ತುಮಕೂರು: ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದ ಸಿದ್ದಗಂಗಾ ಶ್ರೀಗಳು ಇಂದು ವಿಶ್ರಾಂತಿಯಿಂದ ಎದ್ದು ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ.
ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಕಳೆದ 13 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಗಂಗಾ ಶ್ರೀಗಳು ಗುಣಮುಖರಾಗಿ ಬುಧವಾರ ಶ್ರೀಮಠಕ್ಕೆ ವಾಪಸ್ಸಾಗಿದ್ದರು. ಇಂದು ಮುಂಜಾನೆಯೇ ವಿಶ್ರಾಂತಿಯಿಂದ ಇದ್ದ ಶ್ರೀಗಳು ಸ್ನಾನ ಮುಗಿಸಿ ಬಳಿಕ ಇಷ್ಟಲಿಂಗಕ್ಕೆ ಪೂಜೆ ಸಲ್ಲಿಸಿದ್ದಾರೆ. ಎಂದಿನಂತೆ ಶ್ರೀಗಳು ಇಡ್ಲಿ, ಹಣ್ಣು ಹಂಪಲನ್ನು ಸೇವಿಸಿದ್ದು, ಸಿದ್ದಗಂಗಾ ಆಸ್ಪತ್ರೆ ವೈದ್ಯರು ಶ್ರಿಗಳ ಆರೋಗ್ಯದ ಮೇಲೆ ನಿಗಾವಹಿಸುತ್ತಿದ್ದಾರೆ.
Advertisement
Advertisement
ಆಸ್ಪತ್ರೆಯಲ್ಲಿಯೇ ಶ್ರೀಗಳಿಗೆ ಇನ್ನೂ ಕೆಲದಿನಗಳ ವಿಶ್ರಾಂತಿ ಅವಶ್ಯಕತೆ ಇದ್ದರೂ ಶ್ರಿಗಳು ಮಠ ಹಾಗೂ ವಿದ್ಯಾರ್ಥಿಗಳನ್ನು ನೋಡುವ ಹಂಬಲ ವ್ಯಕ್ತಪಡಿಸಿದ್ದರು. ಹಾಗಾಗಿ ತುರ್ತಾಗಿ ಶ್ರೀಮಠಕ್ಕೆ ಕರೆದುಕೊಂಡು ಬರಲಾಗಿತ್ತು. ಸಿದ್ದಗಂಗಾ ಶ್ರೀಗಳನ್ನು ಕರೆದುಕೊಂಡು ಬರಲು ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರಿಂದ ಯಾವುದೇ ತೊಂದರೆ ಇಲ್ಲದೇ ಶ್ರೀಗಳು ಶ್ರೀಮಠಕ್ಕೆ ಬಂದು ತಲುಪಿದ್ದರು.
Advertisement
ಸ್ವಾಮೀಜಿಗೆ ಶಸ್ತ್ರಚಿಕಿತ್ಸೆ ಮಾಡಿದ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅವರು ಮೊದಲಿನ ತರ ಊಟ, ಪೂಜೆ ಮಾಡುತ್ತಿದ್ದಾರೆ. ಎಂದಿನಂತೆ ತಮ್ಮ ನಿತ್ಯದ ಕೆಲಸಗಳನ್ನು ಹಾಗೂ ಪೂಜೆಗಳನ್ನು ಮುಗಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv