ಕೊಝಿಕೋಡ್: ಕೇರಳದಲ್ಲಿ ಆರ್‍ಎಸ್‍ಎಸ್ ಮತ್ತು ಸಿಪಿಎಂ ನಡುವಿನ ಹಿಂಸಾಚಾರ ಮುಗಿಲು ಮುಟ್ಟಿದೆ. ಮಧ್ಯಪ್ರದೇಶದ ಆರ್‍ಎಸ್‍ಎಸ್ ನಾಯಕ ಚಂದ್ರಾವತ್, ಕೇರಳ ಸಿಎಂ ಪಿಣರಾಯಿ ವಿಜಯನ್ ತಲೆಗೆ ಒಂದು ಕೋಟಿ ಬಹುಮಾನ ಘೋಷಿಸಿದ ಬಳಿಕ ಇದೀಗ ಉರಿದ ಬೆಂಕಿಗೆ ತುಪ್ಪ ಸುರಿದಂತಾಗಿದೆ.
ಈ ಘೋಷಣೆಯ ಬೆನ್ನಲ್ಲೇ ಗುರುವಾರ ಕೇರಳದ ಕೊಝಿಕೋಡ್ ಜಿಲ್ಲೆಯಲ್ಲಿರುವ ಸಿಪಿಎಂ ಕಚೇರಿಗೆ ದುಷ್ಕರ್ಮಿಗಳು ಬಾಂಬ್ ಹಾಕಿದ್ದಾರೆ. ಪರಿಣಾಮ ಕಚೇರಿಯ ಬಾಗಿಲು ಒಡೆದಿದ್ದು, ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಯಾವುದೇ ಸಾವು, ನೋವಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಆದ್ರೆ ಈ ಘನೆಯ ಹಿಂದೆ ಬಿಜೆಪಿ ಹಾಗೂ ಆರ್‍ಎಸ್‍ಎಸ್ ಕೈವಾಡವಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
Advertisement
ಇದಕ್ಕೂ ಮೊದಲು ನಾದಪುರಂ ಜಿಲ್ಲೆಯಲ್ಲಿರುವ ಆರ್‍ಎಸ್‍ಎಸ್ ಕಚೇರಿಯ ಮೇಲೆ ದುಷ್ಕರ್ಮಿಗಳು ಬಾಂಬ್ ಎಸೆದಿದ್ದರು. ಘಟನೆಯಲ್ಲಿ ಇಬ್ಬರು ಆರ್‍ಎಸ್‍ಎಸ್ ಕಾರ್ಯಕರ್ತರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಕೊಝಿಕೋಡ್‍ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
Advertisement
ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಕೃತ್ಯದ ಹಿಂದೆ ಯಾರ ಕೈವಾಡವಿದೆಯೆಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.