ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮೇಲೆ ಹಲ್ಲೆ ನಡೆದ ಮರುದಿನವೇ, ಪಕ್ಷದ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ಮೇಲೂ ದಾಳಿ ನಡೆದಿದೆ.
#WATCH | Hooghly, West Bengal: TMC MP Kalyan Banerjee was allegedly attacked near Chanditala Police Station when he came to submit a deputation regarding post-poll violence.
More details awaited. pic.twitter.com/GFrJF1E02d
— ANI (@ANI) May 31, 2026
ಚುನಾವಣೆ ಬಳಿಕ ಟಿಎಂಸಿ ಕಾರ್ಯಕರ್ತರ ಸರಣಿ ಬಂಧನ ವಿರೋಧಿಸಿ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂಡಿತಾಲ ಪೊಲೀಸ್ ಠಾಣೆ ಎದುರು ಟಿಎಂಸಿ ನಿಯೋಗ ಪ್ರತಿಭಟನೆ ನಡೆಸುತ್ತಿತ್ತು. ಈ ವೇಳೆ ಬಿಜೆಪಿ vs ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟಿದ್ದು, ಕಲ್ಯಾಣ್ ಬ್ಯಾನರ್ಜಿ ಅವರ ಮೇಲೆ ದಾಳಿ ನಡೆದಿದೆ.
ವರದಿಗಳ ಪ್ರಕಾರ, ಟಿಎಂಸಿ ಕಾರ್ಯಕರ್ತರ ಬಂಧನ ವಿರೋಧಿ ಕಲಾಣ್ ಬ್ಯಾನರ್ಜಿ ನೇತೃತ್ವದ ಟಿಎಂಸಿ ನಿಯೋಗ ಪ್ರತಿಭಟನೆ ನಡೆಸುತ್ತಿತ್ತು. ಮುಂಚಿತವಾಗಿಯೇ ಚಂಡಿತಾಲ ಪೊಲೀಸ್ ಠಾಣೆಯಿಂದ ಅನುಮತಿ ಪಡೆಯಲಾಗಿತ್ತು. ಆದಾಗ್ಯೂ, ನಿಯೋಗ ಒಳಗೆ ತಲುಪುವ ಮೊದಲು, ಪೊಲೀಸ್ ಠಾಣೆ ಆವರಣದ ಹೊರಗೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಘರ್ಷಣೆ ಏರ್ಪಟ್ಟಿದ್ದು ಹೇಗೆ?
ಕಪ್ಪು ಧ್ವಜ ಹಿಡಿದು ಪ್ರತಿಭಟಿಸುತ್ತಿದ್ದ ಟಿಎಂಸಿ ಕಾರ್ಯಕರ್ತರನ್ನ ಬಿಜೆಪಿ ಕಾರ್ಯಕರ್ತರು ʻಚೋರ್ ಚೋರ್ʼ ಎಂದು ಕೆಣಕಿದ್ದಾರೆ. ಬಳಿಕ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ಮೇಲೂ ದಾಳಿಯಾಗಿದೆ. ಘರ್ಷಣೆ ವೇಳೆ ಕಲ್ಯಾಣ್ ಬ್ಯಾನರ್ಜಿ ಅವರ ತಲೆಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
