DistrictsKarnatakaKodaguLatestMain Post

ಮತಾಂತರ ನಿಷೇಧ ಕಾಯ್ದೆಗೆ ಅಂಕಿತ ಬಿದ್ದರೂ ಕೊಡಗಿನಲ್ಲಿ ನಿಲ್ತಿಲ್ಲ ಮತಾಂತರ

Advertisements

ಮಡಿಕೇರಿ: ಮತಾಂತರ ಕಾಯ್ದೆಗೆ ಈಗಾಗಲೇ ಅಂಕಿತ ಬಿದ್ದರೂ ಕೆಲವೊಂದು ಕಡೆ ರಾಜಾರೋಷವಾಗಿ ಕ್ರೈಸ್ತ ಮಿಷನರಿಗಳಿಂದ ಮತಾಂತರ ನಡೆಯುತ್ತಿದೆ ಎನ್ನುವ ಅನುಮಾನ ಕಾಡುತ್ತಿದೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಮಂಚಳ್ಳಿ ಗ್ರಾಮಕ್ಕೆ ಕೇರಳದಿಂದ ಬಂದ ದಂಪತಿ ಗ್ರಾಮದಲ್ಲಿ ಇರುವ ಬಡ ವರ್ಗದವರನ್ನು ಮತಾಂತರಕ್ಕೆ ಯತ್ನಿಸುತ್ತಿದ್ದಾರೆ. ಕೆಎಲ್‌-12-ಎನ್‌2494 ಕಾರಿನಲ್ಲಿ ಕೊಡಗಿನ ಮಂಚಳ್ಳಿ ಗ್ರಾಮಕ್ಕೆ ಬಂದಿದ್ದ ದಂಪತಿ ಕೇರಳದ ಪಡಿಜ್ಞಾತ ಗ್ರಾಮದ ಕುರಿಯಚ್ಚನ್ ಹಾಗೂ ಸಲಿನಾಮ ದಂಪತಿ ಎನ್ನಲಾಗಿದೆ. ಇದನ್ನೂ ಓದಿ: ಮರಿಯುಪೋಲ್‍ನಲ್ಲಿ ರಷ್ಯಾಗೆ ಶರಣಾದ ಉಕ್ರೇನ್ ಸೈನಿಕರು

ಈ ದಂಪತಿ ಗ್ರಾಮಕ್ಕೆ ಬಂದು ಮತಾಂತರ ಮಾಡುವ ಸಂದರ್ಭದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅಲ್ಲದೇ ಕೊಡಗು-ಕೇರಳ ಗಡಿ ಗ್ರಾಮದಲ್ಲಿ ಮತಾಂತರ ಪ್ರಕರಣ ಇತ್ತೀಚಿನ ದಿನಗಳಲ್ಲಿ ಬೆಳಕಿಗೆ ಬರುತ್ತಿದೆ. ಹಿಂದೂಗಳನ್ನು ಮತಾಂತರ ಮಾಡಲು ಕ್ರೈಸ್ತ ದಂಪತಿ ಯತ್ನಿಸುತ್ತಿದ್ದಾರೆ ಎಂದು ಭಜರಂಗದಳ ಕಾರ್ಯಕರ್ತರು ದಂಪತಿಯನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ.

ಬಳಿಕ ಇಬ್ಬರನ್ನು ಕುಟ್ಟ ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡ ಕುಟ್ಟ ಪೊಲೀಸರು ದಂಪತಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.  ಇದನ್ನೂ ಓದಿ:  ಹಾಸನ ಜಿಲ್ಲೆಯಲ್ಲಿ ಇಂದು 1 ರಿಂದ 10ನೇ ತರಗತಿವರೆಗೆ ರಜೆ ಘೋಷಣೆ 

Leave a Reply

Your email address will not be published.

Back to top button