನ್ನು ಮುಂದುವರಿದ ಭಾಗವಾಗಿದೆ. ಕಾರ್ಪೊರೇಟ್ ಪರ ನೀತಿಗಳ ವಿರುದ್ಧ ಕಾರ್ಯತಂತ್ರ ರೂಪಿಸುವುದು ಮತ್ತು ಮುಂಬರುವ ಸಾರ್ವತ್ರಿಕ ಚುನಾವಣೆಗಳ ಸಂದರ್ಭದಲ್ಲಿ ಭವಿಷ್ಯದ ಕ್ರಮಗಳನ್ನು ಪ್ರಕಟಿಸುವ ‘ಸಂಕಲ್ಪ ಪತ್ರ’ ಎಂಬ ನಿರ್ಣಯ ಅಂಗೀಕರಿಸಲಾಗುವುದು ಎಂದು ಎಸ್‌ಕೆಎಂ ಹೇಳಿದೆ. ಇದನ್ನೂ ಓದಿ: ಚುನಾವಣೆಗೆ ಖರ್ಚು ಮಾಡಲು ನಮ್ಮ ಪಕ್ಷದಲ್ಲಿ ಹಣವಿಲ್ಲ: ಖರ್ಗೆ

ರೈತರ ಪ್ರತಿಭಟನೆಯಿಂದಾಗಿ ದೆಹಲಿಯ ವಿವಿಧ ಭಾಗಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಮೇಲೆ ಪರಿಣಾಮ ಬೀರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Share This Article