– ಕೇಜ್ರಿವಾಲರನ್ನು ಮತ್ತೆ ಈ ಸ್ಥಾನಕ್ಕೆ ತರಲು 4 ತಿಂಗಳು ಶ್ರಮಿಸುತ್ತೇನೆ
ನವದೆಹಲಿ: ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಅತಿಶಿ ಸಿಂಗ್ (Atishi Singh) ಇಂದು (ಸೆ.23) ಸಚಿವಾಲಯಕ್ಕೆ ತೆರಳಿ ಅಧಿಕಾರ ವಹಿಸಿಕೊಂಡರು. ಮುಖ್ಯಮಂತ್ರಿ ಸ್ಥಾನದ ಕುರ್ಚಿಯಲ್ಲಿ ಕೂರದೇ ಪಕ್ಕದಲ್ಲಿ ಮತ್ತೊಂದು ಕುರ್ಚಿ ಹಾಕಿಕೊಂಡು ಕೂತು ಕಡತಗಳಿಗೆ ಸಹಿ ಹಾಕುವ ಮೂಲಕ ಸಿಎಂ (CM) ಆಗಿ ಕೆಲಸ ಆರಂಭಿಸಿದ್ದಾರೆ.
Advertisement
ಅಧಿಕಾರ ವಹಿಸಿಕೊಂಡ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಮಾಯಣ (Ramayana) ಮಹಾಕಾವ್ಯವನ್ನು ಉದಾಹರಣೆಯಾಗಿ ನೀಡಿ ಶ್ರೀರಾಮ ವನವಾಸಕ್ಕೆ ಹೋದಾಗ ಸಹೋದರ ಭರತ ರಾಮನ ಪಾದುಕೆಯನ್ನು ಸಿಂಹಾಸನದ ಮೇಲಿಟ್ಟು ಆಡಳಿತವನ್ನು ನಡೆಸಿದರು. ಅದೇ ರೀತಿ ನಾನು ಕೇಜ್ರಿವಾಲ್ ಸ್ಥಾನದಲ್ಲಿ ಕೂರುವುದಿಲ್ಲ. ಅವರನ್ನು ಮತ್ತೆ ಈ ಸ್ಥಾನಕ್ಕೆ ತರಲು ನಾಲ್ಕು ತಿಂಗಳು ಶ್ರಮಿಸುತ್ತೇನೆ ಎಂದರು.ಇದನ್ನೂ ಓದಿ: ಕ್ಷುಲ್ಲಕ ವಿಚಾರಕ್ಕೂ ರಾಜ್ಯಪಾಲರು ರಿಪೋರ್ಟ್ ಕೇಳೋದು ಸರಿಯಲ್ಲ: ಸಿದ್ದರಾಮಯ್ಯ
Advertisement
Advertisement
ಈ ಕುರ್ಚಿ ಅರವಿಂದ್ ಕೇಜ್ರಿವಾಲ್ (Arvind Kejrival) ಅವರಿಗೆ ಸೇರಿದ್ದು, ಫೆಬ್ರವರಿ ಚುನಾವಣೆಯಲ್ಲಿ ದೆಹಲಿಯ ಜನರು ಮತ್ತೊಮ್ಮೆ ಅವರನ್ನು ತಮ್ಮ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುತ್ತಾರೆ ಎಂದು ನನಗೆ ಖಾತ್ರಿಯಿದೆ. ಅಲ್ಲಿಯವರೆಗೆ ಈ ಕುರ್ಚಿ ಈ ಕಚೇರಿಯಲ್ಲಿ ಉಳಿಯುತ್ತದೆ. ಅವರು ಹಿಂದಿರುಗುವವರೆಗೆ ಕಾಯುತ್ತದೆ ಎಂದು ಹೇಳಿದರು.
Advertisement
ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಮತ್ತು ಬಿಜೆಪಿಯ ಸುಷ್ಮಾ ಸ್ವರಾಜ್ ನಂತರ ಅತಿಶಿ ದೆಹಲಿಯ ಎಂಟನೇ ಮತ್ತು ಮೂರನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಅಕ್ರಮ ಅಬಕಾರಿ ನೀತಿಯಲ್ಲಿ ಬಂಧನವಾದ ಬಳಿಕ ಜಾಮೀನಿನ ಮೇಲೆ ಹೊರಬಂದ ಅರವಿಂದ್ ಕೇಜ್ರಿವಾಲ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
माननीय @AtishiAAP जी ने दिल्ली के 8वें मुख्यमंत्री के रूप में संभाला पदभार💯
मुख्यमंत्री आतिशी जी ने उस कुर्सी को खाली छोड़ा है, जिस पर बैठकर @ArvindKejriwal
जी दिल्लीवालों की सेवा करते थे।
आतिशी जी ने फैसला किया है कि यह कुर्सी खाली रहेगी और जैसे भरत जी ने भगवान श्रीराम… pic.twitter.com/OfPFCNGGZr
— AAP (@AamAadmiParty) September 23, 2024
ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ (Virendra Sachdeva) ಅವರು ಅರವಿಂದ್ ಕೇಜ್ರಿವಾಲ್‌ಗೆ ಮೀಸಲಾದ ಖಾಲಿ ಕುರ್ಚಿಯನ್ನು ಪಕ್ಕದಲ್ಲಿ ಇರಿಸಿರುವ ಅತಿಶಿಯ ಇಂಗಿತವನ್ನು ತೀವ್ರವಾಗಿ ಖಂಡಿಸಿದ್ದಾರೆ. ಸಚ್‌ದೇವ ಅವರು ಈ ಕೃತ್ಯವನ್ನು ಸಾಂವಿಧಾನಿಕ ನಿಯಮಗಳ ಉಲ್ಲಂಘನೆ ಮತ್ತು ಮುಖ್ಯಮಂತ್ರಿ ಕಚೇರಿಗೆ ಮಾಡಿದ ಅವಮಾನ ಎಂದು ಬಣ್ಣಿಸಿದ್ದಾರೆ.ಇದನ್ನೂ ಓದಿ: ಅಪಘಾತಕ್ಕೀಡಾದವರ ರಕ್ಷಣೆಗೆ “ಆಪತ್ಕಾಲಯಾನ”: 65 ನೂತನ ಅಂಬುಲೆನ್ಸ್ ಚಾಲನೆ ನೀಡಿದ ಸಿಎಂ
ಮುಖ್ಯಮಂತ್ರಿಗಳ ಟೇಬಲ್‌ನಲ್ಲಿ ಎರಡು ಕುರ್ಚಿಗಳನ್ನು ಇಡುವುದು ಸಂವಿಧಾನ, ನಿಯಮಗಳು ಮತ್ತು ಮುಖ್ಯಮಂತ್ರಿ ಕಚೇರಿಗೆ ಅಗೌರವವಾಗಿದೆ. ಇದು ಅತಿಶಿ ಹೇಳುವಂತೆ ಇದು ಆದರ್ಶವಾದ ಕ್ರಿಯೆಯಲ್ಲ, ಆದರೆ ಇದು ಸ್ಪಷ್ಟವಾದ ಅಸ್ಪಷ್ಟತೆಯಾಗಿದೆ. ಅತಿಶಿ ಅವರು ಮುಖ್ಯಮಂತ್ರಿ ಕಚೇರಿಯ ಘನತೆಗೆ ಅಗೌರವ ತೋರಿದ್ದಾರೆ ಮತ್ತು ಈ ವರ್ತನೆಯಿಂದ ದೆಹಲಿಯ ನಾಗರಿಕರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಸಚ್‌ದೇವ ಟೀಕಿಸಿದ್ದಾರೆ.