ಬೆಂಗಳೂರು: ಪಟ್ಟಭದ್ರಾ ಹಿತಾಸಕ್ತಿಗಳು ವಿಷಯವನ್ನು ರಾಜಕೀಯವಾಗಿ ಹೈಜಾಕ್ ಮಾಡುತ್ತಿವೆ. ರಾಜ್ಯದ ಕೋಮು ಸಂಘರ್ಷ ದೇಶದ ಐಟಿ ಹಬ್‍ಗೆ ಮಾರಕವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಶಾಂತಿಯುತವಾಗಿ ಬಗೆಹರಿಸುವ ವಿಶ್ವಾಸ ನನ್ನದು ಎಂದಿದ್ದಾರೆ ಎಂದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ -ಶಾ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.
Advertisement
ಇಂದು ಬೆಳಗ್ಗೆ ಜಾತ್ರೆ, ಉತ್ಸವ ಸಂದರ್ಭದಲ್ಲಿ ದೇವಸ್ಥಾನಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ನಿಷೇಧಿಸುವಂತೆ ಬಲಪಂಥೀಯ ಗುಂಪುಗಳ ನೀಡಿರುವ ಕರೆಗೆ ಸಂಬಂಧಿಸಿದಂತೆ ಕಿರಣ್ ಮಜುಂದಾರ್-ಶಾ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದರು. ತಂತ್ರಜ್ಞಾನ ಕ್ಷೇತ್ರವು ಕೋಮುವಾದಿಯಾದರೆ ಅದು ಭಾರತದ ಜಾಗತಿಕ ನಾಯಕತ್ವವನ್ನು ನಾಶ ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಮುಖ್ಯಮಂತ್ರಿಗಳೇ, ಕೋಮುಗಳ ನಡುವಿನ ವಿಭಜನೆ ತಡೆಯಿರಿ: ಕಿರಣ್ ಮಜುಂದಾರ್ ಶಾ ಒತ್ತಾಯ
Advertisement
Unfortunately, vested interests are hijacking the issue to political parties. I am confident our CM @BSBommai will resolve the matter peacefully. I am a proud kannadiga n don’t want to see these incidents detract from economic progress. All parties need to work towards this.
— Kiran Mazumdar-Shaw (@kiranshaw) March 31, 2022
Advertisement
ಟ್ವೀಟ್‍ನಲ್ಲೇನಿದೆ?
ಎಲ್ಲಾ ಸಮುದಾಯಗಳನ್ನೂ ಒಳಗೊಂಡ ಆರ್ಥಿಕ ಅಭಿವೃದ್ಧಿಯನ್ನು ಕರ್ನಾಟಕ ರೂಪಿಸಿದೆ. ಇಲ್ಲಿ ಕೋಮುವಾದಕ್ಕೆ ಅನುಮತಿ ನೀಡಬಾರದು. ಐಟಿಬಿಟಿ ಯಂತಹ ಕ್ಷೇತ್ರಗಳಲ್ಲಿ ಕೋಮುವಾದ ಬೆಳೆದರೆ, ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ. ಬಸವರಾಜ ಬೊಮ್ಮಾಯಿ ಅವರೇ, ದಯವಿಟ್ಟು ಕೋಮುಗಳ ನಡುವಿನ ವಿಭಜನೆಯನ್ನು ತಡೆಯಿರಿ. ಇದನ್ನೂ ಓದಿ: ರತನ್ ಟಾಟಾಗೆ ಭಾರತ ರತ್ನ ನೀಡುವಂತೆ ಮನವಿ ಮಾಡಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್
Advertisement
I commend our CM @BSBommai and wholeheartedly agree with him for calling upon “all sections of society to observe restraint before going public on social issues, as they can be resolved through discussions”.
— Kiran Mazumdar-Shaw (@kiranshaw) March 31, 2022
ನಾನು ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ. ರಾಜ್ಯದ ಪರಿಸ್ಥಿತಿಯನ್ನು ಶಾಂತಿಯುತವಾಗಿ ಬಗೆಹರಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಚರ್ಚೆ ನಡೆಸುವ ಕುರಿತು ಸಿಎಂ ತಿಳಿಸಿರುವುದು ಅಭಿನಂದನಾರ್ಹ.