ಸ್ಯಾಂಡಲ್‌ವುಡ್‌ನ ಜೋಡಿಹಕ್ಕಿಗಳಾಗಿದ್ದ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ (Niveditha Gowda) ಜೂನ್ 7ರಂದು ಕಾನೂನು ಬದ್ಧವಾಗಿ (Divorce) ಪರಸ್ಪರ ಒಪ್ಪಿಗೆಯ ಮೇರೆಗೆ ಬೇರೆಯಾಗಿದ್ದಾರೆ. ಈ ವಿಚಾರ ಫ್ಯಾನ್ಸ್‌ಗೆ ಇನ್ನೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಿರುವಾಗ ಚಂದನ್ ಮತ್ತು ನಿವೇದಿತಾ ದಿಢೀರ್ ಡಿವೋರ್ಸ್ ಬಳಿಕ ಗೂಗಲ್‌ನಲ್ಲಿ ಟಾಪ್ ಟ್ರೆಂಡಿಂಗ್‌ನಲ್ಲಿದ್ದಾರೆ. ಇದನ್ನೂ ಓದಿ:ಡಿವೋರ್ಸ್ ನಂತರ ‘ಕ್ಯಾಂಡಿ ಕ್ರಶ್’ ಸಿನಿಮಾದಲ್ಲಿ ಚಂದನ್, ನಿವೇದಿತಾ ನಟಿಸುತ್ತಾರಾ?
ಪ್ರೀತಿಸಿ ಮದುವೆಯಾಗಿದ್ದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಜೋಡಿಯು ಯಾವ ವಿಚಾರಕ್ಕೆ ಡಿವೋರ್ಸ್ ಪಡೆದಿದ್ದಾರೆ ಎಂಬುದು ಅನೇಕರಿಗೆ ಚಿಂತೆ ಶುರುವಾಗಿದೆ. ಅದಕ್ಕೆ ಕಾರಣವಾದ ಅಂಶಗಳು ಏನು ಎಂದು ತಿಳಿದುಕೊಳ್ಳುವ ಕುತೂಹಲ ಅವರ ಅಭಿಮಾನಿಗಳಲ್ಲಿದೆ. ಹೀಗಾಗಿ ಇಂಟರ್‌ನೆಟ್‌ನಲ್ಲಿ ಚಂದನ್ ಶೆಟ್ಟಿ, ನಿವೇದಿತಾ ಗೌಡ ಟ್ರೆಂಡಿಂಗ್‌ನಲ್ಲಿದ್ದಾರೆ.
ಡಿವೋರ್ಸ್ ಘೋಷಣೆಯ ಬಳಿಕ ಜೂನ್ 7ರಿಂದ ಗೂಗಲ್‌ನಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ಅವರನ್ನ ಇಂಟರ್‌ನೆಟ್‌ನಲ್ಲಿ ಜನ ಹೆಚ್ಚು ಹುಡುಕುತ್ತಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾ ಕನ್ನಡಿಗರು, ಕರ್ನಾಟಕದವರು. ಹೀಗಾಗಿ, ಕರ್ನಾಟಕದಲ್ಲೇ ಇಬ್ಬರೂ ಟಾಪ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕರ್ನಾಟಕದಲ್ಲಿ ಶೇ.100ರಷ್ಟು ಇಂಟರ್‌ನೆಟ್ ಬಳಸುವ ಮಂದಿ ಚಂದನ್ ಶೆಟ್ಟಿ, ನಿವೇದಿತಾ ಗೌಡ ಬಗ್ಗೆ ಹುಡುಕಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಡಿವೋರ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ನಿವೇದಿತಾ ಗೌಡ, ಚಂದನ್ ಶೆಟ್ಟಿ, ಲವ್, ಡಿವೋರ್ಸ್, ಮದುವೆ ಬಗ್ಗೆ ಹೆಚ್ಚು ಸರ್ಚ್ ಆಗಿದೆ. ಈ ಮೂಲಕ ಇಬ್ಬರೂ ಟ್ರೆಂಡಿಂಗ್‌ನಲ್ಲಿದ್ದಾರೆ.
ಅಂದಹಾಗೆ, ಬಿಗ್ ಬಾಸ್ ಕನ್ನಡ ಸೀಸನ್ 5ರಲ್ಲಿ (Bigg Boss Kannada 5) ಇಬ್ಬರೂ ಪರಿಚಿತರಾದರು. ಬಳಿಕ 2019ರಲ್ಲಿ ಮೈಸೂರು ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ನಿವೇದಿತಾಗೆ (Niveditha Gowda) ಚಂದನ್ ಪ್ರಪೋಸ್ ಮಾಡಿದ್ದರು. ಎರಡು ಕುಟುಂಬದ ಒಪ್ಪಿಗೆ ಪಡೆದು 2020ರಲ್ಲಿ ಚಂದನ್ ಮತ್ತು ನಿವೇದಿತಾ ಮೈಸೂರಿನಲ್ಲಿ ಅದ್ಧೂರಿಯಾಗಿ ಮದುವೆಯಾಗಿದ್ದರು.