ಹುಬ್ಬಳ್ಳಿ: ಅಂಜಲಿ ಕೊಲೆ (Anjali Murder) ಮಾಡಿದ್ದಲ್ಲದೇ ಮತ್ತೊಂದು ಕೊಲೆ ಮಾಡಲು ಹೋಗಿ ಕಿರಾತಕ ವಿಶ್ವ (Vishwa) ಈಗ ಅರೆಸ್ಟ್ ಆಗಿದ್ದಾನೆ.
ಅಂಜಲಿಯನ್ನು ಹತ್ಯೆ ಮಾಡಿದ ಬಳಿಕ ವಿಶ್ವ ಪರಾರಿಯಾಗಿ ದಾವಣಗೆರೆ (Davanagere) ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ರೈಲಿನಲ್ಲಿ ಮಹಿಳೆ ಜೊತೆ ಗಲಾಟೆ ಮಾಡಿ ಸಿಟ್ಟಾಗಿ ಚಾಕು ಹಾಕಲು ಮುಂದಾಗಿದ್ದ. ಇದನ್ನೂ ಓದಿ: ಅಂಜಲಿ ಹತ್ಯೆಗೈದಿದ್ದ ಆರೋಪಿ ಅರೆಸ್ಟ್ – ಬಗೆದಷ್ಟು ಬಯಲಾಗ್ತಿದೆ ವಿಶ್ವನ ದುಷ್ಕೃತ್ಯ
ಈ ವಿಚಾರ ತಿಳಿಯುತ್ತಿದ್ದಂತೆ ಪ್ರಯಾಣಿಕರು ಆತನಿಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದರು. ಜನರಿಂದ ತಪ್ಪಿಸಿಕೊಳ್ಳಲು ವಿಶ್ವ ರೈಲಿನಿಂದ ಜಿಗಿದಿದ್ದ. ಹಳಿಯಲ್ಲಿ ಬಿದ್ದು ಗಾಯಗೊಂಡಿದ್ದ ಈತನನ್ನು ದಾವಣಗೆರೆ ರೈಲ್ವೇ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ವೇಳೆ ವಿಶ್ವನ ವಿಳಾಸ ಇತ್ಯಾದಿ ಮಾಹಿತಿಗಳನ್ನು ಪರಿಶೀಲಿಸಿದಾಗ ಈತನೇ ಅಂಜಲಿಯನ್ನು ಕೊಲೆ ಮಾಡಿದ ಆರೋಪಿ ಎನ್ನುವುದು ಪೊಲೀಸರಿಗೆ ದೃಢಪಡುತ್ತದೆ.
ಈಗ ವಿಶ್ವನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.