CrimeLatestLeading NewsMain PostNational

ಹಾಸ್ಟೆಲ್ ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಸೆರೆ – ಮೆಸ್ ಸಿಬ್ಬಂದಿಯಿಂದಲೇ ಕೃತ್ಯ

ಗಾಂಧಿನಗರ: ಮೊಹಾಲಿಯಲ್ಲಿರುವ ಚಂಡೀಗಢ ವಿವಿಯಲ್ಲಿ (Chandigarh University) ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಲೀಕ್ ಆದ ಪ್ರಕರಣ (FIR) ತನಿಖೆಯಲ್ಲಿರುವಾಗಲೇ ಅಂತಹದ್ದೇ ಮತ್ತೊಂದು ಪ್ರಕರಣ ಗುಜರಾತ್‌ನ ಸರ್ಕಾರಿ ವಸತಿ ಶಾಲೆಯಲ್ಲಿ (Gujarat Government Residential School) ನಡೆದಿದೆ.

ದಕ್ಷಿಣ ಗುಜರಾತ್‌ (South Gujarat) ನಲ್ಲಿರುವ ಏಕಲವ್ಯ ಕನ್ಯಾ ಸಾಕ್ಷರತಾ ನಿವಾಸ ಶಾಲೆಯಲ್ಲಿ ಹಾಸ್ಟೆಲ್ ಮೆಸ್ (Hostel Mess) ಸಿಬ್ಬಂದಿಯೇ ಹಾಸ್ಟೆಲ್ ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ (Private Video) ಚಿತ್ರೀಕರಿಸಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. 

ವಿದ್ಯಾರ್ಥಿಗಳ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಗುಜರಾತ್ ಪೊಲೀಸರು (Gujarat Police) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ವಿದ್ಯಾರ್ಥಿನಿಯರು ಶಾಲೆಯ ಪ್ರಾಂಶುಪಾಲರಿಗೆ ಹಾಗೂ ಪೊಲೀಸರಿಗೆ ಲಿಖಿತ ಅರ್ಜಿ ಮೂಲಕ ದೂರು ನೀಡಿದ್ದಾರೆ. ಯಾರಾದರೂ ಇಂತಹ ವಿಷಯದಲ್ಲಿ ಭಾಗಿಯಾಗಿದ್ದರೆ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವಲ್ಸಾದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜ್‌ದೀಪ್‌ಸಿನ್ಹ ಝಲಾ ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್ ಪ್ರಕರಣ – ಬಾಯ್‌ಫ್ರೆಂಡ್‌ಗೆ ಹೆದರಿ ವೀಡಿಯೋ ಮಾಡಿದ್ಲು ಸಹಪಾಠಿ

ಏನಿದು ಘಟನೆ?
ಇಲ್ಲಿನ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ (Hostel Girl Students) ಕಳಪೆ ಗುಣಮಟ್ಟದ ಆಹಾರ (Food) ಪೂರೈಕೆ ಮಾಡುತ್ತಿದ್ದಾರೆ. ಅಡುಗೆಯವರು ಹೆಣ್ಣುಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾರೆ. ಬುಡಕಟ್ಟು ಹೆಣ್ಣುಮಕ್ಕಳ ವಿರುದ್ಧ ತಾರತಮ್ಯ ಮಾಡುತ್ತಿದ್ದಾರೆ. ಈಗ ವಿದ್ಯಾರ್ಥಿನಿರು ಸ್ನಾನ ಮಾಡುತ್ತಿರುವುದನ್ನು ವೀಡಿಯೋ ಮಾಡಿದ್ದಾರೆ ಮಾಡಿದ್ದಾರೆ ಎಂದು ಹಾಸ್ಟೆಲ್ ವಿದ್ಯಾರ್ಥಿನಿಯರು ಲಿಖಿತ ದೂರಿನಲ್ಲಿ ಆರೋಪಿಸಿದ್ದಾರೆ. ಆದರೆ ನಾಲ್ವರು ಪುರುಷರು ಅಡುಗೆಯವರಿದ್ದು, ಈ ಪೈಕಿ ಒಬ್ಬನ ಬಳಿ ಮಾತ್ರ ಆಂಡ್ರಾಯ್ಡ್ ಫೋನ್ ಇದೆ. ಮೊಬೈಲ್ ಫೋನ್‌ (Mobile Phone) ಅನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ಲೀಕ್‌ ಕೇಸ್‌ – ಹುಡುಗಿಯ ಬಾಯ್‌ಫ್ರೆಂಡ್‌ ಸಹ ಅರೆಸ್ಟ್‌ 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಶಾಲೆಯ ಪ್ರಾಂಶುಪಾಲರಾದ ನೀತಾ ಚೌಧರಿ, ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡಲಾಗುತ್ತಿದೆ ಅನ್ನೋದು ವಿದ್ಯಾರ್ಥಿಗಳ ಪ್ರಾಥಮಿಕ ದೂರು. ಅಲ್ಲದೇ ಅವರು ಮಹಿಳಾ ಅಡುಗೆ ಸಿಬ್ಬಂದಿಯನ್ನೇ ನೇಮಕ ಮಾಡುವಂತೆ ಬೇಡಿಕೆಯಿಟ್ಟಿದ್ದರು ಎಂದು ತಿಳಿಸಿದ್ದಾರೆ. ತನಿಖೆ ಮುಂದುವರಿದಿದೆ.

Live Tv

Leave a Reply

Your email address will not be published.

Back to top button