ನವದೆಹಲಿ: ದೆಹಲಿ ಲೋಕಸಭಾ ಕ್ಷೇತ್ರಗಳ ಮೈತ್ರಿ ನಿರಾಕರಿಸಿದ ಕಾಂಗ್ರೆಸ್ ವಿರುದ್ಧ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.
ಮುಸ್ತಫಾಬಾದ್ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಕಾಂಗ್ರೆಸ್‍ಗೆ ಮನವಿ ಮಾಡಿದ್ದೆವು. ಆದರೆ ಕಾಂಗ್ರೆಸ್ ನಮ್ಮೊಂದಿಗೆ ಅಹಂಕಾರದಿಂದ ವರ್ತಿಸಿತು. ಹೀಗಾಗಿ ದೆಹಲಿ ಲೋಕಸಭಾ ಕ್ಷೇತ್ರಗಳಿಂದ ಸ್ಪರ್ಧಿಸುವ ಕೈ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ ಎಂದು ಕಿಡಿಕಾರಿದ್ದಾರೆ.
Advertisement
Advertisement
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಮಧ್ಯ ಮತ ವಿಭಜನತೆಯಾಗದಂತೆ ಎಚ್ಚರವಹಿಸಬೇಕು. ದೆಹಲಿಯಲ್ಲಿ ಬಿಜೆಪಿಯನ್ನು ಮಣಿಸುವ ಸಾಮಥ್ರ್ಯ ಎಎಪಿಗೆ ಇದೆ. ಹೀಗಾಗಿ ನಮ್ಮ ಪಕ್ಷಕ್ಕೇ ಮತ ನೀಡಿ ಎಂದು ಕೇಜ್ರಿವಾಲ್ ಮತದಾರರಿಗೆ ಮನವಿ ಮಾಡಿಕೊಂಡರು.
Advertisement
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಸೋಲಿಸಲು ದೇಶದ ಜನರು ಮುಂದಾಗಿದ್ದಾರೆ. ಆದರೆ ಕಾಂಗ್ರೆಸ್ ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸುವ ಮೂಲಕ ಕೇಸರಿ ಬಣಕ್ಕೆ ಸಹಾಯ ಮಾಡುತ್ತಿದೆ ಎಂದರು.
Advertisement
Announcement : Declaration of candidates for the upcoming Loksabha Polls
1. New Delhi – @brijeshgoyalaap
2. East Delhi – @AtishiAAP
3. North East Delhi – @dilipkpandey
4. South Delhi – @raghav_chadha
5. Chandani Chowk – @pankajgupta
6. North West Delhi – @AAPGuganSingh pic.twitter.com/EuNyseK1Fi
— AAP (@AamAadmiParty) March 2, 2019
ಎಎಪಿ ಮುಖಂಡ ಗೋಪಾಲ್ ರೈ ಮಾತನಾಡಿ, ಕಾಂಗ್ರೆಸ್ ಕೇವಲ ದೆಹಲಿಯಲ್ಲಿ ಬಿಜೆಪಿಗೆ ಸಹಾಯ ಮಾಡುತ್ತಿಲ್ಲ. ದೇಶದ ಎಲ್ಲ ರಾಜ್ಯಗಳಲ್ಲಿಯೂ ಬಿಜೆಪಿ ಅಭ್ಯರ್ಥಿ ಜಯಗಳಿಸಲು ಕಾಂಗ್ರೆಸ್ ಸಹಾಯ ಮಾಡುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv