ಚಿತ್ರದುರ್ಗ: ಮುರುಘಾ ಮಠಕ್ಕೆ(Muruga Math) ಆಡಳಿತಾಧಿಕಾರಿ ನೇಮಿಸಿ ಎಂದು ಮಠದ ಭಕ್ತರು ಸಲ್ಲಿಸಿದ್ದಾರೆ. ಆ ವಿಚಾರದಲ್ಲಿ ಕಂದಾಯ ಇಲಾಖೆಯಿಂದ(Revenue Department) ಡಿಸಿಯ ವರದಿ ಪಡೆದ ಬಳಿಕ ಅಗತ್ಯ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ(CM Basavaraj Bommai) ತಿಳಿಸಿದರು.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಪೂರ್ವದಲ್ಲಿ ಮಠದಲ್ಲಿ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯುತ್ತಿದೆ. ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದೇವೆ. ಆ ವರದಿ ಬಂದ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
Advertisement
Advertisement
ಮಾಜಿ ಸಿಎಂ ಯಡಿಯೂರಪ್ಪ ಮುರುಘಾಶ್ರೀ ಪ್ರಕರಣದ ಬಗ್ಗೆ ಅಕ್ಷಮ್ಯ ಅಪರಾದವೆಂದಿದ್ದಾರೆಂದು ಸಿಎಂಗೆ ಪ್ರಶ್ನಿಸಿದಾಗ, ಮುರುಘಾ ಶ್ರೀ ಪ್ರಕರಣ ನ್ಯಾಯಾಲಯದಲ್ಲಿದೆ. ಹೀಗಾಗಿ ಅದರ ಬಗ್ಗೆ ವ್ಯಾಖ್ಯಾನ ಮಾಡುವುದಿಲ್ಲ. ಆ ವಿಚಾರದಲ್ಲಿ ನ್ಯಾಯಾಲಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕೂದಲು ಉದುರುತ್ತಿದೆ ಎಂದು ಮನನೊಂದ ಯುವಕ ಡೆತ್‍ನೋಟ್ ಬರೆದು ಆತ್ಮಹತ್ಯೆ
Advertisement
ಸತೀಶ್ ಜಾರಕಿಹೊಳಿ(Satish Jarkiholi) ಹೇಳಿಕೆಗೆ ಪ್ರತಿಕ್ರಿಯಿದ ಅವರು, ಶತಮಾನಗಳಿಂದ ನಂಬಿಕೆ, ವಿಶ್ವಾಸದ ಮೇಲೆ ಧರ್ಮ ನಡೆಯುತ್ತದೆ. ಸ್ಥಾಪಿತವಾಗಿರುವ ನಂಬಿಕೆಗಳಿಗೆ ಕೊಡಲಿ ಏಟು ಕೊಡುವ ಕೆಲಸ ಮಾಡಿದ್ದಾರೆ. ಅದರ ಮೇಲೆ ಚರ್ಚೆ ಮಾಡುವುದೇನಿದೆ? ತಾಂತ್ರಿಕವಾಗಿ ಅವರ ಶಾಲಾ, ಕಾಲೇಜುಗಳ ಪ್ರಮಾಣಪತ್ರದಲ್ಲಿ ಹಿಂದೂ ಎಂದೇ ನಮೂದಾಗಿದೆ. ನಂಬಿಕೆಗಳು ಶತಮಾನಗಳಿಂದ ಇದೆ. ಜನರ ನಂಬಿಕೆಯನ್ನು ಘಾಸಿ ಮಾಡುವಂಥ ಕೆಲಸ ಮಾಡಿ ಪುನ: ಚರ್ಚೆ ಮಾಡುವುದು ಏನೂ ಇಲ್ಲ. ಅವರ ಕ್ಷಮೆಯೂ ಬೇಕಾಗಿಲ್ಲ. ಜನ ತೀರ್ಮಾನ ಮಾಡುತ್ತಾರೆ ಎಂದು ಕಿಡಿಕಾರಿದರು.
Advertisement
ಜನಸಂಕಲ್ಪ ಯಾತ್ರೆಯಲ್ಲಿ ಜನರೇ ಸೇರುತ್ತಿಲ್ಲ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ನಾನು ಈ ಮೂಲಕ ಅವರಿಗೆ ಆಹ್ವಾನ ನೀಡುತ್ತೇನೆ. ಯಾತ್ರೆಗೆ ಬಂದು ನೋಡಲಿ. ಎಲ್ಲಾ ಮಾಧ್ಯಮದಲ್ಲಿ ತೋರಿಸುವ ಜನಸಾಗರವೇ ಇದಕ್ಕೆ ಉತ್ತರವಾಗಿದ್ದು ಈ ಜನಸಂಕಲ್ಪ ಯಾತ್ರೆ ಮುಂದೆ ವಿಜಯಸಂಕಲ್ಪವಾಗಿ ಪರಿವರ್ತನೆಯಾಗಲಿದೆ ಎಂದು ತಿರುಗೇಟು ನೀಡಿದರು.