ನವದೆಹಲಿ: ಗುಲಾಂ ನಬಿ ಅಜಾದ್ ಬೆನ್ನಲ್ಲೇ ಕೇಂದ್ರದ ಮಾಜಿ ಸಚಿವ ಆನಂದ್ ಶರ್ಮಾ ಅವರು ಹಿಮಾಚಲ ಪ್ರದೇಶ ಕಾಂಗ್ರೆಸ್‌ನ ಸಂಚಾಲಕ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಸಮಾಲೋಚನೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Advertisement
ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅರು ರಾಜೀನಾಮೆ ನೀಡಿದ 5 ದಿನದ ಬಳಿಕ ಆನಂದ್ ಶರ್ಮಾ ರಾಜೀನಾಮೆ ನೀಡಿದ್ದಾರೆ. ಆಜಾದ್ ಅವರು ಆಗಸ್ಟ್ 16 ರಂದು ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥರ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕ ಆನಂದ್ ಶರ್ಮಾ, ಜೆಪಿ ನಡ್ಡಾ ಭೇಟಿ- ಬಿಜೆಪಿ ಸೇರ್ಪಡೆ?
Advertisement
Advertisement
ರಾಜೀನಾಮೆ ನೀಡಿದ್ದರೂ ರಾಜ್ಯದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಆನಂದ್ ಸಿಂಗ್ ಹೇಳಿದ್ದಾರೆ.
Advertisement
ರಾಜ್ಯಸಭೆಯಲ್ಲಿ ಕಾಂಗ್ರೆಸ್‌ನ ಉಪ ನಾಯಕನಾಗಿರುವ ಶರ್ಮಾ ಅವರನ್ನು ಏಪ್ರಿಲ್ 26 ರಂದು ಹಿಮಾಚಲ ಪ್ರದೇಶದ ಸಂಚಾಲಕ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು
ಆಜಾದ್, ಆನಂದ್ ಶರ್ಮಾ, ಭೂಪಿಂದರ್ ಸಿಂಗ್ ಹೂಡಾ ಮತ್ತು ಮನೀಶ್ ತಿವಾರಿ ಸೇರಿದಂತೆ ಹಿರಿಯ ನಾಯಕರು ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಆಂತರಿಕ ಚುನಾವಣೆ ನಡೆಸಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಈ ವರ್ಷಾಂತ್ಯದಲ್ಲಿ ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಹರಸಾಹಸ ಪಡುತ್ತಿದೆ.